ಪ್ರಧಾನಿ ನರೇಂದ್ರ ಮೋದಿ ಅವರ ಕಲಬುರಗಿ ಕಾರ್ಯಕ್ರಮ ಮುಗಿಸಿಕೊಂಡು ಒಂದೇ ವಿಮಾನದಲ್ಲಿ ಹುಬ್ಬಳ್ಳಿಗೆ ಆಗಮಿಸಿದ ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ ವಿಮಾನ ನಿಲ್ದಾಣದ ಲಾಂಜ್‌ನಲ್ಲೇ ಕೆಲಕಾಲ ಸಭೆ ನಡೆಸಿದರು.
ಹುಬ್ಬಳ್ಳಿ (ಮಾ.17): ಪ್ರಧಾನಿ ನರೇಂದ್ರ ಮೋದಿ ಅವರ ಕಲಬುರಗಿ ಕಾರ್ಯಕ್ರಮ ಮುಗಿಸಿಕೊಂಡು ಒಂದೇ ವಿಮಾನದಲ್ಲಿ ಹುಬ್ಬಳ್ಳಿಗೆ ಆಗಮಿಸಿದ ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ ವಿಮಾನ ನಿಲ್ದಾಣದ ಲಾಂಜ್‌ನಲ್ಲೇ ಕೆಲಕಾಲ ಸಭೆ ನಡೆಸಿದರು.
ಲೋಕಸಭೆ ಚುನಾವಣೆಯಲ್ಲಿ ಪಕ್ಷ ಕೈಗೊಳ್ಳಬೇಕಾಗಿದ್ದ ತಂತ್ರ- ಪ್ರತಿತಂತ್ರಗಾರಿಕೆ ಬಗ್ಗೆ ಚರ್ಚೆ ನಡೆಸಲಾಯಿತು. ಇದೇ ವೇಳೆ ಅಸಮಾಧಾನಗೊಂಡಿರುವ ಕೆ.ಎಸ್. ಈಶ್ವರಪ್ಪ ಸೇರಿದಂತೆ ಮತ್ತಿತರರ ಸಮಾಧಾನಪಡಿಸುವ ಕುರಿತಂತೆಯೂ ಸಮಾಲೋಚನೆ ನಡೆಸಿದರು. ಜಗದೀಶ ಶೆಟ್ಟರ್ ಟಿಕೆಟ್ ಹಂಚಿಕೆ ಕುರಿತು ಚರ್ಚೆ ನಡೆಯಿತು ಎಂದು ಮೂಲಗಳು ತಿಳಿಸಿವೆ.
ವರಿಷ್ಠರು ಸೂಚನೆ ನೀಡಿದರೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧ: ಜಗದೀಶ್ ಶೆಟ್ಟರ್
ಬಿಎಸ್‌ವೈ ಕಾಲಿಗೆರಗಿದ ಜೋಶಿ: ನಂತರ ಯಡಿಯೂರಪ್ಪ ವಿಮಾನ ನಿಲ್ದಾಣದಿಂದ ಹೊರ ಬಂದು ಕಾರು ಏರಲು ಮುಂದಾದಾಗ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಬಿಎಸ್‌ವೈ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು. ಜೋಶಿ ಹಾಗೂ ಬೊಮ್ಮಾಯಿ ಬೆನ್ನು ಚಪ್ಪರಿಸಿ ಯಡಿಯೂರಪ್ಪ ಕಾರು ಏರಿ ಶಿವಮೊಗ್ಗದತ್ತ ಪ್ರಯಾಣ ಬೆಳೆಸಿದರು.
ಉಪಕಾರ ಮಾಡಲು ಹೋದರೆ ಏನಾಗುತ್ತೆ ನೋಡಿ: ನನ್ನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಕಾನೂನು ರೀತಿ ಎದುರಿಸುತ್ತೇನೆ. ಉಪಕಾರ ಮಾಡಲು ಹೋದರೆ ಏನಾಗುತ್ತದೆ ಎಂಬುದಕ್ಕೆ ಇದು ನಿದರ್ಶನ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ತಮ್ಮ ನಿವಾಸದ ಬಳಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಒಂದೂವರೆ ತಿಂಗಳ ಹಿಂದೆ ತಾಯಿ ಮಗಳು ಕಣ್ಣೀರು ಹಾಕುವುದನ್ನು ನೋಡಿ ಒಳಗೆ ಕರೆಸಿ ಕೂರಿಸಿ ಸಮಸ್ಯೆ ಆಲಿಸಿದೆ. ಅನ್ಯಾಯ ಆಗಿದೆ ಎಂದು ನೋವು ತೋಡಿಕೊಂಡಿದ್ದರಿಂದ ಪೊಲೀಸ್ ಆಯುಕ್ತರಿಗೆ ಫೋನ್ ಮಾಡಿ ನ್ಯಾಯ ಒದಗಿಸುವಂತೆ ತಿಳಿಸಿದೆ.
ಸಾಮಾನ್ಯರಿಗೆ ಉನ್ನತ ಸ್ಥಾನ ನೀಡುವ ಪಕ್ಷ ಬಿಜೆಪಿ: ಮಾಜಿ ಸಚಿವ ಹಾಲಪ್ಪ ಆಚಾರ್
ಆ ಬಳಿಕ ಈ ಮಹಿಳೆ ಇದನ್ನ ಬೇರೆ ರೀತಿ ಮಾಡಿ ದೂರು ದಾಖಲಿಸಿದ್ದಾರೆ. ಕಷ್ಟ ಎಂದಿದ್ದಕ್ಕೆ ಸ್ವಲ್ಪ ಹಣ ಸಹ ಕೊಟ್ಟು ಕಳಿಹಿಸಿದೆ. ಆದರೂ ದೂರು ನೀಡಿದ್ದಾರೆ. ಪ್ರಕರಣವನ್ನು ಕಾನೂನು ರೀತಿ ಎದುರಿಸಲಾಗುವುದು ಎಂದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಯಡಿಯೂರಪ್ಪ, ದೂರು ದಾಖಲಾಗಿರುವ ಹಿಂದೆ ರಾಜಕೀಯ ಪಿತೂರಿ ಇದೆ ಎನ್ನುವ ಆರೋಪವನ್ನು ಮಾಡುವುದಿಲ್ಲ ಎಂದು ಹೇಳಿದರು.