ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಟಿಕೆಟ್ ಕೈ ತಪ್ಪುವ ಆತಂಕ ಹಿನ್ನೆಲೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಳಿಯ ರಜತ್ ಉಳ್ಳಾಗಡ್ಡಿಗೆ ಟಿಕೆಟ್ ನೀಡುವಂತೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಧಾರವಾಡ ನಗರದ ರಿಗಲ್ ಸರ್ಕಲ್ ಬಳಿಯ ಪಕ್ಷದ ಕಚೇರಿ ಎದುರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ.
ಧಾರವಾಡ (ಮಾ.21): ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ಪಕ್ಷಗಳಿಂದ ಪ್ರಚಾರದ ಭರಾಟೆ ಜೋರಾಗಿದೆ. ಆದರೆ ಇತ್ತ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಇನ್ನೂ ಕಗ್ಗಂಟಾಗಿದೆ. ಬಾಗಲಕೋಟೆಯಲ್ಲಿ ಟಿಕೆಟ್ ಕೈತಪ್ಪುತ್ತಿದ್ದಂತೆ ವೀಣಾ ಕಾಶೆಪ್ಪನವರು ಕಾಂಗ್ರೆಸ್ ವಿರುದ್ಧವೇ ತಿರುಗಿಬಿದ್ದಿದ್ದಾರೆ ಇತ್ತ ಧಾರವಾಡದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಳಿಯ ರಜತ್ ಉಳ್ಳಾಗಡ್ಡಿಗೆ ಟಿಕೆಟ್ ನೀಡುವಂತೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಧಾರವಾಡ ನಗರದ ರಿಗಲ್ ಸರ್ಕಲ್ ಬಳಿಯ ಪಕ್ಷದ ಕಚೇರಿ ಎದುರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ.
ಧಾರವಾಡ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ರಜತ್ ಉಳ್ಳಾಗಡ್ಡಿ. ಆದರೆ ಈಗಾಗಲೇ ಸಂಭಾವ್ಯ ಪಟ್ಟಿಯಲ್ಲಿ ವಿನೋದ ಅಸೂಟಿ ಹೆಸರು ಕೇಳಿಬಂದಿದ್ದು, ಟಿಕೆಟ್ ಫೈನಲ್ ಎನ್ನಲಾಗಿದೆ. ಈ ಹಿನ್ನೆಲೆ ರಜತ್ ಉಳ್ಳಾಗಡ್ಡಿಮಠ ಬೆಂಬಲಿಗರು ಅಸಮಾಧಾನಗೊಂಡು ಪ್ರತಿಭಟನೆಗೆ ಮುಂದಾಗಿದ್ದಾರೆ. ಇಂದು ಕಾಂಗ್ರೆಸ್ ಪಕ್ಷದ ಕಚೇರಿಗೆ ಬಿಗ ಜಡಿದು ಆಕ್ರೋಶ ವ್ಯಕ್ತಪಡಿಸಿರುವ ಕಾರ್ಯಕರ್ತರು.
ರೋಚಕ ಟ್ವಿಸ್ಟ್ ಪಡೆದ ಬಾಗಲಕೋಟೆ ಟಿಕೆಟ್ ಫೈಟ್; ಸೋಷಿಯಲ್ ಮೀಡಿಯಾದಲ್ಲಿ ಬೆಂಬಲಿಗರ ಬಿಗ್ ಫೈಟ್!
ಪ್ರತಿಭಟನೆ ವೇಳೆ ರಜತ್ ಪರ ಘೋಷಣೆ ಹಾಕಿದ ಬೆಂಬಲಿಗರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಆಗ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಟಿಕೆಟ್ ನೀಡಿದ್ದ ಕಾಂಗ್ರೆಸ್. ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗುವ ಭರವಸೆಯಲ್ಲಿದ್ದರು. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ರಜತ್ ಉಳ್ಳಾಗಡ್ಡಿ ಇದೀಗ ಈ ಬಾರಿಯೂ ಟಿಕೆಟ್ ಕೈತಪ್ಪುವ ಹಿನ್ನೆಲೆ ಬೆಂಬಲಿಗರು ಪ್ರತಿಭಟನೆ ನಡೆಸಿ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ.
ಶಿವಮೊಗ್ಗದ ಅಪ್ಪ-ಮಗ ಸೇರಿ ಮೋಸ ಮಾಡಿಬಿಟ್ರು ಅಂತ, ಬಿಜೆಪಿ ವಿರುದ್ಧ ಸಿಡಿದೆದ್ದ ಕೆ.ಎಸ್. ಈಶ್ವರಪ್ಪ!