18ನೇ ಲೋಕಸಭಾ ಚುನಾವಣೆಯಲ್ಲಿ 88.4 ಲಕ್ಷ ವಿಕಲಚೇತನರು ಹಾಗೂ 85 ವರ್ಷ ಮೇಲ್ಪಟ್ಟ 82 ಲಕ್ಷ ವೃದ್ಧ ಮತದಾರರು ಮತದಾನಕ್ಕೆ ಅರ್ಹರಾಗಿದ್ದು, ಅವರೆಲ್ಲರಿಗೂ ಅಗತ್ಯಬಿದ್ದಲ್ಲಿ ಮನೆಯಿಂದಲೇ ಮತ ಚಲಾಯಿಸಲು ಅವಕಾಶ ಕಲ್ಪಿಸುವುದಾಗಿ ಚುನಾವಣಾ ಆಯೋಗ ಪ್ರಕಟಿಸಿದೆ.
ನವದೆಹಲಿ: 18ನೇ ಲೋಕಸಭಾ ಚುನಾವಣೆಯಲ್ಲಿ 88.4 ಲಕ್ಷ ವಿಕಲಚೇತನರು ಹಾಗೂ 85 ವರ್ಷ ಮೇಲ್ಪಟ್ಟ 82 ಲಕ್ಷ ವೃದ್ಧ ಮತದಾರರು ಮತದಾನಕ್ಕೆ ಅರ್ಹರಾಗಿದ್ದು, ಅವರೆಲ್ಲರಿಗೂ ಅಗತ್ಯಬಿದ್ದಲ್ಲಿ ಮನೆಯಿಂದಲೇ ಮತ ಚಲಾಯಿಸಲು ಅವಕಾಶ ಕಲ್ಪಿಸುವುದಾಗಿ ಚುನಾವಣಾ ಆಯೋಗ ಪ್ರಕಟಿಸಿದೆ. ಮತದಾನಕ್ಕೆ ಮನೆಯಿಂದಲೇ ಮತ ಚಲಾಯಿಸಬೇಕೆನ್ನುವ ಅಂಗವಿಕಲರು ಮೊದಲೇ ಚುನಾವಣಾ ಆಯೋಗಕ್ಕೆ ಈ ಕುರಿತು ಮಾಹಿತಿ ನೀಡಿ ನೋಂದಣಿ ಮಾಡಿಕೊಳ್ಳಬೇಕಿದ್ದು, ಶೇ.40 ಮತ್ತು ಅದಕ್ಕಿಂತ ಹೆಚ್ಚು ವಿಕಲತೆ ಹೊಂದಿರುವವರಿಗೆ ಮಾತ್ರ ಈ ಸೌಲಭ್ಯ ಒದಗಿಸಲಾಗುತ್ತದೆ. ಅಲ್ಲದೆ ಅವರು ಇಚ್ಛೆ ಪಟ್ಟಲ್ಲಿ ಮತಕೇಂದ್ರಗಳಿಗೂ ಬಂದು ಮತ ಚಲಾಯಿಸಬಹುದು. ಅದಕ್ಕಾಗಿ ಅವರಿಗೆ ಗಾಲಿ ಕುರ್ಚಿ ಮತ್ತು ರ್‍ಯಾಂಪ್ ಸೌಕರ್ಯ ಒದಗಿಸಲಾಗುತ್ತದೆ ಎಂದು ಮಾಹಿತಿ ನೀಡಿದೆ.
85 ವರ್ಷ ಮೇಲ್ಪಟ್ಟವರಿಗೂ ಅವಕಾಶ:
ಪ್ರಸ್ತುತ ಮತದಾರರ ಪಟ್ಟಿಯಲ್ಲಿ 85 ವರ್ಷ ಮೇಲ್ಪಟ್ಟ 82 ಲಕ್ಷ ಮತದಾರರಿದ್ದು, ಅವರಿಗೂ ಮನೆಯಿಂದಲೇ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಪೈಕಿ 2.18 ಲಕ್ಷ ಶತಾಯುಷಿಗಳಿದ್ದಾರೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
12 ರಾಜ್ಯಗಳಲ್ಲಿ ಮಹಿಳಾ ಮತದಾರರೇ ಅಧಿಕ!
ನವದೆಹಲಿ: 18ನೇ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹರಿರುವ ಮತದಾರರ ಪೈಕಿ 12 ರಾಜ್ಯಗಳಲ್ಲಿ ಪುರುಷರಿಗಿಂತ ಮಹಿಳಾ ಮತದಾರರ ಸಂಖ್ಯೆಯೇ ಹೆಚ್ಚಿರುವುದಾಗಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ. ಮತದಾರರ ಪಟ್ಟಿಯಲ್ಲಿ ಲಿಂಗಾನುಪಾತ 948ಕ್ಕೇರಿದ್ದು (ಪ್ರತಿ ಸಾವಿರಕ್ಕೆ) ಈ ಬಾರಿ 18-19 ವಯಸ್ಸಿನ 85.3 ಲಕ್ಷ ಹೊಸ ಮಹಿಳಾ ಮತದಾರರು ತಮ್ಮ ಹೆಸರನ್ನು ಮತಪಟ್ಟಿಗೆ ನೋಂದಾಯಿಸಿಕೊಂಡಿದ್ದಾರೆ. ಇದರೊಂದಿಗೆ ಒಟ್ಟು ಮಹಿಳಾ ಮತದಾರರ ಸಂಖ್ಯೆ 49.72 ಕೋಟಿಗೆ ಏರಿಕೆಯಾಗಿದೆ. ಇದು ಚುನಾವಣಾ ಪ್ರಕ್ರಿಯೆಯಲ್ಲಿ ಮಹಿಳಾ ಪಾಲ್ಗೊಳ್ಳುವಿಕೆ ಹೆಚ್ಚುತ್ತಿರುವುದನ್ನು ಸೂಚಿಸುತ್ತದೆ ಎಂದು ಮುಖ್ಯ ಚುನಾವಣಾ ಅಯುಕ್ತರು ಮಾಹಿತಿ ನೀಡಿದ್ದಾರೆ.
Video 10.5 ಲಕ್ಷ ಮತಗಟ್ಟೆ, 55 ಲಕ್ಷ ಇವಿಎಂ: ಏ.19ರಿಂದ ಜೂ.1ರ ವರೆಗೆ ಲೋಕಸಭಾ ಚುನಾವಣೆ!
3 ರಾಜ್ಯಗಳಲ್ಲಿ ಎಲ್ಲ 7 ಹಂತದ ಚುನಾವಣೆ
ನವದೆಹಲಿ: ಒಟ್ಟು 22 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಕೇವಲ 1 ಮತದಾನದ ದಿನದಲ್ಲಿ ಮತದಾನಕ್ಕೆ ಒಳಗಾಗಲಿವೆ. ಆದರೆ ಮೂರು ರಾಜ್ಯಗಳು ಎಲ್ಲಾ ಏಳು ಹಂತಗಳಲ್ಲಿ ಮತದಾನ ಎದುರಿಸಲಿವೆ. ಏಳೂ ಹಂತಗಳಲ್ಲಿ ಚುನಾವಣಾ ದಿನಾಂಕಗಳನ್ನು ಹೊಂದಿರುವ ರಾಜ್ಯಗಳೆಂದರೆ ಉತ್ತರ ಪ್ರದೇಶ, ಬಿಹಾರ ಮತ್ತು ಪಶ್ಚಿಮ ಬಂಗಾಳ.
2024ರ ಲೋಕಸಭಾ ಚುನಾವಣೆ ಏಪ್ರಿಲ್ 19 ರಿಂದ ಜೂನ್ 1 ರವರೆಗೆ ಒಟ್ಟು ಏಳು ಹಂತಗಳಲ್ಲಿ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ನಡೆದು ಫಲಿತಾಂಶ ಘೋಷಣೆಯಾಗಲಿದೆ. ಕರ್ನಾಟಕದಲ್ಲಿ ಎಪ್ರಿಲ್ 26 ಹಾಗೂ ಮೇ7 ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ಸೆಂಟ್ರಲ್ನಲ್ಲಿ ಮೊದಲ ಹಂತದಲ್ಲಿ ಮತದಾನವಾಗಲಿದೆ. 2ನೇ ಹಂತದ ಚುನಾವಣೆ ಮೇ 7 ರಂದು ಶಿವಮೊಗ್ಗ, ದಾವಣಗೆರೆ, ಹಾವೇರಿ, ಉತ್ತರ ಕನ್ನಡ, ಬಳ್ಳಾರಿ, ಧಾರವಾಡ, ಕೊಪ್ಪಳ, ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ರಾಯಚೂರು, ಬಿಜಾಪುರ ಕಲಬುರಗಿ ಮತ್ತು ಬೀದರ್ ಕ್ಷೇತ್ರಗಳಲ್ಲಿ ನಡೆಯಲಿದೆ.
ಇದೇ ಮೊದಲ ಬಾರಿಗೆ ವೋಟ್ ಫ್ರಮ್ ಹೋಮ್ ಅವಕಾಶ, ಯಾರು ಮನೆಯಿಂದ ಮತದಾನಕ್ಕೆ ಅರ್ಹ?