
ಚಿತ್ರದುರ್ಗ (ಏ.21): ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಗೋವಿಂದ ಕಾರಜೋಳ ಗೆದ್ದಾಗಿದೆ. ಈ ಬಾರಿ ರಾಜ್ಯದಲ್ಲಿ 28 ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ. ದೇಶದಲ್ಲಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ನುಡಿದರು.
ಇಂದು ಭರಮಸಾಗರದಲ್ಇ ನಡೆದ ಬಿಜೆಪಿ ಅಭ್ಯರ್ಥಿ ಪರ ಪ್ರಚಾರದ ಸಭೆಯಲ್ಲಿ ಮಾತನಾಡಿದರು. ಇದೇ ವೇಳೆ 'ಪ್ರಧಾನಿ ಮೋದಿ ದೇಶಕ್ಕೆ ಅಂಟಿದ ಶನಿ' ಎಂಬ ಹೇಳಿಕೆ ಪ್ರಸ್ತಾಪಿಸಿ ತಿರುಗೇಟು ನೀಡಿದ ಬಿಎಸ್‌ವೈ, ರಮೇಶ್ ಕುಮಾರ ಅವರಂಥವರಿಗೆ ಉತ್ತರ ಕೊಡುವ ಅಗತ್ಯವಿಲ್ಲ. ಚುನಾವಣೆ ಫಲಿತಾಂಶವೇ ಅವರಿಗೆ ಉತ್ತರ ಕೊಡುತ್ತದೆ. ಮತ್ತೊಮ್ಮೆ ಮೋದಿ ಪ್ರಧಾನಿ ಆಗುವುದನ್ನ ಅವರು ನೋಡಲಿದ್ದಾರೆ ಟಾಂಗ್ ನೀಡಿದರು.
ಏ.23ಕ್ಕೆ ಚಿತ್ರದುರ್ಗ, ಬೆಂಗಳೂರಲ್ಲಿ ಪ್ರಿಯಾಂಕಾ ಗಾಂಧಿ ಚುನಾವಣಾ ಪ್ರಚಾರ
ಬಿಎಸ್‌ಯಡಿಯೂರಪ್ಪ ಬಿಜೆಪಿ ಅಭ್ಯರ್ಥಿ ಕಾರಜೋಳ ಪರ ಭರ್ಜರಿಯಾಗಿ ಮತಯಾಚನೆ ನಡೆಸಿದರು. ಭರಮಸಾಗರ ಭಾಗದಲ್ಲಿ ಲಿಂಗಾಯತ ಮತಗಳು ನಿರ್ಣಾಯಕವಾಗಿವೆ. ಈ ಹಿನ್ನೆಲೆ ಲಿಂಗಾಯತ ಮತಗಳನ್ನು ಸೆಳೆಯುವ ನಿಟ್ಟಿನಲ್ಲಿ ಇಂದು ಅಖಾಡಕ್ಕೆ ಇಳಿದ ಬಿಎಸ್‌ವೈ. ಈ ವೇಳೆ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ, ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ, ಮಾಜಿ ಶಾಸಕ ಎಸ್ ಕೆ ಬಸವರಾಜನ್ ಸೇರಿ ಗಣ್ಯರು ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.