
ಕೊಪ್ಪಳ (ಮಾ.31): ಸಂಸದ ಸಂಗಣ್ಣ ಕರಡಿ ಅವರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಎರಡನೇ ಸುತ್ತಿನಲ್ಲಿ ನಡೆಸಿದ ಮಾತುಕತೆ ಸ್ಪಷ್ಟ ನಿರ್ಧಾರಕ್ಕೆ ಬರುವಲ್ಲಿ ವಿಫಲವಾಗಿದೆ ಎನ್ನಲಾಗಿದೆ. ಸಂಧಾನ ಸಫಲವಾಗಿದ್ದು, ಇನ್ನೆರಡು ದಿನದಲ್ಲಿ ಕರಡಿ ಪ್ರಚಾರಕ್ಕೆ ಬರಲಿದ್ದಾರೆ ಎನ್ನುತ್ತಾರೆ ಬಿಜೆಪಿಯ ಕೊಪ್ಪಳ ಜಿಲ್ಲಾ ನಾಯಕರು. ಆದರೆ, ಸಭೆಯಲ್ಲಿ ನಡೆದ ಮಾತುಕತೆಯ ವೇಳೆ ಸಂಗಣ್ಣ, ಇಷ್ಟು ದಿನ ಕಾದರೂ ಸಹ ನನ್ನ ಪ್ರಶ್ನೆಗಳಿಗೆ ಉತ್ತರವನ್ನೇ ನೀಡಿಲ್ಲವಲ್ಲ ಎಂದು ಕಿಡಿಕಾರಿದ್ದಾರೆ.
ನನಗೆ ಟಿಕೆಟ್ ತಪ್ಪಲು ಯಾರು ಕಾರಣ ಎನ್ನುವುದನ್ನಾದರೂ ಯಾಕೆ ಹೇಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, ಮಾತುಕತೆಯಲ್ಲಿ ಇನ್ನೆರಡು ದಿನಗಳಲ್ಲಿ ರಾಜ್ಯಕ್ಕೆ ಆಗಮಿಸಲಿರುವ ಕೇಂದ್ರ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಚರ್ಚೆ ಮಾಡಿ, ಸಮಸ್ಯೆಯನ್ನು ಇತ್ಯರ್ಥ ಮಾಡುವ ಭರವಸೆ ಸಂಗಣ್ಣ ಕರಡಿ ಅವರಿಗೆ ಸಿಕ್ಕಿದೆ ಎನ್ನಲಾಗಿದೆ. ಹೀಗಾಗಿ, ಕರಡಿ ಈಗಲೂ ಪಕ್ಷದ ಅಭ್ಯರ್ಥಿಯ ಪರವಾಗಿ ಪ್ರಚಾರಕ್ಕೆ ಹೋಗುವ ಸಾಧ್ಯತೆ ತೀರಾ ಕಡಿಮೆಯಾಗಿದೆ.
ಸಂಗಣ್ಣ ಈ ಕುರಿತು ಮಾಧ್ಯಮಕ್ಕೆ ಯಾವುದೇ ಹೇಳಿಕೆ ನೀಡಿಲ್ಲ ಮತ್ತು ಕರೆಯನ್ನು ಸ್ವೀಕಾರ ಮಾಡಿಲ್ಲ, ಹೀಗಾಗಿ, ಅವರ ನಡೆ ಇನ್ನೂ ನಿಗೂಢ ಎಂದೇ ಹೇಳಲಾಗುತ್ತದೆ. ಸಂಧಾನದ ವೇಳೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಹಾಗೂ ಕುಷ್ಟಗಿ ಶಾಸಕ ದೊಡ್ಡನಗೌಡ, ಮಾಜಿ ಶಾಸಕ ಬಸವರಾಜ ದಢೇಸ್ಗೂರು ಮೊದಲಾದವರು ಇದ್ದರು.
ಸಿಎಂ ಸಿದ್ದರಾಮಯ್ಯ ತವರಲ್ಲಿ ಬಿಜೆಪಿ ಅತೃಪ್ತಿಗೆ ಮದ್ದರೆದ ಬಿ.ವೈ.ವಿಜಯೇಂದ್ರ!
ಟಿಕೆಟ್ ವಂಚಿತವಾಗಿರುವ ಸಂಸದ ಸಂಗಣ್ಣ ಕರಡಿ ಅವರೊಂದಿಗೆ ಪಕ್ಷದ ಹೈಕಮಾಂಡ್ ನಡೆಸಿದ ಮಾತುಕತೆ ಫಲಪ್ರದವಾಗಿದ್ದು, ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳಲಿದ್ದಾರೆ.
-ನವೀನ್ ಗುಳಗಣ್ಣವರ ಬಿಜೆಪಿ ಜಿಲ್ಲಾಧ್ಯಕ್ಷ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.