ಬೆಳಗಾವಿಯಿಂದ ಜಗದೀಶ ಶೆಟ್ಟರ್ ಕಣಕ್ಕೆ; 'ಕ್ಷಮಿಸಿ ಮೋದೀಜಿ' ಎಂದ ಬಿಜೆಪಿ ಮುಖಂಡ!

By Ravi JanekalFirst Published Mar 24, 2024, 10:45 PM IST
Highlights

ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಸಿಗುವ ವಿಶ್ವಾಸ ಇತ್ತು. ಟಿಕೆಟ್ ನೀಡುವ ಮೂಲಕ ಹೆಚ್ಚಿನ ಜನಸೇವೆ ಮಾಡಲು ಅವಕಾಶ ನೀಡಿದ್ದಾರೆ ಎಂದು ಮಾಜಿ ಸಿಎಂ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಸಂತಸ ವ್ಯಕ್ತಪಡಿಸಿದರು.

ಹುಬ್ಬಳ್ಳಿ (ಮಾ.24): ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಸಿಗುವ ವಿಶ್ವಾಸ ಇತ್ತು. ಟಿಕೆಟ್ ನೀಡುವ ಮೂಲಕ ಹೆಚ್ಚಿನ ಜನಸೇವೆ ಮಾಡಲು ಅವಕಾಶ ನೀಡಿದ್ದಾರೆ ಎಂದು ಮಾಜಿ ಸಿಎಂ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಸಂತಸ ವ್ಯಕ್ತಪಡಿಸಿದರು.

ಇಂದು ಬಿಜೆಪಿ ತನ್ನ ಐದನೇ ಪಟ್ಟಿ ಬಿಡುಗಡೆಗೊಳಿಸಿದ್ದು, ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಘೊಷಣೆ ಮಾಡಿದ ವಿಚಾರ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಜೆಪಿ ನಡ್ಡಾ ಮತ್ತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಧನ್ಯವಾದಗಳನ್ನು ತಿಳಿಸುವೆ. ವಿಶೇಷವಾಗಿ ಸ್ಥಳೀಯ ನಾಯಕರಿಗೆ ಧನ್ಯವಾದಗಳನ್ನು ತಿಳಿಸುವೆ. ಅವರ ನಂಬಿಕೆ ಉಳಿಸಿಕೊಳ್ಳಲು ಪ್ರಯತ್ನ ಮಾಡುವೆ ಎಂದರು.

ಬಿಜೆಪಿ 5ನೇ ಪಟ್ಟಿ ಬಿಡುಗಡೆ; ರಾಯಚೂರಿನಿಂದ ಹಾಲಿ ಸಂಸದ ರಾಜಾ ಅಮರೇಶ್ವರ ನಾಯಕ ಕಣಕ್ಕೆ!

ದಿ.ಸುರೇಶ್ ಅಂಗಡಿಯವರು ರೈಲ್ವೆ ಸಚಿವರಾಗಿ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಅದನ್ನು ಮುಂದುವರಿಸಿಕೊಂಡು ಹೋಗುವೆ. ಟಿಕೆಟ್ ಸಿಗಲು ಕಾರಣವಾದ ಬೆಳಗಾವಿ ಎಲ್ಲ ಸ್ಥಳೀಯ ನಾಯಕರಿಗೆ ಧನ್ಯವಾದಗಳು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು, ಎಲ್ಲರನ್ನೂ ಒಗ್ಗೂಡಿಸಿಕೊಂಡು ಬೆಳಗಾವಿ ಅಭಿವೃದ್ಧಿ ಮಾಡಲು ನನಗೆ ಇನ್ನೂ ಹುಮ್ಮಸ್ಸು ಬಂದಿದೆ. ಎಲ್ಲರ ಜೊತೆಗೂಡಿ ಚುನಾವಣೆ ಎದುರಿಸುವೆ ಎಂದರು.

 ನಮ್ಮ ಕ್ಯಾಪ್ಟನ್ ಮೋದಿ; ಕಾಂಗ್ರೆಸ್ ಕ್ಯಾಪ್ಟನ್ ಯಾರು ಅಂತಾ ಅವರಿಗೇ ಗೊತ್ತಿಲ್ಲ: ಆರ್ ಅಶೋಕ್ 

ಬೆಳಗಾವಿ ಸ್ಥಳೀಯ ಮಟ್ಟದಲ್ಲಿ ನಾನು ಪಕ್ಷ ಸಂಘಟನೆ ಮಾಡಿದ್ದೇನೆ. ಹಣದ ಮೇಲೆ ಚುನಾವಣೆ ನಡೆಯುವುದಿಲ್ಲ. ಇದು ರಾಷ್ಟ್ರೀಯ ಚುನಾವಣೆ. ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ನಿಟ್ಟಿನಲ್ಲಿ ಚುನಾವಣೆ ನಡೆಯುತ್ತಿದೆ. ಬೆಳಗಾವಿಯಲ್ಲಿ ಯಾವುದೇ ವಿರುದ್ಧ ವಾತಾವರಣ ಇದ್ದರೂ ಅದನ್ನು ಶಮನ ಮಾಡುವೆ. ನನಗೆ ಲೋಕಸಭಾ ಚುನಾವಣೆ ಹೊಸದಿರಬಹುದು. ಆದರೆ ಅಪಾರ ರಾಜಕೀಯ ಅನುಭವ ಇದೆ. ಯಾವುದೇ ಪದವಿಗೆ, ಸಚಿವ ಸ್ಥಾನಕ್ಕೆ ಆಸೆಪಡುವುದಿಲ್ಲ ತಾನಾಗಿಯೇ ಒಲಿದು ಬರಲಿ ಎಂದರು.

ಬಿಜೆಪಿ ಮುಖಂಡರ ಆಕ್ರೋಶ

ಬೆಳಗಾವಿ ಲೋಕಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿಯಾಗಿ ಜಗದೀಶ್ ಶೆಟ್ಟರ್ ಹೆಸರು ಘೋಷಣೆಯಾಗ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬಿಜೆಪಿ 5ನೇ ಪಟ್ಟಿ ಬಿಡುಗಡೆ; ರಾಯಚೂರಿನಿಂದ ಹಾಲಿ ಸಂಸದ ರಾಜಾ ಅಮರೇಶ್ವರ ನಾಯಕ ಕಣಕ್ಕೆ!

ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಹಾಂತೇಶ ವಕ್ಕುಂದ. ಜಗದೀಶ್ ಶೆಟ್ಟರ್ ಹೆಸರು ಘೋಷಣೆಯಿಂದ ಸಿಡಿದೆದ್ದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಬೆಳಗಾವಿ ಮೇಲೆ ಹೊರಗಿನವರ ಹೇರಿಕೆಗೆ ನನ್ನ ಸಹಮತಿ‌ ಇಲ್ಲ. ಬೆಳಗಾವಿ ಬಿಜೆಪಿ ಹಣೆಬರಹ ಕೆಟ್ಟಿದೆ. ಬೆಳಗಾವಿ ಟಿಕೆಟ್ ಕೈತಪ್ಪಿ ಹೋಗುವುದರಲ್ಲಿ ಯಾವುದೇ ಸಂದೇಹವಿಲ್ಲ. ಕ್ಷಮಿಸಿ ಮೋದೀಜಿ ಎಂದು ಪೋಸ್ಟ್ ಹಾಕಿರುವ ಮುಖಂಡ.

 

click me!