ಪ್ರಧಾನಿ ಮೋದಿ 15 ರಿಂದ 20 ಮಂದಿ ಕೈಗಾರಿಕೋದ್ಯಮಿಗಳ ಸಾಲವನ್ನು ಮನ್ನಾ ಮಾಡಿದ್ದಾರೆ ಎಂದು ಗುರುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.
ಜೈಪುರ್ (ಏ.12): ಪ್ರಧಾನಿ ಮೋದಿ 15 ರಿಂದ 20 ಮಂದಿ ಕೈಗಾರಿಕೋದ್ಯಮಿಗಳ ಸಾಲವನ್ನು ಮನ್ನಾ ಮಾಡಿದ್ದಾರೆ ಎಂದು ಗುರುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.
.ರಾಜಸ್ಥಾನದ ಬಿಕಾನೇರ್‌ನಲ್ಲಿ ಚುನಾವಣಾ ಪ್ರಚಾರದ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತದಲ್ಲಿ ನಿರುದ್ಯೋಗ ಸಮಸ್ಯೆ ತುಂಬಿ ತುಳುಕುತ್ತಿದೆ. ಆದ್ದರಿಂದ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ನಮ್ಮ ಪ್ರಣಾಳಿಕೆಯಲ್ಲಿ ಹೇಳಿದ ಪ್ರತಿಯೊಂದು ಯೋಜನೆ ಅನುಷ್ಠಾನಗೊಳಿತ್ತೇವೆ ಎಂದು ಭರವಸೆ ನೀಡಿದರು.
ಭಾರತದ ದಕ್ಷಿಣದ ತುದಿಯಿಂದ ಬಿಜೆಪಿ ಕಟ್ಟಲು ಮೋದಿ ತಂತ್ರ, ತಮಿಳುನಾಡಿನಲ್ಲಿ ಹೊಸ ಅಲೆ!
ರೈತರು ತಮ್ಮ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಕೇಳುತ್ತಿದ್ದು, ಯುವಕರು ಉದ್ಯೋಗಕ್ಕಾಗಿ ಅಲೆದಾಡುತ್ತಿದ್ದಾರೆ. ಇತ್ತ ಮಹಿಳೆಯರು ಬೆಲೆ ಏರಿಕೆಯಿಂದ ಕಂಗಾಲಾಗಿದ್ದಾರೆ. ಆದರೆ ಯಾರೊಬ್ಬರು ಈ ಸಮಸ್ಯೆಗೆಳಿಗೆ ಕಿವಿಗೊಡುತ್ತಿಲ್ಲ.
ಈ ಚುನಾವಣೆ ದೇಶದ ಬಡ ಜನರು ಮತ್ತು ಕೋಟ್ಯಾಧಿಪತಿಗಳ ನಡುವಿನ ಯುದ್ಧವಾಗಿದೆ. ಇದರಲ್ಲಿ ಕಾಂಗ್ರೆಸ್ ಗೆಲ್ಲಲ್ಲಿದ್ದು, ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಲಿದೆ ಎಂದು ಹೇಳಿದರು.