ಇಂದು ಕಾಂಗ್ರೆಸ್‌ ಮೊದಲ ಪಟ್ಟಿ? ಕೈ ಅಧಿಕಾರಕ್ಕೆ ಬಂದರೆ 30 ಲಕ್ಷ ಉದ್ಯೋಗ ಭರ್ತಿ: ರಾಹುಲ್‌ ಗಾಂಧಿ

By Anusha KbFirst Published Mar 8, 2024, 9:06 AM IST
Highlights

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ದೇಶದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ಉದ್ಯೋಗ ಹಕ್ಕು ನೀಡಲಾಗುವುದು. 30 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಪದವೀಧರರು ಹಾಗೂ ಡಿಪ್ಲೊಮಾ ಪದವೀಧರರಿಗೆ 1 ಲಕ್ಷ ರು. ಜತೆಗೆ 1 ವರ್ಷ ಅಪ್ರೆಂಟಿಸ್‌ಶಿಪ್‌ ಕೊಡಿಸಲಾಗುವುದು ಎಂದು ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್‌ ಗಾಂಧಿ ಭರವಸೆ ನೀಡಿದ್ದಾರೆ.

ಪಿಟಿಐ ಜೈಪುರ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ದೇಶದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ಉದ್ಯೋಗ ಹಕ್ಕು ನೀಡಲಾಗುವುದು. 30 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಪದವೀಧರರು ಹಾಗೂ ಡಿಪ್ಲೊಮಾ ಪದವೀಧರರಿಗೆ 1 ಲಕ್ಷ ರು. ಜತೆಗೆ 1 ವರ್ಷ ಅಪ್ರೆಂಟಿಸ್‌ಶಿಪ್‌ ಕೊಡಿಸಲಾಗುವುದು ಎಂದು ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್‌ ಗಾಂಧಿ ಭರವಸೆ ನೀಡಿದ್ದಾರೆ.

ಭಾರತ್‌ ಜೋಡೋ ನ್ಯಾಯ ಯಾತ್ರೆ ಮಧ್ಯಪ್ರದೇಶದಿಂದ ರಾಜಸ್ಥಾನದಿಂದ ಬಾಂಸ್‌ವಾಡ ಪ್ರವೇಶಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ಸರ್ಕಾರಿ ಉದ್ಯೋಗ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗುವುದನ್ನು ತಪ್ಪಿಸಲು ಕಾನೂನು ರೂಪಿಸಲಾಗುವುದು. ಕನಿಷ್ಠ ಬೆಂಬಲ ಬೆಲೆಗೆ ಕಾನೂನಿನಡಿ ಖಾತ್ರಿ ನೀಡಲಾಗುವುದು. ಗಿಗ್‌ (ಸ್ವಿಗ್ಗಿ, ಝೊಮೇಟೋದಂಥ ನೌಕರರು) ನೌಕರರಿಗೆ ಸಾಮಾಜಿಕ ಭದ್ರತೆ ಒದಗಿಸಲಾಗುವುದು. ಸ್ಟಾರ್ಟಪ್‌ ಕಂಪನಿಗಳಿಗೆ 5000 ಕೋಟಿ ರು. ನಿಧಿ ಮೀಸಲಿಡಲಾಗುವುದು ಎಂದರು.

ಲೋಕಸಭಾ ಚುನಾವಣೆ 2024: ದಿಲ್ಲಿಯಲ್ಲಿ ಮೂರು ಪಕ್ಷಗಳಿಂದ ಟಿಕೆಟ್‌ ಸರ್ಕಸ್‌..!

ಇಂದು ಕಾಂಗ್ರೆಸ್‌ ಮೊದಲ ಪಟ್ಟಿ?

ನವದೆಹಲಿ: ಲೋಕಸಭೆ ಚುನಾವಣೆಗೆ ಕ್ಷಣಗಣನೆ ನಡೆದಿರುವಂತೆಯೇ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್‌ ಚುನಾವಣಾ ಸಮಿತಿ ಗುರುವಾರ ರಾತ್ರಿ ಮಹತ್ವದ ಸಭೆ ನಡೆಸಿದೆ. ಮೊದಲ ಪಟ್ಟಿ ಇಂದು ಪ್ರಕಟವಾಗುವ ನಿರೀಕ್ಷೆಯಿದೆ.  ದೆಹಲಿ, ಛತ್ತೀಸ್‌ಗಢ, ಕರ್ನಾಟಕ, ತೆಲಂಗಾಣ, ಲಕ್ಷದ್ವೀಪ, ಕೇರಳ, ಮೇಘಾಲಯ, ತ್ರಿಪುರ, ಸಿಕ್ಕಿಂ ಮತ್ತು ಮಣಿಪುರದ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ತೆಲಂಗಾಣದ 7 ಸೇರಿ ಹಲವು ಕ್ಷೇತ್ರಗಳ ಅಭ್ಯರ್ಥಿ ಹೆಸರು ಅಂತಿಮವಾಗಿದೆ ಎಂದು ಮೂಲಗಳು ಹೇಳಿವೆ. ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹಾಗೂ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಇತರ ಹಿರಿಯ ನಾಯಕರು ಪಾಲ್ಗೊಂಡಿದ್ದರು.

ಪ್ರಿಯಾಂಕಾ ಸ್ಪರ್ಧೆ ಅನುಮಾನ?:

ಅಮೇಠಿ ಹಾಗೂ ಕೇರಳದ ವಯನಾಡ್‌ನಿಂದ ರಾಹುಲ್ ಗಾಂಧಿ ಮತ್ತು ಈ ಹಿಂದೆ ಸೋನಿಯಾ ಗಾಂಧಿ ಹೊಂದಿದ್ದ ಕ್ಷೇತ್ರವಾದ ರಾಯ್ ಬರೇಲಿಯಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಉಮೇದುವಾರಿಕೆ ಬಗ್ಗೆ ಊಹಾಪೋಹಗಳು ಹರಿದಾಡುತ್ತಿವೆ. ಆದರೆ, ಪ್ರಿಯಾಂಕಾ ಸ್ಪರ್ಧೆ ಅನುಮಾನ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಸೋನಿಯಾ ಗಾಂಧಿ ರಾಜ್ಯಸಭೆಗೆ ಆಯ್ಕೆ ಆಗಿರುವ ಕಾರಣ ರಾಯ್‌ಬರೇಲಿ ಕ್ಷೇತ್ರ ತೆರವಾಗಿದೆ.

ಲೋಕಸಭಾ ಚುನಾವಣೆ 2024: ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಮಂಡ್ಯ ಅಭ್ಯರ್ಥಿ ಆಯ್ಕೆ, ಎಚ್‌ಡಿಕೆ

click me!