ಕರ್ನಾಟಕ ಸೇರಿ ಯಾವುದೇ ರಾಜ್ಯಕ್ಕೂ ಕೇಂದ್ರದಿಂದ ನಯಾ ಪೈಸೆ ಬಾಕಿ ಇಲ್ಲ: ಭಗವಂತ ಖೂಬಾ

By Ravi Janekal  |  First Published Apr 2, 2024, 5:06 PM IST

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 28ಕ್ಕೆ 28 ಕ್ಷೇತ್ರಗಳನ್ನ ಗೆಲ್ಲುತ್ತದೆ. ಕಾಂಗ್ರೆಸ್ ಪಕ್ಷ ಶೂನ್ಯ ಸಾಧನೆ ಮಾಡುತ್ತದೆ. ಈಗಾಗಲೇ ಎಲ್ಲಾ ಶಾಸಕರಿಗೂ ಸಿಎಂ ಸಿದ್ದರಾಮಯ್ಯರ ಮೇಲೆ ಅಸಮಾಧಾನ ಇದೆ. ಚುನಾವಣೆಯಲ್ಲಿ ಸೋಲು ಕಂಡ ಬಳಿಕ ಶಾಸಕರ ಅಸಮಾಧಾನ ಇನ್ನಷ್ಟು ಸ್ಫೋಟಗೊಂಡು ಸರ್ಕಾರ ಬಿದ್ದುಹೋಗುತ್ತದೆ ಎಂದು ಕೇಂದ್ರ ಸಚಿವ ಖೂಬಾ ಭವಿಷ್ಯ ನುಡಿದರು.


ಬೀದರ್ (ಏ.2): ಕೇಂದ್ರ ಸರ್ಕಾರದಿಂದ ಕರ್ನಾಟಕ ಸೇರಿ ಯಾವುದೇ ರಾಜ್ಯಕ್ಕೂ ನಯಾ ಪೈಸಾ  ಕೊಡುವುದು ಬಾಕಿ ಇಲ್ಲ ಎಂದು ಕೇಂದ್ರ ಸಚಿವ ಭಗವಂತ ಖೂಬಾ ತಿಳಿಸಿದರು.

ಇಂದು ಬೀದರ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರದ್ದು ಒಂದು ಕೆಟ್ಟ ಚಾಳಿ ಇದೆ. ತಾವು ಬಚಾವ್ ಆಗಲು ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡ್ತಾರೆ. ಸುಪ್ರೀಂ ಕೋರ್ಟ್ ಮೊನ್ನೆನೇ ಚಾಟಿ ಬೀಸಿದೆ. ಲೋಕಸಭಾ ಚುನಾವಣೆಯಲ್ಲಿ ಠೇವಣಿ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಕೇಂದ್ರ ಸರ್ಕಾರವನ್ನ ದೂರುವ ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Latest Videos

undefined

ಧಾರವಾಡ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ಕಣಕ್ಕೆ! ಹೇಳಿದ್ದೇನು?

ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಸಿಎಮ ಬದಲಾವಣೆ ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಸಚಿವರು, ಈ ಚುನಾವಣೆಯಲ್ಲಿ ಬಿಜೆಪಿ 28ಕ್ಕೆ 28 ಕ್ಷೇತ್ರಗಳನ್ನ ಗೆಲ್ಲುತ್ತದೆ. ಕಾಂಗ್ರೆಸ್ ಪಕ್ಷ ಶೂನ್ಯ ಸಾಧನೆ ಮಾಡುತ್ತದೆ. ಈಗಾಗಲೇ ಎಲ್ಲಾ ಶಾಸಕರಿಗೂ ಸಿಎಂ ಸಿದ್ದರಾಮಯ್ಯರ ಮೇಲೆ ಅಸಮಾಧಾನ ಇದೆ. ಚುನಾವಣೆಯಲ್ಲಿ ಸೋಲು ಕಂಡ ಬಳಿಕ ಶಾಸಕರ ಅಸಮಾಧಾನ ಇನ್ನಷ್ಟು ಸ್ಫೋಟಗೊಂಡು ಸರ್ಕಾರ ಬಿದ್ದುಹೋಗುತ್ತದೆ. ಚುನಾವಣೆ ಬಳಿಕ ಸರಕಾರ ಬಿಳುವುದರಲ್ಲಿ ಎರಡು ಮಾತಿಲ್ಲ. ಸರ್ಕಾರ ಬಿದ್ದು ಹೋಗುವಾಗ ಮುಖ್ಯಮಂತ್ರಿ ಬದಲಾವಣೆ ಅವಶ್ಯಕತೆ ಎಲ್ಲಿಯದು? ಇವರ ಸರ್ಕಾರ ಬಿದ್ದು ಹೋಗಲು ನಾವು ಆಪರೇಷನ್ ಕಮಲ ಮಾಡುವ ಅವಶ್ಯಕತೆನೇ ಇಲ್ಲ. ಸ್ವತಃ ಕಾಂಗ್ರೆಸ್ ಶಾಸಕರೇ ಹೊರಗಡೆ ಬರುತ್ತಾರೆ ಎಂದು ಭವಿಷ್ಯ ನುಡಿದರು.

click me!