
ಚನ್ನರಾಯಪಟ್ಟಣ (ಮಾ.28): ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಮತ್ತೊಬ್ಬ ಡಾ.ಮಂಜುನಾಥ್ ಚುನಾವಣಾ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ. ಡಾ.ಸಿ.ಎನ್.ಮಂಜುನಾಥ್ ಆದ ನಾನು ಈ ಬಾರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದೇನೆ ಎಂದು ಡಾ. ಮಂಜುನಾಥ್ ತಿಳಿಸಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ದಲಿತ ಮತಗಳೇ ನಿರ್ಣಾಯಕ ಪಾತ್ರ ವಹಿಸಲಿದ್ದು, ಸಮಾಜದಲ್ಲಿ ಶೋಷಣೆಗೊಳಗಾದ ನಮ್ಮ ಸಮುದಾಯವನ್ನು ಎಚ್ಚರಗೊಳಿಸಲು ಮತ್ತು ಸಂಘಟಿಸಲು ಈ ನಿರ್ಧಾರ ಕೈಗೊಂಡಿದ್ದು, ಡಾ.ಬಿ.ಆರ್. ಅಂಬೇಡ್ಕರ್‌ರವರು ನೀಡಿದ ಮತದಾನದ ಹಕ್ಕನ್ನು ಹೇಗೆ ಚಲಾಯಿಸಬೇಕೆಂದು ನಮ್ಮ ದಲಿತರು ತಿಳಿದುಕೊಂಡು ಮತದಾನ ಮಾಡಬೇಕು ಎಂದರು.
ದಾವಣಗೆರೆ ಬಂಡಾಯ ಬಗೆಹರಿಸಿದ ಬಿಎಸ್‌ವೈ: ರವೀಂದ್ರನಾಥ್ ನೇತೃತ್ವದಲ್ಲಿ ಚುನಾವಣೆಗೆ ಸರ್ವಸಮ್ಮತಿ
ಮತದಾರರಲ್ಲಿ ಗೊಂದಲ: ಈ ಬಾರಿ ಭಾರತೀಯ ಜನತಾ ಪಾರ್ಟಿ ಲೋಕಸಭಾ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ಕಣಕ್ಕಿಳಿದಿದ್ದು, ಅವರಿಗೆ ಸ್ಪರ್ಧೆ ಒಡ್ಡಲು ಅದೇ ಹೆಸರಿನ ಡಾ. ಸಿ.ಎನ್. ಮಂಜುನಾಥ್ ಎಂಬುವರು ಬಹುಜನ ಸಮಾಜವಾದಿ ಪಾರ್ಟಿಯಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಕುತೂಹಲ ಸಂಗತಿಯೆಂದರೆ ಒಂದೇ ಹೆಸರು ಹಾಗೂ ತಂದೆಯ ಹೆಸರೂ ಕೂಡ ಒಂದೇ ಆಗಿದ್ದು, ಒಂದೇ ಜಿಲ್ಲೆ, ಒಂದೇ ತಾಲೂಕು ಹಾಗೂ ಇಬ್ಬರಿಗೂ ಗೌರವ ಡಾಕ್ಟರೇಟ್ ದೊರೆತಿರುವುದು ಅಚ್ಚರಿಯ ಸಂಗಿತಿಯಾಗಿದೆ. ಇದು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಚರ್ಚೆಗೆ ಗ್ರಾಸವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.