ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತ್ತೆ ಪುತ್ರ ಸುನಿಲ್ ಬೋಸ್ ಪರವಾಗಿ ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಬ್ಯಾಟ್ ಬೀಸಿದರು.
ಮೈಸೂರು (ನ.25): ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತ್ತೆ ಪುತ್ರ ಸುನಿಲ್ ಬೋಸ್ ಪರವಾಗಿ ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಬ್ಯಾಟ್ ಬೀಸಿದರು. ಈ ಕುರಿತು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜನಗರ, ಮೈಸೂರು- ಕೊಡಗು ಕ್ಷೇತ್ರಗಳಿಗೆ ಇನ್ನೂ ಅಭ್ಯರ್ಥಿ ಆಯ್ಕೆ ಆಗಿಲ್ಲ. ನಾನು ಸುನೀಲ್ ಬೋಸ್ ಪರ ಮಾತನಾಡುತ್ತಿಲ್ಲ. ಪಕ್ಷದ ಸದಸ್ಯತ್ವ ಪಡೆಯದವರೇ ಶಾಸಕರಾಗಿದ್ದಾರೆ. ರಾಜಕೀಯದಲ್ಲಿ ಅಂಥ ಸನ್ನಿವೇಶಗಳು ಬಂದು ಬಿಡುತ್ತವೆ ಎಂದರು.
ನಂಜನಗೂಡು ಉಪ ಚುನಾವಣೆಯಲ್ಲೇ ಸುನೀಲ್ ಬೋಸ್ ಅಭ್ಯರ್ಥಿ ಆಗಬೇಕಿತ್ತು. ಆಗಿನಿಂದಲೇ ಸಂಘಟನೆ ಮಾಡಿದ್ದಾನೆ. ಮೂರು ಚುನಾವಣೆಗೆ ಟಿಕೆಟ್ ಸಿಕ್ಕಿಲ್ಲ. ಅದಾಗ್ಯೂ ಮುನಿಸಿಕೊಳ್ಳದೆ ಪಕ್ಷದ ಪರ ಕೆಲಸ ಮಾಡಿದ್ದಾನೆ. ಅಭ್ಯರ್ಥಿ ಆಯ್ಕೆಗಾಗಿ ವೀಕ್ಷಕರು ಬಂದು ಅಭಿಪ್ರಾಯ ಸಂಗ್ರಹಿಸಿ ಹೋಗಿದ್ದಾರೆ. ಪಕ್ಷದ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಅವರು ತಿಳಿಸಿದರು.
undefined
ಅಂಬರೀಶ್ ಗುರಿ, ಉದ್ದೇಶಗಳನ್ನು ಮುಂದುವರೆಸಿಕೊಂಡು ಹೋಗಲು ಸಂಕಲ್ಪ: ಸುಮಲತಾ
ಹುಣಸೂರಿನಲ್ಲಿ ಭೇಟಿ: ವಿ. ಸೋಮಣ್ಣ ಮತ್ತು ನಾನು ಹುಣಸೂರಿನಲ್ಲಿ ಭೇಟಿ ಆಗಿದ್ದೆವು. ಇಬ್ಬರೂ ಭೇಟಿಯಾದಾಗ ಮಾತನಾಡದೇ ಇರೋಕೆ ಆಗುತ್ತ, ಮಾತನಾಡಿದ್ದೇವೆ. ನಾನು ಲೋಕಸಭೆ ಟಿಕೆಟ್ ಕೊಡುವುದಾದರೆ ಸೋಮಣ್ಣಗೆ ಕೊಡುತ್ತೇನೆ. ಅದು ನನ್ನೊಬ್ಬನ ತೀರ್ಮಾನ ಅಲ್ಲ. ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ ಎಂದು ಅವರು ಹೇಳಿದರು.
ಜಾತಿ ಗಣತಿ ವರದಿ ಇನ್ನೂ ಸರ್ಕಾರಕ್ಕೇ ಸಲ್ಲಿಕೆ ಆಗಿಲ್ಲ: ಜಾತಿ ಗಣತಿ ವರದಿ ಇನ್ನೂ ಸರ್ಕಾರಕ್ಕೇ ಸಲ್ಲಿಕೆ ಆಗಿಲ್ಲ. ಊಹೆ ಮಾಡಿ ವಿರೋಧ ಮಾಡಿದರೆ ಹೇಗೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಪ್ರಶ್ನಿಸಿದರು. ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬರಿಗೂ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮಾನತೆ ಸಿಗಬೇಕು. ಅದಕ್ಕಾಗಿಯೇ ನಮ್ಮ ಸರ್ಕಾರ ಇದ್ದಾಗ ಸಮೀಕ್ಷೆ ನಡೆಸಲಾಗಿತ್ತು. ನಮ್ಮದೇ ಸರ್ಕಾರವಿದ್ದರೆ ವರದಿ ಸ್ವೀಕಾರ ಆಗುತ್ತಿತ್ತು. ಈಗ ವರದಿ ಸ್ವೀಕಾರ ಆಗಬೇಕಿದೆ ಎಂದರು.
ರೈತರು ಕಾವೇರಿ ಹೋರಾಟ ಕೈಬಿಡಿ: ಸಚಿವ ಚಲುವರಾಯಸ್ವಾಮಿ
ಅಂತಿಮ ವರದಿ ಸಲ್ಲಿಕೆಗೆ ಸಮಯಾವಕಾಶ ಕೇಳಿದ್ದಾರೆ. ವರದಿಯಲ್ಲಿ ಏನಿದೆ ಅಂತ ಯಾರೂ ನೋಡಿಲ್ಲ. ಸರ್ಕಾರದ ಕೈ ಸೇರುವ ಮುನ್ನವೇ ವಿರೋಧ ಮಾಡುತ್ತಿದ್ದಾರೆ. ಅದೆಲ್ಲ ಹೊರಗಿನ ನಿರ್ಧಾರ. ಸಂಪುಟ ತೆಗೆದುಕೊಳ್ಳುವ ತೀರ್ಮಾನ ಮಾತ್ರ ಸರ್ಕಾರದ ನಿರ್ಧಾರ ಎಂದು ಅವರು ಸ್ಪಷ್ಟಪಡಿಸಿದರು.