Lok Sabha Election 2024: ರಾಜ್ಯದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಭರಾಟೆ ಆರಂಭ

By Kannadaprabha NewsFirst Published Mar 28, 2024, 6:04 AM IST
Highlights

ಆಡಳಿತಾರೂಢ ಕಾಂಗ್ರೆಸ್‌ ಮತ್ತು ಪ್ರತಿಪಕ್ಷ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟದ ನಡುವೆ ತೀವ್ರ ಹಣಾಹಣಿಗೆ ಸಾಕ್ಷಿಯಾಗುವ ಲೋಕಸಭಾ ಚುನಾವಣೆಗೆ ಗುರುವಾರ ಅಧಿಸೂಚನೆ ಪ್ರಕಟವಾಗಲಿದೆ. 

ಬೆಂಗಳೂರು (ಮಾ.28): ಆಡಳಿತಾರೂಢ ಕಾಂಗ್ರೆಸ್‌ ಮತ್ತು ಪ್ರತಿಪಕ್ಷ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟದ ನಡುವೆ ತೀವ್ರ ಹಣಾಹಣಿಗೆ ಸಾಕ್ಷಿಯಾಗುವ ಲೋಕಸಭಾ ಚುನಾವಣೆಗೆ ಗುರುವಾರ ಅಧಿಸೂಚನೆ ಪ್ರಕಟವಾಗಲಿದೆ. ರಾಜ್ಯದಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಅಧಿಸೂಚನೆ ಪ್ರಕಟಗೊಂಡ ಬೆನ್ನಲ್ಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಏ.4ರಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ. ಏ.5ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಏ.8ರಂದು ಉಮೇದುವಾರಿಕೆಗಳನ್ನು ವಾಪಸ್‌ ಪಡೆಯಲು ಕೊನೆಯ ದಿನವಾಗಿದೆ.

ಏ.26ರಂದು ಮತದಾನ ನಡೆಯಲಿದೆ. ಜೂ.4ರಂದು ಫಲಿತಾಂಶ ಹೊರಬೀಳಲಿದೆ. ಉಡುಪಿ-ಚಿಕ್ಕಬಳ್ಳಾಪುರ, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ಜರುಗಲಿದೆ. 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

Latest Videos

ಲೋಕಸಭಾ ಟಿಕೆಟ್ ಭಿನ್ನಮತ ಶಮನಕ್ಕೆ ಬಿಎಸ್‌ವೈ ಸಾರಥ್ಯ: ಕೊಪ್ಪಳ, ಬಳ್ಳಾರಿ, ದಾವಣಗೆರೆಯಲ್ಲಿ ಯಶಸ್ವಿ?

ಕಾಂಗ್ರೆಸ್‌ ಪಕ್ಷವು ನಾಲ್ಕು ಲೋಕಸಭಾ ಕ್ಷೇತ್ರಗಳನ್ನು ಹೊರತುಪಡಿಸಿ ಇನ್ನುಳಿದ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಬೇಕಾಗಿದೆ. ಬಿಜೆಪಿ-ಜೆಡಿಎಸ್‌ ಮೈತ್ರಿ ಮಾಡಿಕೊಂಡಿರುವ ಕಾರಣ ಬಿಜೆಪಿ 25 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದು, ಜೆಡಿಎಸ್‌ ಮೂರು ಕ್ಷೇತ್ರದಲ್ಲಿ ಕಣಕ್ಕಿಳಿಯುತ್ತಿದೆ. ಈ ಪೈಕಿ ಬಿಜೆಪಿ ತನ್ನ ಪಾಲಿನ ಎಲ್ಲ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದ್ದರೆ, ಜೆಡಿಎಸ್‌ ತನ್ನ ಪಾಲಿನ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಬೇಕಾಗಿದೆ.

ಏ.26ಕ್ಕೆ ಚುನಾವಣೆ ನಡೆವ ಕ್ಷೇತ್ರಗಳು: ಉಡುಪಿ-ಚಿಕ್ಕಬಳ್ಳಾಪುರ, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರ.

ದಾವಣಗೆರೆ ಬಂಡಾಯ ಬಗೆಹರಿಸಿದ ಬಿಎಸ್‌ವೈ: ರವೀಂದ್ರನಾಥ್‌ ನೇತೃತ್ವದಲ್ಲಿ ಚುನಾವಣೆಗೆ ಸರ್ವಸಮ್ಮತಿ

ವೇಳಾಪಟ್ಟಿ
ನಾಮಪತ್ರ ಆರಂಭ ಮಾ.28
ನಾಮಪತ್ರ ಕಡೆಯ ದಿನ ಏ.4
ನಾಮಪತ್ರ ಪರಿಶೀಲನೆ ಏ.5
ನಾಮಪತ್ರ ವಾಪಸ್‌ ಏ.8
ಮತದಾನ ದಿನಾಂಕ ಏ.26
ಫಲಿತಾಂಶ ಜೂ.4

click me!