ರಣಹೇಡಿಯ ರೀತಿ ಮಂಡ್ಯ ಕ್ಷೇತ್ರಕ್ಕೆ ಓಡಿದ ಕುಮಾರಸ್ವಾಮಿ: ಡಿ.ಕೆ.ಶಿವಕುಮಾರ್ ವಂಗ್ಯ

By Kannadaprabha News  |  First Published Apr 27, 2024, 5:49 AM IST

'ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸತ್ಯ ಹರಿಶ್ಚಂದ್ರನ ಮೊಮ್ಮಗ ಎಚ್.ಡಿ.ಕುಮಾರಸ್ವಾಮಿ ಅವರೇ ಚುನಾವಣೆಗೆ ನಿಲ್ಲಬೇಕಿತ್ತು. ಹೆದರಿಕೊಂಡು ರಣಹೇಡಿಯಂತೆ ಇಲ್ಲಿ ಅಮಾಯಕರನ್ನು ನಿಲ್ಲಿಸಿ ಅವರು ಮಂಡ್ಯಕ್ಕೆ ಓಡಿ ಹೋಗಿದ್ದಾರೆ' ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. 


ಬೆಂಗಳೂರು (ಏ.27): 'ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸತ್ಯ ಹರಿಶ್ಚಂದ್ರನ ಮೊಮ್ಮಗ ಎಚ್.ಡಿ.ಕುಮಾರಸ್ವಾಮಿ ಅವರೇ ಚುನಾವಣೆಗೆ ನಿಲ್ಲಬೇಕಿತ್ತು. ಹೆದರಿಕೊಂಡು ರಣಹೇಡಿಯಂತೆ ಇಲ್ಲಿ ಅಮಾಯಕರನ್ನು ನಿಲ್ಲಿಸಿ ಅವರು ಮಂಡ್ಯಕ್ಕೆ ಓಡಿ ಹೋಗಿದ್ದಾರೆ' ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಕೂಪನ್ ಕಾರ್ಡ್‌ ಹಂಚುತ್ತಿದೆ ಎಂಬಕುಮಾರಸ್ವಾಮಿ ಆರೋಪಕ್ಕೆ ತೀಕ್ಷ ಪ್ರತಿಕ್ರಿಯಿಸಿದರು.

'ಕುಮಾರಸ್ವಾಮಿ ಅವರಿಗೆ ಮಾನ ಮರ್ಯಾದೆ ಇದೆಯೇ ಹೇಳಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಯವರು ಏನನ್ನು ಹಂಚುತ್ತಿದ್ದಾರೆ ಎಂದು ನಾನು ತೋರಿಸಲೇ? ನಾವು ಹಂಚುತ್ತಿರುವುದು ನಮ್ಮ ಪ್ರಣಾಳಿಕೆ ಕಾರ್ಡ್. ಅವರು ಮುನಿರತ್ನನ ಮೂಲಕ ಗೋಲ್ಡ್ ಕಾರ್ಡ್ ಮಾಡಿ ಹಂಚುತ್ತಿದ್ದಾರೆ. ಸಿನಿಮಾ ಸ್ಟೈಲ್‌ನಲ್ಲಿ ಮಾಡುತ್ತಿದ್ದಾರೆ. ಅವರೇಕೆ ಇಷ್ಟೊಂದು ಹತಾಶರಾಗಿದ್ದಾರೆ?' ಎಂದು ಪ್ರಶ್ನಿಸಿದ್ದಾರೆ. ನಮ್ಮ ಬಗ್ಗೆ ಇಷ್ಟಾದರೂ ಭಯ ಬಂದಿದೆಯಲ್ಲ ಹೆದರಿಕೊಂಡು ರಣಹೇಡಿಯಂತೆ ಬೇರೆ ಕಡೆ ಹೋಗಿದ್ದಾರೆ. 

Tap to resize

Latest Videos

ಐಟಿಯಿಂದ ಡಿಕೆಸು ಚಾಲಕನ ಮಗ-ಸೊಸೆಗೆ ಕಿರುಕುಳ: ಡಿ.ಕೆ.ಶಿವಕುಮಾರ್‌

ಅವರೇ ಚುನಾವಣೆಗೆ ನಿಂತುಕೊಳ್ಳಬೇಕಿತ್ತು. ಆದರೆ ಅಮಾಯಕರನ್ನು ಇಲ್ಲಿ ನಿಲ್ಲಿಸಿ ಅವರು ಮಂಡ್ಯಕ್ಕೆ ಓಡಿ ಹೋಗಿದ್ದಾರೆ. ಅಲ್ಲಿ ಕುಮಾರಸ್ವಾಮಿ ಏನೇನು ಮಾಡುತ್ತಿದ್ದಾರೆ, ಏನೇನು ಹಂಚುತ್ತಿದ್ದಾರೆ ಎನ್ನುವುದು ನಮಗೆ ಗೊತ್ತಿಲ್ಲವೇ ಎಂದು ಟೀಕಿಸಿದರು. ಮಹಿಳೆಯರು ದಾರಿ ತಪ್ಪಿದ್ದಾರೆ ಎಂದು ಹೇಳಿ ಕುಮಾರಸ್ವಾಮಿ ಹೆಣ್ಣು ಮಕ್ಕಳನ್ನು ಅಗೌರವದಿಂದ ಕಂಡಿದ್ದಾರೆ. ಮಾಧ್ಯಮಗಳಲ್ಲಿ ಅವರ ಕರ್ಮಕಾಂಡ ತೋರಿಸುತ್ತಿದ್ದರು. ಇದರ ವಿರುದ್ಧ ಹೊಸ ಕಾನೂನು ಮಾಡಬೇಕು ಎಂದು ಯಾರೋ ಹೇಳುತ್ತಿರುವುದನ್ನು ನಾನು ಕೇಳಿದೆ ಎಂದು ಲೇವಡಿ ಮಾಡಿದರು.

ಇದನ್ನೆಲ್ಲಾ ನೋಡಿ ಅವಮಾನವಾಗುತ್ತಿದೆ: ಸಂಸದರೊಬ್ಬರು ಹೆಣ್ಣುಮಕ್ಕಳ ಜೊತೆ ಅಗೌರವದಿಂದ ನಡೆದುಕೊಂಡಿರುವ ಬಗ್ಗೆ ಕೇಳಿದಾಗ, ಇದರ ಬಗ್ಗೆ ದೇವೇಗೌಡರು, ಕುಮಾರಸ್ವಾಮಿ, ಡಾ.ಮಂಜುನಾಥ್, ರೇವಣ್ಣ ಅವರನ್ನು ಕೇಳಿ. ನನಗೆ ಇದನ್ನು ನೋಡಿ ಅವಮಾನವಾಗುತ್ತಿದೆ' ಎಂದರು.  ಕೆಪಿಸಿಸಿ ಅಧ್ಯಕ್ಷರು ಏನು ಮಾಡಿದ್ದಾರೆ ಎಂಬ ಕುಮಾರಸ್ವಾಮಿ ಪ್ರಶ್ನೆಗೆ, 'ನಾವು ಮಾಡಿರುವುದಕ್ಕೆ ಹಾಗೂ ಮಾಡುತ್ತೇವೆ ಎಂದು ಹೇಳಿದ್ದಕ್ಕೆ ಜನ ಹೊರಗಡೆ ಬಂದು ನಮಗೆ 136 ಸ್ಥಾನ ಕೊಟ್ಟಿದ್ದಾರೆ. 

ಜೆಡಿಎಸ್ ನಾಯಕರು ನನ್ನನ್ನು ಲೋಕಸಭೆ ಪ್ರಚಾರಕ್ಕೆ ಆಹ್ವಾನಿಸಿಲ್ಲ: ಸುಮಲತಾ ಅಂಬರೀಶ್

ನೀನೇನೂ ಮಾಡಲಿಲ್ಲ ಅದಕ್ಕೆ ಜನ18 ಸ್ಥಾನಗಳನ್ನು ಕೊಟ್ಟಿರುವುದು' ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದರು. ಪ್ರಧಾನಿಗಳೇ ಹತಾಶರಾಗಿದ್ದಾರೆ: ಕಾಂಗ್ರೆಸ್‌ ಹತಾಶೆಗೊಂಡಿದೆ ಎಂಬ ಬಿಜೆಪಿ ಆರೋಪಕ್ಕೆ, 'ಅವರು ಹತಾಶರಾಗಿರುವುದನ್ನು ನಮ್ಮ ಮೇಲೆ ಹೇಳುತ್ತಿದ್ದಾರೆ. ಪ್ರಧಾನಿಗಳೇ ಹತಾಶರಾಗಿ ಮಂಗಳಸೂತ್ರದ ಬಗ್ಗೆ ಮಾತನಾಡುತ್ತಿದ್ದಾರೆ. ಅವರಸ್ಥಾನಕ್ಕೆ ತಕ್ಕಂತೆ ಮಾತನಾಡುತ್ತಿಲ್ಲ. ಸಮಾಜದಲ್ಲಿ ಅಸಮಾನತೆ ಇರಬಾರದು ಎಂದು ಹೇಳಬೇಕಾದವರೇ ಅಲ್ಪಸಂಖ್ಯಾತರ ಬಗ್ಗೆ ಮಾತನಾಡುತ್ತಿದ್ದಾರೆ ಎಂದರು.

click me!