‘ರೈತರ ಸಾಲಮನ್ನಾ ಶ್ರೇಯಸ್ಸು ಕಾಂಗ್ರೆಸ್‌ಗೆ ಸಲ್ಲಬೇಕು’

Published : Jul 30, 2018, 06:00 PM ISTUpdated : Jul 30, 2018, 06:07 PM IST
‘ರೈತರ ಸಾಲಮನ್ನಾ ಶ್ರೇಯಸ್ಸು ಕಾಂಗ್ರೆಸ್‌ಗೆ ಸಲ್ಲಬೇಕು’

ಸಾರಾಂಶ

ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ದೊಡ್ಡ ಪಾರ್ಟ್ನರ್ ಸಮ್ಮಿಶ್ರ ಸರ್ಕಾರ ರಚಿಸುವ ಅವಶ್ಯಕತೆಯಿತ್ತು;ಮೈತ್ರಿ ಧರ್ಮ ಪಾಲನೆ ಮಾಡುತ್ತೇವೆ 

ಬೀದರ್: ಸಮ್ಮಿಶ್ರ  ಸರ್ಕಾರದಲ್ಲಿ ಏನೇ ಒಳ್ಳೆ ಕೆಲಸ ಆದ್ರೂ ಅದರ ಶ್ರೇಯಸ್ಸು ನಮಗೆ ಸಲ್ಲಬೇಕು, ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.

ಸಮ್ಮಿಶ್ರ ಸರ್ಕಾರದಲ್ಲಿ ದೊಡ್ಡ ಪಾರ್ಟ್ನರ್ ನಾವಿದ್ದೇವೆ. ನಾವು ಡಬಲ್ ಸೀಟ್‌ಗಳನ್ನು ಹೊಂದಿದ್ದೇವೆ. ರೈತರ ಸಾಲಮನ್ನಾ ನಾವೇ ಮಾಡಿದ್ದೇವೆ ಅಂತ ಹೇಳಿಕೊಳ್ಳಿ ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. 

ಬೀದರ್ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಬೀದರ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ನೂತನ ಕಾರ್ಯಾಧ್ಯಕ್ಷರ ಅಭಿನಂದನಾ ಸಮಾರಂಭದ ಭಾಷಣ ವೇಳೆ ಈಶ್ವರ್ ಖಂಡ್ರೆ ಈ ಹೇಳಿಕೆ ನೀಡಿದ್ದಾರೆ.

ನಾವು 78 ಜನ ಶಾಸಕರಿದ್ದೇವೆ, ಅವರು 37 ಜನ ಶಾಸಕರಿದ್ದಾರೆ. ನಾವು ಅವರಿಗಿಂತ ಡಬಲ್ ಇದ್ದೀವಿ ಸರ್ಕಾರ ಮಾಡುವ ಅನಿವಾರ್ಯತೆ ಇತ್ತು, ಅವಶ್ಯಕತೆಯಿಂದ ಸಮ್ಮಿಶ್ರ ಸರ್ಕಾರ ರಚನೆ ಮಾಡಿದ್ದೇವೆ. ಅದಕ್ಕೆ ಸಮ್ಮಿಶ್ರ ಧರ್ಮದ ಪಾಲನೆ ನಾವು ಮಾಡುತ್ತೇವೆ, ಎಂದು ಖಂಡ್ರೆ ಹೇಳಿದ್ದಾರೆ. 

ಪಕ್ಷ ಬಲವರ್ಧನೆ ಮಾಡುವುದು ದೊಡ್ಡ ಕೆಲಸ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ, ಗುಂಪುಗಾರಿಕೆ ಇಲ್ಲ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವುದೇ ನಮ್ಮ ಮುಖ್ಯ ಗುರಿ ಎಂದು ಅವರು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ
ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ