
ಬೆಂಗಳೂರು (ಮಾ.27): ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಬಿಜೆಪಿ ನಾಯಕರು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಕುಶಲೋಪರಿ ವಿಚಾರಿಸಿದರು. ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಲು ಮಂಗಳವಾರ ಜೆ.ಪಿ.ನಗರದಲ್ಲಿನ ನಿವಾಸಕ್ಕೆ ಭೇಟಿ ನೀಡಿದ್ದರು. ಈ ವೇಳೆ ಮಾಜಿ ಸಚಿವ ಡಾ। ಸಿ.ಎನ್.ಅಶ್ವತ್ಥನಾರಾಯಣ ಉಪಸ್ಥಿತರಿದ್ದರು. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಕುಮಾರಸ್ವಾಮಿ ಅವರು ಆಸ್ಪತ್ರೆಯಿಂದ ಆಗಮಿಸಿದ್ದು, ಅವರನ್ನು ಭೇಟಿ ಮಾಡಿ ಕುಶಲೋಪರಿ ವಿಚಾರಿಸಲಾಗಿದೆ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಲವು ಬಾರಿ ಹೇಳಿದ್ದಾರೆ. ಅದನ್ನು ನಿಜ ಮಾಡುವ ನಿಟ್ಟಿನಲ್ಲಿ ಬಿಜೆಪಿ ಜತೆ ಕೈ ಜೋಡಿಸಿದ್ದಾರೆ. ನನಗೆ ಬಹಳ ಸಂತೋಷವಾಗುತ್ತಿದೆ. ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಕುಮಾರಸ್ವಾಮಿ ಬಂದು ಪ್ರಚಾರ ಮಾಡಬೇಕು ಎಂದು ಕೇಳಿದ್ದೇನೆ. ಅದಕ್ಕೆ ಅವರು ಒಪ್ಪಿಕೊಂಡಿದ್ದಾರೆ. ನಾವು ಹೇಳಿದ ದಿನ ಬಂದು ಪ್ರಚಾರ ಮಾಡಲು ಸಹಮತ ವ್ಯಕ್ತಪಡಿಸಿದ್ದಾರೆ. ನರೇಂದ್ರ ಮೋದಿ ಅವರ ಕೈ ಬಲಪಡಿಸಲು ಒಟ್ಟಾಗಿ ಕೆಲಸ ಮಾಡೋಣ ಎಂದಿದ್ದಾರೆ ಎಂದರು.
ಶೋಭಾ ವಿರುದ್ಧದ ಪ್ರಕರಣಕ್ಕೆ ತಡೆ: ತಮಿಳುನಾಡಿನ ಒಬ್ಬ ವ್ಯಕ್ತಿ ರಾಜ್ಯದಲ್ಲಿ (ರಾಮೇಶ್ವರಂ ಕೆಫೆಯಲ್ಲಿ) ಬಾಂಬ್ ಸ್ಫೋಟಿಸಿ ಹೋಗುತ್ತಾರೆ ಎಂದು ಹೇಳಿಕೆ ನೀಡಿದ್ದ ಸಂಬಂಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ದಾಖಲಿಸಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ ನೀಡಿದೆ. ಪ್ರಚೋದನೆ ನೀಡಿದಂತಹ ಆರೋಪದ ಮೇಲೆ ಬೆಂಗಳೂರಿನ ಕಾಟನ್‌ಪೇಟೆ ಪೊಲೀಸರು ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್ ಹಾಗೂ ಅದರ ಸಂಬಂಧ 5ನೇ ಎಸಿಎಂಎಂ ನ್ಯಾಯಾಲಯದ ಮುಂದಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಶೋಭಾ ಕರಂದ್ಲಾಜೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಪೀಠ ಈ ಆದೇಶ ಮಾಡಿದೆ.
ಎನ್‌ಡಿಆರ್‌ಎಫ್ ಹಣಕ್ಕಾಗಿ ಸುಪ್ರೀಂಗೆ ಹೋಗಿರುವುದು ರಾಜಕೀಯ ತಂತ್ರಗಾರಿಕೆ: ಬೊಮ್ಮಾಯಿ
ಅಲ್ಲದೆ, ಕಾಟನ್‌ಪೇಟೆ ಪೊಲೀಸರು ಹಾಗೂ ದೂರು ದಾಖಲಿಸಿದ್ದ ಚುನಾವಣಾ ನೀತಿ ಸಂಹಿತೆ ಸಂಚಾರಿ ದಳದ ಅಧಿಕಾರಿ ಎಂ.ಎನ್. ಶಿವರಾಜು ಅವರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿದೆ. ಅರ್ಜಿ ವಿಚಾರಣೆ ವೇಳೆ ಶೋಭಾ ಕರಂದ್ಲಾಜೆ ಪರ ವಕೀಲ ವೆಂಕಟೇಶ್ ದಳವಾಯಿ ಅವರು, ಇತ್ತೀಚೆಗೆ ನಗರ್ತಪೇಟೆಯಲ್ಲಿ ನಡೆದ ಘಟನೆ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಅರ್ಜಿದಾರರು ಪಾಲ್ಗೊಂಡಿದ್ದರು. ಒಬ್ಬ ವ್ಯಕ್ತಿ ತಮಿಳುನಾಡಿನಿಂದ ಬಂದು ರಾಜ್ಯದಲ್ಲಿ ಬಾಂಬ್ ಸ್ಫೋಟಿಸಿ ಹೋಗುತ್ತಾನೆ. ಮತ್ತೊಬ್ಬ ವ್ಯಕ್ತಿ ಕೇರಳದಿಂದ ಬಂದು ಆ್ಯಸಿಡ್ ದಾಳಿ ನಡೆಸುತ್ತಾನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.