ಸಂಸತ್ತಿನಲ್ಲಿ ಕರ್ನಾಟಕದ ಧ್ವನಿಯಾಗುವೆ: ತೇಜಸ್ವಿ ಸೂರ್ಯ

By Ravi JanekalFirst Published Jun 4, 2024, 12:06 PM IST
Highlights

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಆಶೀರ್ವಾದದಿಂದ ಬಹಳ ದೊಡ್ಡ ಅಂತರದಿಂದ ಗೆಲುವಾಗ್ತಿದೆ ಕ್ಷೇತ್ರದ ಜನರು ಒಬ್ಬ ಯುವಕನ ಮೇಲೆ ಪ್ರೀತಿ ವಿಶ್ವಾಸ ಇಟ್ಟು ಗೆಲ್ಲಿಸಿದ್ದಾರೆ ಎಂದು ದಕ್ಷಿಣ ಕ್ಷೇತ್ರದ ಜನರಿಗೆ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಧನ್ಯವಾದಗಳನ್ನ ತಿಳಿಸಿದರು.

ಬೆಂಗಳೂರು (ಜೂ.4) ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಆಶೀರ್ವಾದದಿಂದ ಬಹಳ ದೊಡ್ಡ ಅಂತರದಿಂದ ಗೆಲುವಾಗ್ತಿದೆ ಕ್ಷೇತ್ರದ ಜನರು ಒಬ್ಬ ಯುವಕನ ಮೇಲೆ ಪ್ರೀತಿ ವಿಶ್ವಾಸ ಇಟ್ಟು ಗೆಲ್ಲಿಸಿದ್ದಾರೆ ಎಂದು ದಕ್ಷಿಣ ಕ್ಷೇತ್ರದ ಜನರಿಗೆ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಧನ್ಯವಾದಗಳನ್ನ ತಿಳಿಸಿದರು.

ಇಂದು ಮಾಧ್ಯಮ ಪ್ರತಿನಿಧಿಯೊಂದಿಗೆ ಸಂತಸ ಹಂಚಿಕೊಂಡ ಅವರು, ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು.  ಜೊತೆಗೆ ಮತ್ತೊಮ್ಮೆ ಪಾರ್ಲಿಮೆಂಟ್‌ನಲ್ಲಿ ಪ್ರತಿನಿಧಿಸಬೇಕೆಂದು ನನಗೆ ಆಶೀರ್ವಾದ ಮಾಡಿದ್ದಾರೆ. ಕಳೆದ ಐದು ವರ್ಷದ ಹಿಂದೆ ನಾನು ಆಯ್ಕೆ ಆದಾಗ ನನಗೆ ಅನುಭವದ ಕೊರತೆ ಇತ್ತು. ಆದರೀಗ ಪ್ರತಿಯೊಂದನ್ನೂ ಕಲಿತಿದ್ದೇನೆ. ಇನ್ನು ಹೆಚ್ಚು ಅಭಿವೃದ್ಧಿಗೆ ಶ್ರಮಿಸುತ್ತೇನೆ. ಕರ್ನಾಟಕದ ಧ್ವನಿಯಾಗಿ ಸಂಸತ್ತಿನಲ್ಲಿ ನನ್ನ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಭರವಸೆ ನೀಡಿದರು.

Latest Videos

ಡಾ ಮಂಜುನಾಥ್ ವಿರುದ್ಧ ಭಾರೀ ಹಿನ್ನಡೆ; ಡಿಕೆ ಶಿವಕುಮಾರ ನಿವಾಸಕ್ಕೆ ಆಗಮಿಸಿದ ಡಿಕೆ ಸುರೇಶ್

ಇಡೀ ರಾಜ್ಯದಲ್ಲಿ ಬಿಜೆಪಿ ಪರವಾಗಿ ಜನರು ಮತದಾನ ಮಾಡಿದ್ದಾರೆ. 290 ಕ್ಷೇತ್ರಗಳಲ್ಲಿ ಅಂತರ ಇದೆ ಎರಡು ಮೂರು ಗಂಟೆಗಳಲ್ಲಿ ಕ್ಲಿಯರ್ ಪಿಕ್ಚರ್ ಸಿಗಲಿದೆ. ಮತ್ತೊಮ್ಮೆ ಮೋದಿ ಪ್ರಧಾನಿ ಆಗುವುದು ನಿಶ್ಚಿತ. ಇನ್ನು ರಾಜ್ಯದಲ್ಲಿ ಬಿಜೆಪಿ 18 ಸೀಟು ಬರುತ್ತೆ ಒಂದು ವರ್ಷದಲ್ಲೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಕುಗ್ಗಿಹೋಗಿದೆ ಎಂಬುದು ಈ ಫಲಿತಾಂಶದಿಂದ ತಿಳಿಯುತ್ತದೆ ಎಂದರು.

ಬೆಂಗಳೂರು ದಕ್ಷಿಣ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದೆ. ಈ ಬಾರಿ ಭದ್ರಕೋಟೆ ಛಿದ್ರ ಮಾಡಲು ಕಾಂಗ್ರೆಸ್ ಶತಪ್ರಯತ್ನ ನಡೆಸಿತ್ತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದ ಸೌಮ್ಯರೆಡ್ಡಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಲೋಕಸಭೆ ಗೆಲುವು ಸಾಧಿಸಿ ಸಂಸತ್ತಿಗೆ ಹೋಗಲಿದ್ದಾರೆಂದೇ ಕಾಂಗ್ರೆಸ್ ವಿಶ್ವಾಸದಲ್ಲಿತ್ತು. ಆದರೆ ಚುನಾವಣಾ ಫಲಿತಾಂಶದಲ್ಲಿ ತೇಜಸ್ವಿ ಸೂರ್ಯ ಪ್ರಾರಂಭದಿಂದಲೂ ಮುನ್ನಡೆ ಕಾಯ್ದುಕೊಂಡರು. ಇದೀಗ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಎರಡನೇ ಬಾರಿ ಸಂಸತ್ತಿಗೆ ಪ್ರವೇಶಿಸುವ ಹುಮ್ಮಸ್ಸಿನಲ್ಲಿದ್ದಾರೆ.

ಡಾ . ಮಂಜುನಾಥ್ 2 ಲಕ್ಷ ಮತಗಳ ಅಂತರದಿಂದ ಗೆಲ್ತಾರೆ: ಮುನಿರತ್ನ 

ಬಿಜೆಪಿ ಹೆಚ್ಚು ಸ್ಥಾನಗಳನ್ನು ಗಳಿಸುತ್ತಿದ್ದಂತೆ ಬಿಜೆಪಿ ಕಚೇರಿಯತ್ತ ಸಾವಿರಾರು ಕಾರ್ಯಕರ್ತರು ಹರಿದುಬರುತತಿದ್ದಾರೆ. ಎಲ್ಲೆಡೆ ಬ್ಯಾರಿಕೇಡ್ ಅಳವಡಿಸಿದ್ದು ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

click me!