ರಾಮಕೃಷ್ಣ ಮಿಷನ್ ಮತ್ತು ಭಾರತ ಸೇವಾಶ್ರಮ ಸಂಘದ ವಿರುದ್ಧ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾಡಿರುವ ಟೀಕೆಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ಟಿಎಂಸಿ ತನ್ನ ಮುಸ್ಲಿಂ ವೋಟ್ ಬ್ಯಾಂಕ್ ಅನ್ನು ಸಮಾಧಾನಪಡಿಸಲು ಈ ಸಾಮಾಜಿಕ-ಧಾರ್ಮಿಕ ಸಂಘಟನೆಗಳ ವಿರುದ್ಧ ಬೆದರಿಕೆ ಹಾಕಲು ಆರಂಭಿಸಿದೆ’ ಎಂದು ಗುಡುಗಿದ್ದಾರೆ.
ಪಿಟಿಐ ಪುರುಲಿಯಾ/ಬಿಷ್ಣುಪುರ
ರಾಮಕೃಷ್ಣ ಮಿಷನ್ ಮತ್ತು ಭಾರತ ಸೇವಾಶ್ರಮ ಸಂಘದ ವಿರುದ್ಧ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾಡಿರುವ ಟೀಕೆಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ಟಿಎಂಸಿ ತನ್ನ ಮುಸ್ಲಿಂ ವೋಟ್ ಬ್ಯಾಂಕ್ ಅನ್ನು ಸಮಾಧಾನಪಡಿಸಲು ಈ ಸಾಮಾಜಿಕ-ಧಾರ್ಮಿಕ ಸಂಘಟನೆಗಳ ವಿರುದ್ಧ ಬೆದರಿಕೆ ಹಾಕಲು ಆರಂಭಿಸಿದೆ’ ಎಂದು ಗುಡುಗಿದ್ದಾರೆ.
ಎಷ್ಟು ಧೈರ್ಯ ನಿಮಗೆ ಇಂಥ ಹೇಳಿಕೆ ನೀಡಲು ಎಂದು ಕೇಳಿದ್ದಾರೆ.ಭಾನುವಾರ ಪುರುಲಿಯಾದಲ್ಲಿ ಬಿಜೆಪಿ ರ್‍ಯಾಲಿ ಉದ್ದೇಶಿಸಿ ಮಾತನಾಡಿದ ಮೋದಿ, ಟಿಎಂಸಿ ತುಂಬಾ ಕೆಳಮಟ್ಟಕ್ಕಿಳಿಯುವ ಮೂಲಕ ಸಭ್ಯತೆಯ ಮಿತಿ ದಾಟಿದೆ. ಅದು ಇಸ್ಕಾನ್, ರಾಮಕೃಷ್ಣ ಮಿಷನ್ ಮತ್ತು ಭಾರತ ಸೇವಾಶ್ರಮ ಸಂಘದ ವಿರುದ್ಧ ಅಪಪ್ರಚಾರ ಮಾಡುತ್ತಿದೆ ಎಂದು ಎಂದು ಆಕ್ರೋಶ ವ್ಯಕ್ತಪಡಿಸಿದರು.‘ಚುನಾವಣೆ ಸಂದರ್ಭದಲ್ಲಿ ಬಂಗಾಳದ ಜನರನ್ನು ಬೆದರಿಸುವ ಮತ್ತು ಬೆದರಿಕೆ ಹಾಕಿರುವ ಟಿಎಂಸಿ ಈ ಬಾರಿ ಎಲ್ಲ ಮಿತಿಗಳನ್ನು ಮೀರಿದೆ. ಇಂದು ದೇಶ ಮತ್ತು ವಿಶ್ವದಲ್ಲಿ ಇಸ್ಕಾನ್, ರಾಮಕೃಷ್ಣ ಮಿಷನ್ ಮತ್ತು ಭಾರತ್ ಸೇವಾಶ್ರಮ ಸಂಘ ಸೇವೆ ಮತ್ತು ನೈತಿಕತೆಗೆ ಹೆಸರಾಗಿವೆ. ಆದರೆ ಬಂಗಾಳ ಮುಖ್ಯಮಂತ್ರಿ ತೆರೆದ ವೇದಿಕೆಯಲ್ಲೇ ಅವರಿಗೆ ಬೆದರಿಕೆ ಹಾಕುತ್ತಿದ್ದಾರೆ. ಕೇವಲ ತಮ್ಮ ವೋಟ್ ಬ್ಯಾಂಕ್ ಅನ್ನು ಸಮಾಧಾನಪಡಿಸಲು ಈ ರೀತಿ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.
ಪಶ್ಚಿಮ ಬಂಗಾಳ ಸಿಎಂ ಮಮತಾ ರೇಟ್ ಎಷ್ಟು ಎಂದ ನ್ಯಾಯಮೂರ್ತಿ ಅಭಿಜಿತ್‌ಗೆ ನೋಟಿಸ್
‘ಈ ಸಂಸ್ಥೆಗಳು ಜಗತ್ತಿನಾದ್ಯಂತ ಲಕ್ಷಾಂತರ ಅನುಯಾಯಿಗಳನ್ನು ಹೊಂದಿವೆ. ಜನರಿಗೆ ಸೇವೆ ಸಲ್ಲಿಸುವುದು ಅವುಗಳ ಗುರಿಯಾಗಿದೆ. ಆದರೆ ಇಂಥ ಸಮಾಜಸೇವಾ ಸಂಘಟನೆಗಳ ಮೇಲೂ ಬಂಗಾಳ ಸರ್ಕಾರವು ಬೆರಳು ತೋರಿಸಿದೆ. ಎಷ್ಟು ಧೈರ್ಯ ನಿಮಗೆ? ಕೇವಲ ನಿಮ್ಮ ಮತ ಬ್ಯಾಂಕ್ ಅನ್ನು ಮೆಚ್ಚಿಸಲು?’ ಎಂದು ಮೋದಿ ಹೂಂಕರಿಸಿದರು.ಬಳಿಕ ಬಿಷ್ಣುಪುರದಲ್ಲಿ ಮತ್ತೊಂದು ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ‘ಬ್ಯಾನರ್ಜಿ ಅವರು ಮುಸ್ಲಿಂ ಮೂಲಭೂತವಾದಿಗಳ ಒತ್ತಡಕ್ಕೆ ಒಳಗಾಗಿದ್ದಾರೆ ಮತ್ತು ದೇಶದ ಸಂತರು ಮತ್ತು ಸನ್ಯಾಸಿಗಳ ಮೇಲೆ ದಾಳಿ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.
ಬಿಜೆಪಿ ಗೆದ್ದರೆ ವಿಪಕ್ಷ ನಾಯಕರು ಜೈಲಿಗೆ: ಅರವಿಂದ ಕೇಜ್ರಿವಾಲ್ ಭವಿಷ್ಯ
‘ಹತಾಶೆಯಿಂದ ಟಿಎಂಸಿ ನಾಯಕರು ಇಸ್ಕಾನ್, ರಾಮಕೃಷ್ಣ ಮಿಷನ್ ಮತ್ತು ಭಾರತ್ ಸೇವಾಶ್ರಮ ಸಂಘದಂತಹ ಪ್ರತಿಷ್ಠಿತ ಸಂಸ್ಥೆಗಳ ಮೇಲೆ ನಿಂದನೆ ಪ್ರಾರಂಭಿಸಿದ್ದಾರೆ. ಈ ಸಂಘಟನೆಗಳು ಬಂಗಾಳಕ್ಕೆ ಕೀರ್ತಿ ತಂದಿವೆ, ಆದರೆ ರಾಜ್ಯದ ಸಿಎಂ ಮಾತ್ರ ಇವರು ಬಂಗಾಳವನ್ನು ಹಾಳು ಮಾಡುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಮುಸ್ಲಿಂ ಮೂಲಭೂತವಾದಿಗಳ ಒತ್ತಡಕ್ಕೆ ಮಣಿದು ಆಕೆ ನಮ್ಮ ನಂಬಿಕೆಯನ್ನು ಸಾರ್ವಜನಿಕವಾಗಿ ಅವಮಾನಿಸಿದ್ದಾರೆ’ ಎಂದು ಕಿಡಿಕಾರಿದರು.