
ಮಂಡ್ಯ (ಏ.4): ಮಂಡ್ಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ರಾಜ್ಯ ರಾಜಕಾರಣದಿಂದ ರಾಷ್ಟ್ರರಾಜಕಾರಣದತ್ತ ಮುಖಮಾಡಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ತಮ್ಮ ಉಮೇದುರಾರಿಕೆ ಅಫಿಡವಿಟ್ ತಮ್ಮ ಆಸ್ತಿ ವಿವರ ಸಹ ಘೋಷಿಸಿಕೊಂಡಿದ್ದು, ಬರೋಬ್ಬರಿ 217.21 ಕೋಟಿ ರೂಪಾಯಿ ಆಸ್ತಿ ಹೊಂದಿದ್ದಾರೆ. ಅತ್ತಿಗೆ ಭವಾನಿ ರೇವಣ್ಣರಿಂದ 3.26 ಲಕ್ಷ ರೂ ಸಾಲ ಹಾಗೂ ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರನಿಂದಲೂ ಎಚ್‌ಡಿ ಕುಮಾರಸ್ವಾಮಿ ಸಾಲ ಪಡೆದಿದ್ದಾರೆ. ಲೋಕಾಯುಕ್ತ, ಕ್ರಿಮಿನಲ್, ಸಿವಿಲ್ ಪ್ರಕರಣ ಎದುರಿಸುತ್ತಿದ್ದು, ಲೋಕಾಯುಕ್ತದಲ್ಲಿ ವಿಚಾರಣೆ ಹಂತದಲ್ಲಿರುವ 3 ಪ್ರಕರಣಗಳು ಇರುವ ಅಫಿಡವಿಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಇನ್ನು ಪತ್ನಿ ಅನಿತಾ ಕುಮಾರಸ್ವಾಮಿಯವರು ಪತಿಗಿಂತಲೂ ಹೆಚ್ಚು ಶ್ರೀಮಂತರಾಗಿದ್ದಾರೆ ಎಂದರೆ ನಂಬಲೇಬೇಕು. ಹಾಗಾದರೆ ಎಚ್‌ಡಿ ಕುಮಾರಸ್ವಾಮಿ ಕುಟುಂಬದ ಒಟ್ಟು ಆಸ್ತಿ ಎಷ್ಟು? ಏನೇನಿವೆ ಇಲ್ಲಿದೆ ವಿವರ.
ಮೈಸೂರು ಮಹಾರಾಜ ಯದುವೀರ ಒಡೆಯರ ಬಳಿ 4.99 ಕೋಟಿ ಆಸ್ತಿಯಿದ್ದರೂ, ಸ್ವಂತಕ್ಕೊಂದು ಮನೆ, ಕಾರು ಇಲ್ಲ!
ಕುಟುಂಬದ ಒಟ್ಟು ಚರಾಸ್ತಿ 102.23 ಕೋಟಿ ರೂ, ಒಟ್ಟು ಸ್ಥಿರಾಸ್ತಿ-114.98 ಕೋಟಿ ರೂಪಾಯಿಗಳಾಗಿದ್ದು ಒಟ್ಟು -217.21 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿರುವುದಾಗಿ ಅಫಿಡವಿಟ್‌ನಲ್ಲಿ ಘೋಷಿಸಿಕೊಂಡಿದ್ದಾರೆ. ಇದು ಕಳೆದ ವರ್ಷಕ್ಕಿಂತ ಎಚ್‌ಡಿಕೆ ಆಸ್ತಿ ಮೌಲ್ಯ 50.07 ಹೆಚ್ಚಳವಾಗಿರುವುದು ವಿಶೇಷ.
ಎಚ್‌ಡಿ ಕುಮಾರಸ್ವಾಮಿ ಆಸ್ತಿ ವಿವರ:
ಒಟ್ಟು: ₹62.82 ಕೋಟಿ
ಷೇರು ಮಾರುಕಟ್ಟೆಯಲ್ಲಿ ಕೋಟಿ ಕೋಟಿ ಹಣ ಹಾಕಿರುವ ರಾಹುಲ್, ಐದು ವರ್ಷದಲ್ಲಿ ಆಸ್ತಿ 5 ಕೋಟಿ ಏರಿಕೆ!
ಪತ್ನಿ ಅನಿತಾ ಕುಮಾರಸ್ವಾಮಿ ಆಸ್ತಿ ಹೀಗಿದೆ
ಒಟ್ಟು ಆಸ್ತಿ ₹154.39 ಕೋಟಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.