ಮಗಳ ನಾಮಿನೇಷನ್ ಸಿಂಪಲ್ ಆಗಿ ಮಾಡ್ತೇನೆ. ಜನ ಸೇರೋದು ಬೇಡ, ಕಾರ್ಯಕರ್ತರು ಬರೋದು ಬೇಡ ಎಂದಿದ್ದಾರೆ. ಇದೇ ವೇಳೆ ಬಿಜೆಪಿ ಅಭ್ಯರ್ಥಿ ಅಣ್ಣಾ ಸಾಹೇಬ್ ಜೊಲ್ಲೆ ವಿರುದ್ಧ ಯಾವುದೇ ರೀತಿಯಲ್ಲಿ ವೈಯಕ್ತಿಕ ಟೀಕೆ ಮಾಡಬೇಡಿ ಎಂದು ಸಚಿವ ಸತೀಶ್ ಜಾರಕಿಹೊಳಿ ವಿಡಿಯೋ ಮೂಲಕ ಕಾರ್ಯಕರ್ತರಿಗೆ ಮನವಿ ಮಾ ಎಂದಿದ್ದಾರೆ.
ಚಿಕ್ಕೋಡಿ (ಏ.6) ಲೋಕಸಭಾ ಚುನಾವಣೆ ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆ ವಿವಿಧ ಪಕ್ಷಗಳ ಅಭ್ಯರ್ಥಿಗಳು ಲಕ್ಷಾಂತರ ಬೆಂಬಲಿಗರೊಂದಿಗೆ ಬೃಹತ್ ರೋಡ್ ಶೋ, ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಿ ತಮ್ಮ ಶಕ್ತಿ ಪ್ರದರ್ಶನ ಮಾಡುತ್ತಿದ್ದಾರೆ. ಆದರೆ ಇತ್ತ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕ ಜಾರಕಿಹೊಳಿ ಸಿಂಪಲ್ ಮಾತ್ರ ಯಾವುದೇ ರೋಡ್ ಶೋ, ಮೆರವಣಿಗೆ ಇಲ್ಲದೆ ಸಿಂಪಲ್ ಆಗಿ ನಾಮಪತ್ರ ಸಲ್ಲಿಸಲು ಮುಂದಾಗಿದ್ದಾರೆ.
ಈ ಬಗ್ಗೆ ವಿಡಿಯೋ ಮೂಲಕ ಮನವಿ ಮಾಡಿರುವ ಸಚಿವ ಸತೀಶ್ ಜಾರಕಿಹೊಳಿ, ಮಗಳ ನಾಮಿನೇಷನ್ ಸಿಂಪಲ್ ಆಗಿ ಮಾಡ್ತೇನೆ. ಜನ ಸೇರೋದು ಬೇಡ, ಕಾರ್ಯಕರ್ತರು ಬರೋದು ಬೇಡ ಎಂದಿದ್ದಾರೆ. ಇದೇ ವೇಳೆ ಬಿಜೆಪಿ ಅಭ್ಯರ್ಥಿ ಅಣ್ಣಾ ಸಾಹೇಬ್ ಜೊಲ್ಲೆ ವಿರುದ್ಧ ಯಾವುದೇ ರೀತಿಯಲ್ಲಿ ವೈಯಕ್ತಿಕ ಟೀಕೆ ಮಾಡಬೇಡಿ ಎಂದಿದ್ದಾರೆ. ಪ್ರವಾಹದ ಸಂದರ್ಭದಲ್ಲಿ ಅಣ್ಣಾ ಸಾಹೇಬ್ ಜೊಲ್ಲೆ ವಿದೇಶದಲ್ಲಿದ್ದರು ಎಂದು ಟ್ರೋಲ್ ಮಾಡಿದ್ದ ಕಾಂಗ್ರೆಸ್ ಕಾರ್ಯಕರ್ತರಿಗೆ ಬುದ್ಧಿ ಹೇಳಿದ್ದಾರೆ.
ಸುಳ್ಳು ಹೇಳುವುದೇ ಬಿಜೆಪಿಯ ಭರವಸೆ: ಸಚಿವ ಸತೀಶ್ ಜಾರಕಿಹೊಳಿ
ಅರೋಪಗಳು ಕೇವಲ ರಾಜಕೀಯಕ್ಕೆ ಮಾತ್ರ ಸೀಮಿತವಾಗಿರಬೇಕು. ವೈಯಕ್ತಿಕ ನಿಂದನೆ, ತೇಜೋವಧೆ ಮಾಡುವಂತಹ ಟ್ರೋಲ್ ಮಾಡಬಾರದು. ಬದಲಾಗಿ ಅವರ ವೈಫಲ್ಯ ಹೇಳುವ ಪ್ರಯತ್ನ ಮಾಡಿ ಆದರೆ ಯಾವುದೇ ಕಾರಣಕ್ಕೂ ವೈಯಕ್ತಿಕ ವಿಚಾರಗಳನ್ನು ಪೋಸ್ಟ್ ಮಾಡಬೇಡಿ ಎಂದು ಮನವಿ ಸಚಿವ ಸತೀಶ್ ಜಾರಕಿಹೊಳಿ ಮನವಿ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ.