ಬಿಜೆಪಿ ಕಾರ್ಯಕರ್ತರಿಂದ ಹಿಂದೂ ಮುಖಂಡ ಪ್ರವೀಣ್ ಖಾಂಡ್ಯನ ಮೇಲೆ ಹಲ್ಲೆ? ಆಸ್ಪತ್ರೆಗೆ ದಾಖಲು

By Ravi Janekal  |  First Published Apr 26, 2024, 11:14 PM IST

ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಮತದಾರರು ಕಳೆದ ಬಾರಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಮತ ಚಲಾಯಿಸಿದ್ದಾರೆ. ಶಾಂತಿಯುತವಾಗಿ ಮತದಾನದ ನಡೆಯುತ್ತಿದ್ದಾಗಲೇ ಚಿಕ್ಕಮಗಳೂರು ತಾಲೂಕಿನ ಉಜೈನಿ ಮತಗಟ್ಟೆ ಬಳಿ ಬಿಜೆಪಿ ಕಾರ್ಯಕರ್ತರು ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.


ಚಿಕ್ಕಮಗಳೂರು (ಏ.26): ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಮತದಾರರು ಕಳೆದ ಬಾರಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಮತ ಚಲಾಯಿಸಿದ್ದಾರೆ. ಶಾಂತಿಯುತವಾಗಿ ಮತದಾನದ ನಡೆಯುತ್ತಿದ್ದಾಗಲೇ ಚಿಕ್ಕಮಗಳೂರು ತಾಲೂಕಿನ ಉಜೈನಿ ಮತಗಟ್ಟೆ ಬಳಿ ಬಿಜೆಪಿ ಕಾರ್ಯಕರ್ತರು ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

ಹಿಂದೂ ಕಾರ್ಯಕರ್ತ ಪ್ರವೀಣ ಖಾಂಡ್ಯ ಹಲ್ಲೆಗೊಳಗಾದ ಹಿಂದೂ ಕಾರ್ಯಕರ್ತ. ಇಂದು ಮತದಾನ ಮಾಡಲು ಮತಗಟ್ಟೆಗೆ ಹೋಗಿದ್ದ ಸಂದರ್ಭದಲ್ಲಿ ಏಕಾಏಕಿ ಬಂದು ಗುಂಪು ದಾಳಿ ನಡೆಸಿದ್ದಾರೆನ್ನಲಾಗಿದೆ. ಹಠಾತ್ ನಡೆದ ಹಲ್ಲೆಯಿಂದಾಗಿ ಪ್ರವೀಣ್ ಖಾಂಡ್ಯನಿಗೆ ತಲೆ, ಕೈಗಳಿಗೆ ಗಂಭೀರ ಗಾಯವಾಗಿದ್ದು, ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Tap to resize

Latest Videos

undefined

ಅನ್ನ ಕೊಟ್ಟ ಕಾಂಗ್ರೆಸ್ ಬೇಕಾ? ಬಡವರ ಹೊಟ್ಟೆ ಮೇಲೆ ಹೊಡೆದ ಬಿಜೆಪಿ ಬೇಕಾ? : ಸಿದ್ದರಾಮಯ್ಯ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದ ಪ್ರವೀಣ್. ಹಳೇ ವೈಷಮ್ಯದಿಂದ ಬಿಜೆಪಿ ಕಾರ್ಯಕರ್ತರೇ ದಾಳಿ ನಡೆಸಿರುವ ಆರೋಪ ಕೇಳಿಬಂದಿದೆ. ಹಿಂದೂ ಕಾರ್ಯಕರ್ತನ ಮೇಲೆ ಬಳಿಕ ಆಸ್ಪತ್ರೆ ಮುಂಭಾಗ ನೂರಾರು ಸಂಖ್ಯೆಯಲ್ಲಿ ಜಮಾವಣೆಯಾಗಿರುವ ಹಿಂದೂ ಕಾರ್ಯಕರ್ತರು. ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ.

click me!