ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಆಪರೇಷನ್ ಹಸ್ತಕ್ಕೆ ಸಿದ್ಧವಾಗುತ್ತಿದೆ. ಈಗಾಗಲೇ ಜೆಡಿಎಸ್‌ನ ಪ್ರಮುಖ ನಾಯಕರಿಗೆ ಕಾಂಗ್ರೆಸ್ ಗಾಳ ಹಾಕುವ ಮೂಲಕ ಜೆಡಿಎಸ್‌ಗೆ ಮತ್ತೊಂದು ದೊಡ್ಡ ಹೊಡೆತ ನೀಡಲು ತಯಾರಿ ನಡೆಸಿದೆ.
ಎಚ್.ಆರ್.ಮಾದೇಶ್
ಮಾಗಡಿ (ಆ.04): ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಆಪರೇಷನ್ ಹಸ್ತಕ್ಕೆ ಸಿದ್ಧವಾಗುತ್ತಿದೆ. ಈಗಾಗಲೇ ಜೆಡಿಎಸ್‌ನ ಪ್ರಮುಖ ನಾಯಕರಿಗೆ ಕಾಂಗ್ರೆಸ್ ಗಾಳ ಹಾಕುವ ಮೂಲಕ ಜೆಡಿಎಸ್‌ಗೆ ಮತ್ತೊಂದು ದೊಡ್ಡ ಹೊಡೆತ ನೀಡಲು ತಯಾರಿ ನಡೆಸಿದೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸಂಸದ ಡಿ.ಕೆ. ಸುರೇಶ್ ರಾಮನಗರ ಮತ್ತು ಮಾಗಡಿ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಸೋಲಿಸುವಲ್ಲಿ ಯಶಸ್ವಿಯಾದರು.
ಈಗ ಲೋಕಸಭಾ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಅವರು, ಮಾಗಡಿಯಲ್ಲಿನ ಜೆಡಿಎಸ್ ಪ್ರಮುಖ ನಾಯಕರನ್ನು ಕಾಂಗ್ರೆಸ್‌ಗೆ ಸೆಳೆಯಲು ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ. ಜೆಡಿಎಸ್ ನಾಯಕರು ಬಹಿರಂಗವಾಗಿಯೇ ಕಾಂಗ್ರೆಸ್ ಸಂಪರ್ಕದಲ್ಲಿ ಇರುವುದು ಮಾಜಿ ಶಾಸಕ ಎ.ಮಂಜುನಾಥ್ ಅವರಿಗೂ ಗೊತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದರಿಂದ ನಾಯಕರು ಮುಂದಿನ ಭವಿಷ್ಯದ ಹಿನ್ನೆಲೆಯಲ್ಲಿ ಪಕ್ಷಾಂತರಕ್ಕೆ ಸಿದ್ದರಾಗುತ್ತಿರುವುದು ಗೊತ್ತಿದ್ದರೂ ಕೂಡ ಮಂಜುನಾಥ್ ಏನು ಮಾಡದ ಸ್ಥಿತಿಯಲ್ಲಿದ್ದಾರೆ.
Dharwad: ಗೋಲ್ಡ್ ಕ್ರೌನ್ ಸಬಲೈಮ್ ಬಿಲ್ಡರ್ಸ್‌ಗೆ ದಂಡ ಮತ್ತು ಪರಿಹಾರದ ಆದೇಶ
ಸಂಸದರ ತೀರ್ಮಾನವೇ ಅಂತಿಮ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸಂಸದ ಡಿ.ಕೆ. ಸುರೇಶ್ ತಂತ್ರದಿಂದಾಗಿ ಬಾಲಕೃಷ್ಣರವರು ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾಗಲು ಕಾರಣ. ಈಗ ಅವರ ಚುನಾವಣೆಯಲ್ಲಿ ಗೆಲ್ಲುವ ನಿಟ್ಟಿನಲ್ಲಿ ಜೆಡಿಎಸ್ ನಾಯಕರನ್ನು ಕಾಂಗ್ರೆಸ್‌ಗೆ ಸೆಳೆಯಲು ತಂತ್ರ ಮಾಡಿದ್ದು ಇದಕ್ಕೆ ಶಾಸಕ ಬಾಲಕೃಷ್ಣ ಕೂಡ ಒಪ್ಪಿಗೆ ಕೊಟ್ಟಿದ್ದಾರೆ. ಸಂಸದರಿಗೆ ಅನುಕೂಲ ಆಗುವುದಾದರೆ ಜೆಡಿಎಸ್ ನಾಯಕರು ನಮ್ಮ ಪಕ್ಷಕ್ಕೆ ಸೇರಲಿ ಎಂದು ಬಾಲಕೃಷ್ಣರವರು ಗ್ರೀನ್ ಸಿಗ್ನಲ್ ಕೊಟ್ಟಿರುವುದರಿಂದ ಈಗ ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ನ ಪ್ರಮುಖ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ಸಿದ್ದರಾಗುತ್ತಿದ್ದಾರೆ.
ಶಕ್ತಿ ಯೋಜನೆ ಎಫೆಕ್ಟ್: ಚಿಕ್ಕಮಗಳೂರಿನಲ್ಲಿ ಖಾಸಗಿ ಬಸ್‌ಗಳ ಸಂಚಾರ ಸ್ಥಗಿತ!
ಇನ್ನೂ ಕೆಲವೇ ದಿನಗಳಲ್ಲಿ ಪ್ರಮುಖ ನಾಯಕರು ಜೆಡಿಎಸ್ ತೊರೆಯಲಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಶಾಸಕ ಎ.ಮಂಜುನಾಥ್ ತಮ್ಮ ಪಕ್ಷದ ನಾಯಕರನ್ನು ತಮ್ಮ ಪಕ್ಷದಲ್ಲೇ ಉಳಿಸಿಕೊಳ್ಳಲು ಯಾವ ತಂತ್ರ ಮಾಡುತ್ತಾರೆಂಬದು ದೊಡ್ಡ ಪ್ರಶ್ನೆಯಾಗಿದೆ. ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಈಗ ಆಪರೇಷನ್ ಹಸ್ತದ ಮಾತುಗಳೇ ಕೇಳಿ ಬರುತ್ತಿದ್ದು ಲೋಕಸಭಾ ಚುನಾವಣೆ ವೇಳೆಗೆ ಯಾವ ಯಾವ ನಾಯಕರು ಪಕ್ಷಾಂತರ ಆಗುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.