ಜನವರಿ ತಿಂಗಳೊಳಗೆ ಲೋಕಸಭೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಫೈನಲ್: ಕಂದಾಯ ಸಚಿವ ಕೃಷ್ಣಬೈರೇಗೌಡ!

By Sathish Kumar KH  |  First Published Dec 23, 2023, 7:50 PM IST

ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿಯನ್ನು ಜನವರಿ ತಿಂಗಳೊಳಗೆ ಅಂತಿಮಗೊಳಿಸಲಾಗುವುದು.


ತುಮಕೂರು (ಡಿ.23): ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿಯನ್ನು ಜನವರಿ ತಿಂಗಳೊಳಗೆ ಅಂತಿಮಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನವರಿ ತಿಂಗಳೊಳಗೆ ಲೋಕಸಭೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಲಿದೆ. ಈಗ ತುಮಕೂರು ಲೋಕಸಭಾ ವ್ಯಾಪ್ತಿಯ ಮುಖಂಡರ ಹಾಗೂ ಕಾರ್ಯಕರ್ತರ ಸಭೆ ನಡೆಸಿದ್ದೇನೆ. ಗೃಹ ಸಚಿವ ಡಾ. ಜಿ.ಪರಮೇಶ್ವರ್, ಸಹಕಾರ ಸಚಿವ ಕೆ.ಎನ್. ರಾಜಣ್ಣ ಹಾಗೂ ಟಿ.ಬಿ.ಜಯಚಂದ್ರರ ಸಮಕ್ಷಮದಲ್ಲಿ ಬೆಂಗಳೂರಿನಲ್ಲಿ ಇನ್ನೊಂದು ಸಭೆ ನಡೆಯಲಿದೆ. ಆ ಸಭೆಯಲ್ಲಿ ಅಭ್ಯರ್ಥಿಗಳು ಫೈನಲ್ ಆಗಲಿದ್ದಾರೆ. ಜನವರಿ ತಿಂಗಳೊಳಗೆ ಎಲ್ಲವೂ ಫೈನಲ್ ಆಗಲಿದೆ ಎಂದು ತಿಳಿಸಿದರು.

Latest Videos

undefined

ಇನ್ನು ಲೋಕಸಭಾ ಚುನಾವಣೆಯ ಫೈನಲ್ ಪಟ್ಟಿ ಬಂದ ನಂತರ ಅಭ್ಯರ್ಥಿಗಳು ಕ್ಷೇತ್ರದಲ್ಲಿ ಕೆಲಸ ಮಾಡಲಿದ್ದಾರೆ. ಆ ಮೂಲಕ ಇಂಡಿ ಮೈತ್ರಿಕೂಟ ಹೆಚ್ಚಿನ ಸ್ಥಾನ ಗೆಲ್ಲಬೇಕು. ಕೇಂದ್ರದ ಬಡವರ ವಿರೋಧಿ ಸರ್ಕಾರ ಹೋಗಬೇಕಾಗಿದೆ. ದಿನೇದಿನೇ ಪ್ರಜಾಪ್ರಭುತ್ವಕ್ಕೆ ಧಕ್ಕೆ ಬರುತ್ತಿದೆ. ಹಾಗಾಗಿ ಇಂಡಿಯಾ ಮೈತ್ರಿಕೂಟ ಹೆಚ್ಚಿನ ಸ್ಥಾನ ಗೆಲ್ಲುವ ಅವಶ್ಯಕತೆ ಇದೆ. ಕರ್ನಾಟಕದಲ್ಲೂ ಅತಿಹೆಚ್ಚು ಸ್ಥಾನ ಗೆಲ್ಲುವ ನಿಟ್ಟಿನಲ್ಲಿ ತಯಾರಿ ನಡೆಸಿದ್ದೇವೆ ಎಂದು ಮಾಹಿತಿ ನೀಡಿದರು.

2024 Lok Sabha Election: 'ಶೇ.50ಕ್ಕಿಂತ ಹೆಚ್ಚಿನ ಮತ ಗಳಿಸಬೇಕು..' ಬಿಜೆಪಿ ನಾಯಕರಿಗೆ ಪ್ರಧಾನಿ ಮೋದಿ ಟಾರ್ಗೆಟ್‌!

ಕಾರ್ಯಕರ್ತರು, ಮುಖಂಡರು ಇಂದಿನ ಸಭೆಯಲ್ಲಿ ತಮ್ಮ ತಮ್ಮ ಅಭಿಪ್ರಾಯ ಹೇಳಿದ್ದಾರೆ. ಎಲ್ಲವನ್ನೂ ಅವಲೋಕಿಸಿ ಮುಂದಿನ ಸಭೆಯಲ್ಲಿ ತೀರ್ಮಾನ ಮಾಡುತ್ತೇವೆ. ಸಚಿವ ಕೆ‌.ಎನ್.ರಾಜಣ್ಣ ಸ್ಪರ್ಧೆ ಮಾಡುತ್ತೇನೆ ಅಂದಿದ್ದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಸದ್ಯದಲ್ಲೇ ನಾನು ಅವರನ್ನು ಭೇಟಿ ಮಾಡಿ ಮಾತನಾಡುತ್ತೇನೆ ಎಂದು ತಿಳಿಸಿದರು.

click me!