'ಎಸಿ ರೂಂನಲ್ಲಿ ಕುಳಿತ ಜೋಶಿಗೆ ₹2000 ಬೆಲೆ ಗೊತ್ತಿಲ್ಲ'; ಗೃಹಲಕ್ಷ್ಮೀ ಬಗ್ಗೆ ಲೇವಡಿ ಮಾಡಿದ್ದಕ್ಕೆ ಹೆಬ್ಬಾಳ್ಕರ್ ತಿರುಗೇಟು

By Ravi Janekal  |  First Published Apr 14, 2024, 12:31 PM IST

ಲೋಕಸಭಾ ಚುನಾವಣೆ ಹಿನ್ನೆಲೆ ಶನಿವಾರ ಹಿಂಡಲಗಾದಲ್ಲಿ ನಡೆದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಜಿಲ್ಲೆ ಬಿಜೆಪಿ ಉಸ್ತುವಾರಿ ಸಂಜಯ್ ಪಾಟೀಲ್ ನೀಡಿರುವ 'ಅಕ್ಕನಿಗೆ ಎಕ್ಸ್‌ಟ್ರಾ' ಪೆಗ್ ಹೇಳಿಕೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಬೆಳಗಾವಿ (ಏ.14): ಲೋಕಸಭಾ ಚುನಾವಣೆ ಹಿನ್ನೆಲೆ ಶನಿವಾರ ಹಿಂಡಲಗಾದಲ್ಲಿ ನಡೆದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಜಿಲ್ಲೆ ಬಿಜೆಪಿ ಉಸ್ತುವಾರಿ ಸಂಜಯ್ ಪಾಟೀಲ್ ನೀಡಿರುವ 'ಅಕ್ಕನಿಗೆ ಎಕ್ಸ್‌ಟ್ರಾ' ಪೆಗ್ ಹೇಳಿಕೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ಬೆಳಗಾವಿಯಲ್ಲಿ ಸಂಜಯ್ ಪಾಟೀಲ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ನಾನು ರಾ ರಾಜ್ಯದ ಮಹಿಳೆಯರನ್ನು ಪ್ರತಿನಿಧಿಸುತ್ತಿದ್ದೇನೆ. ನಾಲಗೆ ಮೇಲೆ ಹಿಡಿತ ಇರಬೇಕು. ನನ್ನ ಬಗ್ಗೆ ಕೀಳು ಅಭಿರುಚಿಯ ಹೇಳಿಕೆ ನೀಡಿದ್ರೂ ವೇದಿಕೆ ಮೇಲಿದ್ದ ಬಿಜೆಪಿ ಹಿರಿಯ ನಾಯಕರೆನಿಸಿಕೊಂಡವರು ಏಕೆ ತಡೆಯಲಿಲ್ಲ? ಸಂಜಯ ಪಾಟೀಲ್ ಹೇಳಿಕೆಗೆ ಜಗದೀಶ್ ಶೆಟ್ಟರ್ ಕೂಡ ನಕ್ಕಿರುವುದು ನೋಡಿದರೆ ಸಂಜಯ ಪಾಟೀಲ್ ಮೂಲಕ ಹೇಳಿಕೆ ನೀಡಿಸಿದ್ದರಾ? ಎಂದು ಪ್ರಶ್ನಿಸಿದರು.

Latest Videos

undefined

ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಕರೆಂಟು ಹೋಗುತ್ತೆ, ಬಸ್ ನಿಲ್ಲುತ್ತೆ, 2000 ಬಂದ್ ಅಗುತ್ತೆ: ರಮೇಶ್ ಜಾರಕಿಹೊಳಿ

ನನ್ನ ಕುರಿತು ಸಂಜಯ್ ಪಾಟೀಲ್ ನೀಡಿರುವ ಹೇಳಿಕೆ ನನಗಷ್ಟೇ ಅಲ್ಲ, ಇಡೀ ಸ್ತ್ರೀಕುಲಕ್ಕೆ ಮಾಡಿದ ಅವಮಾನ ಇದು. ನಾನು ಲಿಂಗಾಯತ ಸಮಾಜದ ಹೆಣ್ಣುಮಗಳು. ಲಿಂಗಾಯತ ಸಮಾಜಕ್ಕೆ ಮಾಡಿದ ಅವಮಾರ್ಯಾದೆ ಇದು. ನನ್ನ ಆತ್ಮಗೌರವಕ್ಕೆ ಧಕ್ಕೆಯಾಗಿದೆ. ಅವರ ನೀಚತನದ ಹೇಳಿಕೆ ವಿರುದ್ಧ ಧಿಕ್ಕಾರ ಕೂಗುವಂತೆ ಇಡೀ ರಾಜ್ಯದ ಮಹಿಳೆಯರಿಗೆ ಕರೆ ಕೊಡುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಕ್ಕಳು ಹುಟ್ಟಿದರೂ ಗ್ಯಾರಂಟಿ ಕಾರಣ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲೇವಡಿ ವಿಚಾರಕ್ಕೆ ಕಿಡಿಕಾರಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ನಾನು ನಿಮ್ಮ ಹಾಗೆ ಟಾಂಟ್ ಹೊಡೆಯಲ್ಲ. ಎಸಿ ರೂಂ ನಲ್ಲಿ ಕುಳಿತಿರೋ ನಿಮಗೆ 2 ಸಾವಿರ ರೂಪಾಯಿಯ ಬೆಲೆ ಅರಿವಿಲ್ಲ ಎಂದು ತಿರುಗೇಟು ನೀಡಿದರು. ಇದೇ ವೇಳೆ ಗೃಹಲಕ್ಷ್ಮೀ ಯೋಜನೆ ಪಡೆದು ದಾರಿತಪ್ಪಿದ್ದಾರೆಂಬ ಎಚ್‌ಡಿ ಕುಮಾರಸ್ವಾಮಿ ಹೇಳಿಕೆ ಪ್ರಸ್ತಾಪಿಸಿದ ಸಚಿವೆ, ಕುಮಾರಸ್ವಾಮಿಯವರು ಹಿರಿಯರು. ಗೃಹಲಕ್ಷ್ಮೀ ಯೋಜನೆ ಲಾಭ ಪಡೆದು ಯಾವ ಹಳ್ಳಿಯ ಮಹಿಳೆ ದಾರಿ ತಪ್ಪಿದ್ದಾರೆ ಎಂದು ತೋರಿಸಿಕೊಡಿ ಎಂದು ಸವಾಲು ಹಾಕಿದರು. 

ಹಳ್ಳಿಯ ಹೆಣ್ಣು ಮಗಳ ಬಗ್ಗೆ ಯಾಕಿಷ್ಟು ಹಗುರವಾಗಿ ಮಾತನಾಡಿದ್ದಾರೆ. ಕಾಂಗ್ರೆಸ್ ಯಾವುದೇ ಸ್ವಾರ್ಥಕ್ಕಾಗಿ ಈ ಯೋಜನೆ ಜಾರಿ ಮಾಡಿಲ್ಲ. ಬಿಜೆಪಿಯವರು ಮಹಿಳೆ ಸಬಲಿಕರಣ ವಿರೋಧಿಗಳು ಇವರ ಮನಸ್ಥಿತಿ ಬಗ್ಗೆ ಜನರಿಗೆ ಗೊತ್ತಾಗಿದೆ. ಬರೀ ಸುಳ್ಳು ಹೇಳುವುದೇ ಬಿಜೆಪಿ ಅಜೆಂಡಾ ಆಗಿದೆ. ಸಮಾಜ ನಮ್ಮ ಜೊತೆಗೆ ಇದೆ. ಇಡೀ ಕಾಂಗ್ರೆಸ್ ಪಕ್ಷದ ನಾಯಕರು ನನ್ನ ಜೊತೆಗೆ ಇದ್ದಾರೆ. ಈ ಬಾರಿ ಚಿಕ್ಕೋಡಿ, ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ನಿಶ್ಚಿತ ಎಂದರು.

 

ಹುಬ್ಬಳ್ಳಿ ಜನ್ಮಭೂಮಿ, ಬೆಳಗಾವಿ ನನ್ನ ಕರ್ಮಭೂಮಿ-ಶೆಟ್ಟರ್; ಮೊದಲು ಮನೆ ಅಡ್ರೆಸ್ ತೋರಿಸಲಿ ಎಂದ ಹೆಬ್ಬಾಳ್ಕರ್

ಲೋಕಸಭಾ ಚುನಾವಣೆ ಮುಗಿದ ಬಳಿಕ ಕೇಂದ್ರ, ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ರಚನೆ ಆಗುತ್ತೆಂಬ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರಕ್ಕೆ ತಿರುಗೇಟು ನೀಡಿದ ಸಚಿವೆ ಹೆಬ್ಬಾಳ್ಕರ್, ನಾವು ರಾಜ್ಯದಲ್ಲಿ 135 ಸ್ಥಾನದಲ್ಲಿ ಗೆದ್ದಿದ್ದೇವೆ. ಸರ್ಕಾರ ಪತನದ ಬಗ್ಗೆ ಹಗಲು ಕನಸು ಕಾಣ್ತಿದ್ದಾರೆ, ನಾವೇನು ಸುಮ್ನೆ ಕುಳಿತುಕೊಳ್ಳಲ್ಲ ಎಂದರು. ಇದೇ ವೇಳೆ 2ಎ ಮೀಸಲಾತಿ ಕೊಡಿಸಿದರೆ ಒಂದು ಕೆಜಿ ಚಿನ್ನ ನೀಡುವುದಾಗಿ ನಿರಾಣಿ ಸವಾಲು ಹಾಕಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಹೆಬ್ಬಾಳ್ಕರ್, ಚುನಾವಣೆ ಮುಗಿದ ಬಳಿಕ ನಿರಾಣಿ ಅಣ್ಣನ ಬಗ್ಗೆ ಮಾತನಾಡುತ್ತೇನೆ. ಈ ಸಂಬಂಧ ಈಗಾಗಲೇ ನಮ್ಮ ಸಮಾಜ ಪ್ರತಿಕ್ರಿಯೆ ಕೊಟ್ಟಿದೆ. ನಾನು ಚುನಾವಣೆ ಮುಗಿದ ಬಳಿಕ ಮಾತನಾಡುತ್ತೇನೆ ಎಂದರು. 

click me!