
ಬೆಂಗಳೂರು, (ಜು.27): ಬಿಎಸ್ ಯಡಿಯೂರಪ್ಪ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದೆ.
ಕೊನೆಗೂ ಅಳೆದು ತೂಗಿ ಬಿಜೆಪಿ ಹೈಕಮಾಂಡ್ ಅಂತಿಮವಾಗಿ ನಿರೀಕ್ಷೆಯಂತೆ ಲಿಂಗಾಯತ ನಾಯಕನಿಗೆ ಮಣೆಹಾಕಿದ್ದು. ಬಸವರಾಜ ಬೊಮ್ಮಾಯಿ ಅವರ ಹೆಸರನ್ನು ಅಂತಿಮಗೊಳಿಸಿದೆ.
'ಲಿಂಗಾಯತರನ್ನೇ ಸಿಎಂ ಮಾಡ್ಬೇಕು, ಅನ್ಯ ಜಾತಿಯವರಾದ್ರೆ ಸರ್ಕಾರ ಉಳಿಯಲ್ಲ'
ಇಂದು (ಮಂಗಳವಾರ) ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಸರ್ವಾನುಪಮತದಿಂದ ಬಸವರಾಜ ಬೊಮ್ಮಾಯಿ ಅವರನ್ನ ಆಯ್ಕೆ ಮಾಡಲಾಗಿದೆ.
ಬಿಎಸ್‌ವೈ ಆಪ್ತರಾಗಿರುವ ಬಸವರಾಜ ಬೊಮ್ಮಾಯಿ ಅವರು ನಾಳೆಯೇ ಅಂದ್ರೆ ಜುಲೈ.28ರಂದು ಮಧ್ಯಾಹ್ನ 3.30ಕ್ಕೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.