ಕಾಂಗ್ರೆಸ್‌ನಲ್ಲಿ ಮೊದಲಿನಿಂದಲೂ ಕುಟುಂಬ ರಾಜಕಾರಣ: ಬೊಮ್ಮಾಯಿ

Published : Mar 31, 2024, 04:23 AM IST
ಕಾಂಗ್ರೆಸ್‌ನಲ್ಲಿ ಮೊದಲಿನಿಂದಲೂ ಕುಟುಂಬ ರಾಜಕಾರಣ: ಬೊಮ್ಮಾಯಿ

ಸಾರಾಂಶ

ಕಾಂಗ್ರೆಸ್‌ನಲ್ಲಿ ಮಂತ್ರಿಗಳ ಕುಟುಂಬಸ್ಥರಿಗೆ ಟಿಕೆಟ್ ನೀಡಿರುವ ಕುರಿತು ಪ್ರತಿಕ್ರಿಯಿಸಿ, ಕಾಂಗ್ರೆಸ್‌ನಲ್ಲಿ ಕುಟುಂಬ ರಾಜಕಾರಣ ಮೊದಲಿನಿಂದಲೂ ಬಂದಿದೆ. ಆದರೆ, ಈ ಬಾರಿ ಈ ಪ್ರಮಾಣ ಜಾಸ್ತಿಯಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ.  

ಹಾವೇರಿ (ಮಾ.31): ಕಾಂಗ್ರೆಸ್‌ನಲ್ಲಿ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಗಳಿಲ್ಲದೆ ಸಚಿವರ ಮಕ್ಕಳು ಹಾಗೂ ಕುಟುಂಬಸ್ಥರಿಗೆ ಟಿಕೆಟ್ ಕೊಟ್ಟಿದ್ದಾರೆ. ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಇಬ್ಭಾಗವಾಗಲಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿ, ಮೋದಿ ಪ್ರಮಾಣ ವಚನ ಸ್ವೀಕರಿಸಿ ಮೂರು ತಿಂಗಳಲ್ಲಿ ಕಾಂಗ್ರೆಸ್ ಇಬ್ಭಾಗ ಆಗಲಿದೆ. ಅದರ ಪರಿಣಾಮ ಕರ್ನಾಟಕದ ಮೇಲೂ ಆಗಲಿದೆ ಎಂದರು.

ಕಾಂಗ್ರೆಸ್‌ನಲ್ಲಿ ಮಂತ್ರಿಗಳ ಕುಟುಂಬಸ್ಥರಿಗೆ ಟಿಕೆಟ್ ನೀಡಿರುವ ಕುರಿತು ಪ್ರತಿಕ್ರಿಯಿಸಿ, ಕಾಂಗ್ರೆಸ್‌ನಲ್ಲಿ ಕುಟುಂಬ ರಾಜಕಾರಣ ಮೊದಲಿನಿಂದಲೂ ಬಂದಿದೆ. ಆದರೆ, ಈ ಬಾರಿ ಈ ಪ್ರಮಾಣ ಜಾಸ್ತಿಯಾಗಿದೆ ಎಂದರು. ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕಾಂಗ್ರೆಸ್ ಹೈಕಮಾಂಡ್‌ನವರು ಸುಮಾರು ಹತ್ತು ಹನ್ನೆರಡು ಜನ ಮಂತ್ರಿಗಳಿಗೆ ಹೇಳಿದ್ದರು. ಆದರೆ, ಅವರಿಗೆ ಆರಿಸಿ ಬರುವ ವಿಶ್ವಾಸ ಇರಲಿಲ್ಲ, ಹಾಗಾದರೆ ನೀವೇ ಅಭ್ಯರ್ಥಿಯನ್ನು ಕೊಡಿ ಅಂದಾಗ ಅನಿವಾರ್ಯವಾಗಿ ಅವರು ತಮ್ಮ ಮಕ್ಕಳು, ಅಣ್ಣ-ತಮ್ಮಂದಿರಿಗೆ ಟಿಕೆಟ್ ಕೊಡಿಸಿದ್ದಾರೆ ಎಂದು ಟೀಕಿಸಿದರು.

ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಮತ, ಡಿಕೆಶಿ ಈಗೇನು ಹೇಳ್ತಾರೆ?: ಬೊಮ್ಮಾಯಿ

ಚುನಾವಣೆ ಫಲಿತಾಂಶ ಕಾಂಗ್ರೆಸ್ಸಿಗರ ಅಧಿಕಾರದ ಮದ ಇಳಿಸಲಿದೆ: ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರದ ಮದದಲ್ಲಿದೆ. ಚುನಾವಣೆ ಫಲಿತಾಂಶ ಬಂದ ಬಳಿಕ ಇವರ ಮದ ಇಳಿದು ಕಣ್ಣು ತೆರೆಸಲಿದೆ ಎಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ಬಿಜೆಪಿ ಕಚೇರಿ ಆವರಣದಲ್ಲಿ ಶುಕ್ರವಾರ ಸಂಜೆ ಏರ್ಪಡಿಸಿದ್ದ ಅನ್ಯ ಪಕ್ಷಗಳ ಹಿಂದುಳಿದ ವರ್ಗಗಳ ಮುಖಂಡರು, ನಗರಸಭೆ ಸದಸ್ಯರ ಬಿಜೆಪಿ ಸೇರ್ಪಡೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯಾದ್ಯಂತ ಬದಲಾವಣೆ ಗಾಳಿ ಬೀಸುತ್ತಿದೆ. ರಾಜ್ಯದ ಜನರು ಬಹಳ ಪ್ರಬುದ್ಧರು. ಈ ಹಿಂದೆ ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಗಳಿಸಿತ್ತು. ಆದರೆ ನಂತರ ನಡೆದ ವಿಧಾನಸಭೆ ಚುನಾವಣೆಯಲ್ಲಿ ಪುನಃ ರಾಮಕೃಷ್ಣ ಹೆಗಡೆ ನೇತೃತ್ವದಲ್ಲಿ ಜನತಾ ದಳ ಸರ್ಕಾರ ಅಧಿಕಾರಕ್ಕೆ ಬಂದಿತು. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ವಿದೇಶ ಬಂಡವಾಳ ಹರಿದು ಬರುತ್ತಿದೆ. ಯುಪಿಎ ಸರ್ಕಾರವಿದ್ದಾಗ ಪದೇ ಪದೇ ಪಾಕಿಸ್ತಾನದಿಂದ ದಾಳಿ ಆಗುತ್ತಿತ್ತು. ಈಗ ಕಾಲ ಬದಲಾಗಿದೆ. 

ಮೋದಿಯವರು ದಾಳಿಗೆ ಪ್ರತಿಯಾಗಿ ಸರ್ಜಿಕಲ್ ಸ್ರ‍್ಟೈಕ್ ಮಾಡಿಸಿದ್ದಾರೆ. ಕೇಂದ್ರ ಸರ್ಕಾರ ರಾಜ್ಯದ ಜನರಿಗೆ ಅಗತ್ಯ ಸೌಕರ್ಯಗಳನ್ನು ಕೊಟ್ಟಿದೆ. ಜನರಿಗೆ ಬದುಕನ್ನು ಕಟ್ಟಿಕೊಳ್ಳುವ ಭರವಸೆಯ ಗ್ಯಾರಂಟಿಯನ್ನು ಮೋದಿ ಕೊಟ್ಟಿದ್ದಾರೆ. ಆದ್ದರಿಂದ ಭವ್ಯ ಭಾರತ ನಿರ್ಮಾಣಕ್ಕಾಗಿ ಎಲ್ಲರೂ ಬಿಜೆಪಿಗೆ ಮತ ನೀಡುವ ಮೂಲಕ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡೋಣ. ಸ್ವಾವಲಂಬಿ ಬದುಕಿಗಾಗಿ ಎಲ್ಲರೂ ಬಿಜೆಪಿಗೆ ಮತ ನೀಡಿ ಎಂದು ಮನವಿ ಮಾಡಿದರು. ಮಾಜಿ ಸಚಿವ ಬೈರತಿ ಬಸವರಾಜ ಮಾತನಾಡಿ, ಕಾಂಗ್ರೆಸ್ ಸರ್ಕಾರ ನಮ್ಮ ಸರ್ಕಾರದ ಅಭಿವೃದ್ಧಿ ಕೆಲಸ ನಿಲ್ಲಿಸಿದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿ ಸಲುವಾಗಿ ಬಸವರಾಜ ಬೊಮ್ಮಾಯಿ ಅವರಿಗೆ ಮತ ನೀಡಬೇಕು. 

ಎನ್‌ಡಿಆರ್‌ಎಫ್ ಹಣಕ್ಕಾಗಿ ಸುಪ್ರೀಂಗೆ ಹೋಗಿರುವುದು ರಾಜಕೀಯ ತಂತ್ರಗಾರಿಕೆ: ಬೊಮ್ಮಾಯಿ

ಸಮಾಜದ ಎಲ್ಲರೂ ಪಕ್ಷಕ್ಕೆ ಬೆಂಬಲ ನೀಡುವ ಮೂಲಕ ದೇಶದಲ್ಲಿ ಮತ್ತೊಮ್ಮೆ ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡಬೇಕು ಎಂದರು. ಮಾಜಿ ಸಚಿವ ಬಿ.ಸಿ. ಪಾಟೀಲ ಮಾತನಾಡಿ, ಈ ಹಿಂದೆ ಹಿಂದುಳಿದ ವರ್ಗಗಳ ಜನರು ತಮ್ಮ ಆಸ್ತಿ ಎಂದು ಕೆಲವರು ಭಾವಿಸಿದ್ದರು. ಕಾಂಗ್ರೆಸ್ನವರು ತಾವು ನುಡಿದಂತೆ ನಡೆದಿರುವುದಾಗಿ ಹೇಳುತ್ತಾರೆ. ಆದರೆ ಅಭಿವೃದ್ಧಿ ಶೂನ್ಯ ಆಗಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದ ಕೆಲಸಗಳನ್ನು ತಮ್ಮದೇ ಎಂದು ಬಿಂಬಿಸುತ್ತಾರೆ. ದೇಶದ ಭದ್ರತೆ ಬಹುಮುಖ್ಯ. ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನು ಮತ್ತೊಮ್ಮೆ ವಿಧಾನಸೌಧ ಒಳಗೆ ಬಿಡಬಾರದು. ಮೋದಿಯವರು ರೈತರಿಗೆ ಕೃಷಿ ಯೋಜನೆಗಳನ್ನು, ಜನರಿಗೆ ಉಚಿತವಾಗಿ ಅಕ್ಕಿ, ಕಾರ್ಮಿಕರಿಗೆ ದುಡಿಮೆ ಕೊಟ್ಟಿದ್ದಾರೆ. ಇದನ್ನು ನೋಡಿ ಎಲ್ಲರೂ ಬಿಜೆಪಿಗೆ ಮತ ನೀಡಬೇಕು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

24,300 ಹುದ್ದೆ ಭರ್ತಿಗೆ ಆರ್ಥಿಕ ಇಲಾಖೆ ಅಸ್ತು : ಯಾವ ಇಲಾಖೆಯ ಎಷ್ಟು ಹುದ್ದೆ ?
ಡಾ। ಯತೀಂದ್ರ ವಿರುದ್ಧ ಡಿಕೆಶಿ ಬಣ ಮತ್ತೆ ಬಾಣ