Lok Sabha Election 2024: ಯದುವೀರ್ ಗೆಲ್ಲಿಸುವಂತೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮನವಿ

By Govindaraj S  |  First Published Apr 4, 2024, 8:29 AM IST

ರಾಜವಂಶಸ್ಥರು ಹಿಂದುಳಿದವರು, ದಲಿತರು, ಬಡವರಿಗೆ ಸಾಮಾಜಿಕ ನ್ಯಾಯ ಕೊಡಿಸಿದ್ದಾರೆ. ಈ ಎಲ್ಲಾ ಸೇವಾ ಕಾರ್ಯಕ್ಕೆ ಮನ್ನಣೆ ನೀಡಿ ಈ ಬಾರಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಗೆಲ್ಲಿಸುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದರು. 


ಮೈಸೂರು (ಏ.04): ರಾಜವಂಶಸ್ಥರು ಹಿಂದುಳಿದವರು, ದಲಿತರು, ಬಡವರಿಗೆ ಸಾಮಾಜಿಕ ನ್ಯಾಯ ಕೊಡಿಸಿದ್ದಾರೆ. ಈ ಎಲ್ಲಾ ಸೇವಾ ಕಾರ್ಯಕ್ಕೆ ಮನ್ನಣೆ ನೀಡಿ ಈ ಬಾರಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಗೆಲ್ಲಿಸುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದರು. ಹಾರ್ಡಿಂಜ್ ವೃತ್ತದ ಬಳಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಮೈಸೂರಿಗೆ ಕುಡಿಯುವ ನೀರು ಸೇರಿದಂತೆ ಸಾವಿರಾರು ಯೋಜನೆಯನ್ನು ಒಡೆಯರ್ ನೀಡಿದ್ದಾರೆ. 

ಕಾಂಗ್ರೆಸ್ ಗ್ಯಾರಂಟಿಗಳಿಂದ ಸಾರ್ವಜನಿಕರು ತಮ್ಮ ಮಕ್ಕಳ ಭವಿಷ್ಯ ರೂಪಿಸಲು ಸಾಧ್ಯವಾಗುವುದಿಲ್ಲ. ರಾಜ್ಯಕ್ಕೆ ನೀಡಿರುವ ಪಂಚ ಗ್ಯಾರಂಟಿಯಿಂದ ಜನರಿಗೆ ಒಳಿತಾಗುವುದಕ್ಕಿಂತ ಸಾಲದ ಹೊರೆ ಹೆಚ್ಚಾಗುತ್ತದೆ ಎಂದರು. ಗ್ಯಾರಂಟಿ ಅನುಷ್ಠಾನಕ್ಕಾಗಿ 52 ಸಾವಿರ ಕೋಟಿ ರೂ. ಹೊಂದಿಸಲು ಕೋಟ್ಯಂತರ ರೂ. ಸಾಲ ಮಾಡಿದ್ದಾರೆ. ಒಂದು ಕಡೆ ಗ್ಯಾರಂಟಿ ನೀಡಿದರೂ ಮತ್ತೊಂದು ಕಡೆ ಜನರಿಗೆ ಹೆಚ್ಚು ತೆರಿಗೆ ಹಾಕಲಾಗುತ್ತಿದೆ. ಇದನ್ನು ಜನ ಏಕೆ ಅರ್ಥ ಮಾಡಿಕೊಂಡಿಲ್ಲ. 

Tap to resize

Latest Videos

ಈ ದುರಾಡಳಿತ ಕೊನೆಯಾಗಿಸಲು ಮೈತ್ರಿ ಅಭ್ಯರ್ಥಿ ಬೆಂಬಲಿಸಬೇಕು ಎಂದು ಅವರು ಮನವಿ ಮಾಡಿದರು.  ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿ, ದೇಶದ ಎಲ್ಲೆಡೆ ಮೈತ್ರಿ ಪರ ಅಲೆ ಇದೆ. 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ. ದೇಶದಲ್ಲಿ ಬಿಜೆಪಿಗೆ 450 ಸ್ಥಾನ ದೊರೆಯಲಿದ್ದು ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಅಧಿಕಾರ ಹಿಡಿಯುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದರು. ಮೈಸೂರು ರಾಜವಂಶಸ್ಥರು ಈ ಭಾಗದ ಎಲ್ಲಾ ಸಮುದಾಯಗಳಿಗೆ ಅಪಾರ ಕೊಡುಗೆ ನೀಡಿದ್ದಾರೆ. 

ಫೋರ್ಬ್ಸ್ ಬಿಲಿಯನೇರ್‌ಗಳ ಪಟ್ಟಿ ಬಿಡುಗಡೆ: ದೇಶದ ಶ್ರೀಮಂತ ವ್ಯಕ್ತಿಗಳಲ್ಲಿ ಅಂಬಾನಿಗೆ ನಂ.1, ಅದಾನಿಗೆ ನಂ.2 ಸ್ಥಾನ!

ಸಮಾಜಕ್ಕೆ ಅವರು ನೀಡಿದ ಕೊಡುಗೆ ಪರಿಗಣಿಸಿ ಈ ಬಾರಿ ಚುನಾವಣೆಯಲ್ಲಿ ಯದುವೀರ ಅವರನ್ನು ಗೆಲ್ಲಿಸಬೇಕು ಎಂದು ಅವರು ಮನವಿ ಮಾಡಿದರು. ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್, ಬಿಜೆಪಿ ಎಲ್ಲಿದೆ ಎನ್ನುತ್ತಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಮೆರವಣಿಗೆಯಲ್ಲಿ ಸೇರಿರುವ ಜನರೇ ಅದಕ್ಕೆ ಪ್ರತ್ಯುತ್ತವಾಗಿದೆ. ಯದುವೀರ ಐದು ಲಕ್ಷಕ್ಕೂ ಹೆಚ್ಚು ಮತಗಳಿಂದ ಗೆಲ್ಲುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

click me!