ಬೆಂಗಳೂರು (ಡಿ.7): ಡಿಸೆಂಬರ್ 10 ರಂದು ವಿಧಾನ ಪರಿಷತ್ (Legislative Council ) ಚುನಾವಣೆ ನಡೆಯಲಿದೆ. 25 ಸ್ಥಾನಗಳಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಡಿಸೆಂಬರ್ 8ರ ಸಂಜೆ 4 ಗಂಟೆಯಿಂದ ಡಿಸೆಂಬರ್ 10 ರ ಮಧ್ಯರಾತ್ರಿವರೆಗೆ 3 ದಿನಗಳ ಕಾಲ ವೈನ್ ಸ್ಟೋರ್ (wine shop)ಮತ್ತು ಬಾರ್ (Liquor shops) ಗಳನ್ನು ಮುಚ್ಚುವಂತೆ ಆದೇಶ ಹೊರಡಿಸಲಾಗಿದೆ. ಮುಖ್ಯ ಚುನಾವಣಾಧಿಕಾರಿಗಳ (Chief Electoral Officer) ಈ ಸೂಚನೆಯನ್ನು ರಾಜ್ಯಾದ್ಯಂತ ಮದ್ಯ ಮಾರಾಟಗಾರರು (Wine merchants) ಖಂಡಿಸಿದ್ದಾರೆ. ಮೂರು ದಿನಗಳ ಕಾಲ ಮದ್ಯ ಮಾರಾಟ ಮಾಡಲು ನಿಷೇಧ ಹೇರಿರುವುದು ಭಾರೀ ನಷ್ಟವಾಗಲಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಸಾರ್ವತ್ರಿಕ ಚುನಾವಣೆಗಿಂತ ಭಿನ್ನವಾಗಿ ಮತದಾರರ ಸಂಖ್ಯೆ ಕಡಿಮೆ ಇರುವ ಹಿನ್ನೆಲೆಯಲ್ಲಿ ಮದ್ಯದಂಗಡಿಗಳನ್ನು ಮುಚ್ಚಬೇಡಿ ಎಂದು ಕೋರಿ ಕರ್ನಾಟಕ ವೈನ್ ಮಾರಾಟಗಾರರ ಒಕ್ಕೂಟವು (Federation of Wine Merchants and Association) ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿದೆ.
undefined
MLC Election: ಜೆಡಿಎಸ್-ಬಿಜೆಪಿ ಹೊಂದಾಣಿಕೆ, ಅಂತಿಮ ತೀರ್ಪು ಮುಂದೂಡಿದ ಕುಮಾರಸ್ವಾಮಿ
"ಈ ಚುನಾವಣೆಯಲ್ಲಿ ರಾಜ್ಯದಲ್ಲಿ ಒಟ್ಟು ಮತದಾರರ ಸಂಖ್ಯೆ 99,062 ಮಾತ್ರ. ಮತ್ತು ಎಲ್ಲಾ ಮತದಾರರು ವಿವಿಧ ಸ್ತರದ ಜನರನ್ನು ಪ್ರತಿನಿಧಿಸುವ ವಿದ್ಯಾವಂತ ಮತದಾರರಾಗಿದ್ದಾರೆ" ಎಂದು ಫೆಡರೇಶನ್ ತನ್ನ ಪತ್ರದಲ್ಲಿ ಉಲ್ಲೇಖಿಸಿದೆ.
MLC Election 2021: ಬಗೆಹರಿಯದ ಜೆಡಿಎಸ್-ಬಿಜೆಪಿ ಹೊಂದಾಣಿಕೆ
25 ವಿಧಾನ ಪರಿಷತ್ ಸ್ಥಾನಗಳಿಗೆ ಡಿಸೆಂಬರ್ 10ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಡಿಸೆಂಬರ್ 14ಕ್ಕೆ ಮತ ಎಣಿಕೆ (vote counting) ನಡೆದು, ಫಲಿತಾಂಶ ಹೊರ ಬೀಳಲಿದೆ. ರಾಜ್ಯದಲ್ಲಿ ಮತಗಟ್ಟೆಗಳ (polling booth) ಸಂಖ್ಯೆ ಕೇವಲ 6,072 ಮತ್ತು ಪ್ರತಿ ಬೂತ್‌ನಲ್ಲಿ ಚಲಾವಣೆಯಾಗುವ ಮತಗಳ ಸರಾಸರಿ ಸಂಖ್ಯೆ 16 ರಷ್ಟಿದೆ ಎಂದು ಫೆಡರೇಶನ್ ಹೇಳಿದೆ.
Mandya politics: ಮಗನ ಸೋಲಿಗೆ ಪ್ರತ್ಯುತ್ತರ ನೀಡುವ ಮಾತುಗಳನ್ನಾಡಿದ ಕುಮಾರಸ್ವಾಮಿ
ತೆರವಾಗುತ್ತಿರುವ 25 ಎಂಎಲ್‌ಸಿ ಸ್ಥಾನಗಳ ವಿವರ:-
ಬಿಜೆಪಿಯ-6
ಬಿಜೆಪಿ ಬೆಂಬಲಿತ ಪಕ್ಷೇತರ ಸದಸ್ಯ-1
ಕಾಂಗ್ರೆಸ್-13.
ವಿವಿಧ ಕ್ಷೇತ್ರಗಳಿಂದ ಆಯ್ಕೆಯಾಗಿದ್ದ 25 ವಿಧಾನ ಪರಿಷತ್ ಸದಸ್ಯರ 6 ವರ್ಷದ ಅಧಿಕಾರಾವಧಿ ಹೊಸ ವರ್ಷದ ಆರಂಭದಲ್ಲಿ ಕೊನೆಗೊಳ್ಳಲಿದೆ. ಸದ್ಯ ವಿಧಾನ ಪರಿಷತ್ನಲ್ಲಿ ದೊಡ್ಡ ಪಕ್ಷವಾಗಿರುವ ಬಿಜೆಪಿ ಆಡಳಿತ ಪಕ್ಷವಾಗಿಯೂ ತನ್ನ ಬಲ ಹೊಂದಿದೆ. 75 ಸದಸ್ಯರ ಬಲ ಹೊಂದಿರುವ ವಿಧಾನ ಪರಿಷತ್ನಲ್ಲಿ ಸದ್ಯ ಯಾವುದೇ ಸ್ಥಾನ ತೆರವಾಗಿಲ್ಲ. 75ರ ಪೈಕಿ ಬಿಜೆಪಿ ಒಬ್ಬ ಪಕ್ಷೇತರ (ಅಭಯ್ ಪಾಟೀಲ್) ಬೆಂಬಲದೊಂದಿಗೆ ಒಟ್ಟು 33 ಸದಸ್ಯರ ಬಲ ಹೊಂದಿದೆ.
Ramesh Jarkiholi V/S Siddu: ಎಲ್ಲರ ಹುಬ್ಬೇರುವಂತೆ ಮಾಡಿದ ಜಾರಕಿಹೊಳಿ ಮಾತುಗಳು
ಉಳಿದಂತೆ ಕಾಂಗ್ರೆಸ್ನ 29 ಹಾಗು ಜೆಡಿಎಸ್ನ 13 ಮಂದಿ ಸದಸ್ಯರಿದ್ದಾರೆ. ಇದೀಗ ಇವರಲ್ಲಿ ಶಿಕ್ಷಕ, ಪದವೀಧರ ಕ್ಷೇತ್ರದ ಸದಸ್ಯರೂ ಸೇರಿದಂತೆ ಒಟ್ಟು 25 ಸ್ಥಾನಗಳು ತೆರವಾಗುತ್ತಿವೆ. ಇದನ್ನು ತುಂಬಿಕೊಳ್ಳಲು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಹರಸಾಹಸ ನಡೆಸುತ್ತಿವೆ.ಇದರಲ್ಲಿ ವಿಧಾನಸಭೆಯಿಂದ ವಿಧಾನ ಪರಿಷತ್ಗೆ ಸ್ಥಳೀಯ ಸಂಸ್ಥೆಗಳಿಂದ ಪರಿಷತ್ಗೆ ಸೇರಿದಂತೆ ವಿವಿಧ ವಿಭಾಗಗಳಿಂದ ಸದಸ್ಯರ ಆಯ್ಕೆ ನಡೆಯಲಿದೆ.
Tears Politics: ಇನ್ಮುಂದೆ ಕಣ್ಣೀರು ಹಾಕಲ್ಲ, ಕುಮಾರಸ್ವಾಮಿ ಶಪಥ
ಬಿಜೆಪಿ ವಿಧಾನಸಭೆಯಲ್ಲಿ ಹೆಚ್ಚು ಸದಸ್ಯ ಬಲ ಹೊಂದಿರುವುದರಿಂದ ಒಂದಿಷ್ಟು ಹೆಚ್ಚುವರಿ ಸ್ಥಾನ ಗಳಿಸುವ ನಿರೀಕ್ಷೆ ಹೊಂದಿದೆ.75 ಸದಸ್ಯರ ಬಲವಿರುವ ವಿಧಾನ ಪರಿಷತ್ನಲ್ಲಿ ಸದ್ಯ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ, ಸ್ವತಂತ್ರವಾಗಿ ನಿರ್ಧಾರ ಕೈಗೊಳ್ಳುವ ಸದಸ್ಯ ಬಲ ಬಿಜೆಪಿಗೆ ಇಲ್ಲ. ಯಾವುದೇ ವಿಧೇಯಕವನ್ನು ಸ್ವತಂತ್ರವಾಗಿ ಅಂಗೀಕಾರ ಪಡೆಯಲು ಬಿಜೆಪಿ 38 ಸದಸ್ಯರ ಬಲ ಹೊಂದಲೇಬೇಕಾದ ಅನಿವಾರ್ಯತೆ ಇದೆ. ಸದ್ಯ 33 ಸದಸ್ಯರ ಬಲ ಹೊಂದಿದ್ದು, ಜತೆಗೆ ಜೆಡಿಎಸ್ ಬೆಂಬಲದೊಂದಿಗೆ ಅಧಿಕಾರ ನಡೆಸುತ್ತಿದೆ. ಸಭಾಪತಿ ಸ್ಥಾನವನ್ನು ಸಹ ಜೆಡಿಎಸ್ಗೆ ಬಿಟ್ಟುಕೊಟ್ಟಿದೆ.
ಈಗಿರುವ ಬಿಜೆಪಿ ಸದಸ್ಯರ ಪಟ್ಟಿ
* ಬಿಜೆಪಿ- ಕೋಟಾ ಶ್ರೀನಿವಾಸ ಪೂಜಾರಿ- ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
* ಬಿ.ಜಿ. ಪಾಟೀಲ್-ಕಲಬುರಗಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
* ಪ್ರದೀಪ್ ಶೆಟ್ಟರ್- ಧಾರವಾಡ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
* ಎಂ.ಕೆ. ಪ್ರಾಣೇಶ್ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
* ಸುನೀಲ್ ಸುಬ್ರಹ್ಮಣಿ ಮಂಡೇಪಂಡ-ಬಳ್ಳಾರಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
* ಮಹಂತೇಶ್ ಕವಟಗಿಮಠ (ಮುಖ್ಯ ಸಚೇತಕ)- ಬೆಳಗಾವಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
* ಅಭಯ್ ಪಾಟೀಲ್ (ಪಕ್ಷೇತರ)- ಬೆಳಗಾವಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
ಕಾಂಗ್ರೆಸ್ ಪಟ್ಟಿ ಇಂತಿದೆ.
* ಎಸ್.ಆರ್. ಪಾಟೀಲ್ (ಪ್ರತಿಪಕ್ಷ ನಾಯಕ)- ವಿಜಯಪುರ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
* ಪ್ರತಾಪ್ ಚಂದ್ರ ಶೆಟ್ಟಿ- ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
* ಶ್ರೀಕಾಂತ್ ಲಕ್ಷ್ಮಣ್ ಘೋಟ್ನೇಕರ್- ಉತ್ತರ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
* ಶ್ರೀನಿವಾಸ್ ಮಾನೆ (ಹಾಲಿ ಶಾಸಕ-ಹಾನಗಲ್)- ಧಾರವಾಡ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
* ಆರ್. ಧರ್ಮಸೇನ-ಮೈಸೂರು ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
* ವಿಜಯ್ ಸಿಂಗ್- ಬೀದರ್ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
* ಬಸವರಾಜ್ ಪಾಟೀಲ್ ಇಟಗಿ- ರಾಯಚೂರು ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
*ಕೆ.ಸಿ. ಕೊಂಡಯ್ಯ-ಬಳ್ಳಾರಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
* ಆರ್. ಪ್ರಸನ್ನಕುಮಾರ್- ಶಿವಮೊಗ್ಗ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
*ಎಂ.ಎ. * ಗೋಪಾಲಸ್ವಾಮಿ-ಹಾಸನ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
* ಎಂ. ನಾರಾಯಣಸ್ವಾಮಿ-ಬೆಂಗಳೂರು ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
* ಎಸ್.ರವಿ- ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
* ರಘು ಆಚಾರ್- ಚಿತ್ರದುರ್ಗ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ
ಜೆಡಿಎಸ್ ಪಟ್ಟಿ
* ಎನ್.ಅಪ್ಪಾಜಿ ಗೌಡ- ಮಂಡ್ಯ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
* ಸಂದೇಶ್ ನಾಗರಾಜ್-ಮೈಸೂರು ಸಂಸ್ಥೆಗಳ ಪ್ರತಿನಿಧಿ,
* ಬಸವರಾಜ ಹೊರಟ್ಟಿ (ಸಭಾಪತಿ)- ಪಶ್ಚಿಮ ಶಿಕ್ಷಕರ ಕ್ಷೇತ್ರ ಪ್ರತಿನಿಧಿ.
* ಸಿ.ಆರ್. ಮನೋಹರ್- ಕೋಲಾರ ಸಂಸ್ಥೆಗಳ ಪ್ರತಿನಿಧಿ.
* ಕಾಂತರಾಜು (ಬಿಎಂಎಲ್)- ತುಮಕೂರು ಸಂಸ್ಥೆಗಳ ಪ್ರತಿನಿಧಿ.