ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ ಒಬಿಸಿಗೆ ಸಂಕಷ್ಟ: ಬಿ.ಎಸ್.ಯಡಿಯೂರಪ್ಪ

By Govindaraj SFirst Published May 6, 2024, 12:36 PM IST
Highlights

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆ ಚುನಾವಣೆ ಗುಂಗಿನಿಂದ ಇನ್ನೂ ಹೊರಬಂದಿಲ್ಲ. ಅವರಿಗೆ ಲೋಕಸಭೆ ಚುನಾವಣೆ ನಡೆಯುತ್ತಿದೆ ಎಂಬುದೇ ಗೊತ್ತಿಲ್ಲ. ಕಾಂಗ್ರೆಸ್‌ನಲ್ಲಿ ವಿಶ್ವಾಸಾರ್ಹ ನಾಯಕತ್ವವೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. 

ಶಿವಮೊಗ್ಗ (ಮೇ.06): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆ ಚುನಾವಣೆ ಗುಂಗಿನಿಂದ ಇನ್ನೂ ಹೊರಬಂದಿಲ್ಲ. ಅವರಿಗೆ ಲೋಕಸಭೆ ಚುನಾವಣೆ ನಡೆಯುತ್ತಿದೆ ಎಂಬುದೇ ಗೊತ್ತಿಲ್ಲ. ಕಾಂಗ್ರೆಸ್‌ನಲ್ಲಿ ವಿಶ್ವಾಸಾರ್ಹ ನಾಯಕತ್ವವೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆ ಸಿಗರು ಕೇಂದ್ರ ಸರ್ಕಾರದ ಅನುದಾನದ ವಿಚಾರದಲ್ಲಿ ಜನರನ್ನು ದಾರಿತಪ್ಪಿಸಿ, ವಿವಾದ ಸೃಷ್ಟಿಸುತ್ತಿದ್ದಾರೆ. ಈ ಮೂಲಕ ಜನರ ಬೆಂಬಲ ಗಳಿಸುವ ಭ್ರಮೆಯಲ್ಲಿದ್ದಾರೆ. ಬಿಜೆಪಿ ಮೋದಿಯ ಸಾಧನೆ ಆಧಾರದಲ್ಲಿ ಚುನಾವಣೆ ಎದುರಿಸುತ್ತಿದ್ದರೆ, ಕಾಂಗ್ರೆಸ್ ಸುಳ್ಳಿನ ಆಧಾರದಲ್ಲಿ ಚುನಾವಣೆ ಎದುರಿಸುತ್ತಿದೆ. 

ಪ್ರಪಂಚದಲ್ಲಿ ಭಾರತ ಬಲಿಷ್ಠ ಆರ್ಥಿಕ ಶಕ್ತಿಯಾಗಿ ಬೆಳೆಯುತ್ತಿದೆ ಎಂದರು. ಬಿಜೆಪಿ ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದುಪಡಿಸಿದೆ. ಆದರೆ ಕಾಂಗ್ರೆಸ್ ಸರ್ಕಾರ ಬಂದರೆ ಅದನ್ನು ಮರುಸ್ಥಾಪಿಸು ವುದಾಗಿ ಹೇಳಿದೆ. ಕಾಂಗ್ರೆಸ್ ತುಷ್ಟಿಕರಣದ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಬಿಸಿ ವರ್ಗದ ಜೀವನ ಕಷ್ಟಕರವಾಗಲಿದೆ ಎಂದು ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಅಧಿಕಾರದಲ್ಲಿ ಹನುಮಾನ್ ಚಾಲಿಸಾ ಹೇಳಿದವರ ಮೇಲೆ ದಾಳಿಯಾಗುತ್ತಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ 2ಜಿ ಸ್ಕ್ಯಾಮ್ ನಂತೆ ಹಲವು ಹಗರಣಗಳನ್ನು ಮಾಡಲು ಕನಸು ಕಾಣುತ್ತಿದೆ. ರಾಜ್ಯದಲ್ಲಿ ಬರಗಾಲ ತಾಂಡವಾಡುತ್ತಿದ್ದು, ಬೇಜವಾಬ್ದಾರಿ ಸರ್ಕಾರವಿದೆ. ಎಸ್ಸಿ, ಎಸ್ಟಿಗಳಿಗೆ ಸೇರಿದ 23,000 ಕೋಟಿ ಹಣವನ್ನು ರಾಜ್ಯ ಸರ್ಕಾರ ನುಂಗಿ ನೀರು ಕುಡಿದಿದೆ ಎಂದು ಕಿಡಿಕಾರಿದರು.

ಮತ್ತೆ ಕೈ ಕೊಟ್ಟ ಪೂರ್ವ ಮುಂಗಾರು: ಚಾಮರಾಜನಗರ ಜಿಲ್ಲೆಯಲ್ಲಿ ಅಂತರ್ಜಲ‌ ಕುಸಿತ

ಚುನಾವಣೆ ನಂತರ ರಾಜ್ಯ ಸರ್ಕಾರ ಪಥನ: ಆರ್ಥಿಕವಾಗಿ ದಿವಾಳಿಯಾಗಿರುವ ಕಾಂಗ್ರೆಸ್ ಸರ್ಕಾರ ಲೋಕಸಭಾ ಚುನಾವಣೆಯ ನಂತರ ಪಥನಗೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಲೋಕಸಭಾ ಚುನಾವಣೆ ನಿಮಿತ್ತ ಹಮ್ಮಿಕೊಂಡಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ಜಾರಿಗೆ ತಂದ ಕಿಸಾನ್ ಸಮ್ಮಾನ್ ಯೋಜನೆ ಸೇರಿದಂತೆ ತಮ್ಮ ಅಧಿಕಾರವಧಿಯಲ್ಲಿ ರೂಪಿಸಿದ ಭಾಗ್ಯಲಕ್ಷ್ಮಿ ಯೋಜನೆಯನ್ನು ಸ್ಥಗಿತಗೊಳಿಸಿದ್ದಾರೆ. ಇಂದು ಬಡವರಿಗೆ ನ್ಯಾಯಬೆಲೆ ಅಂಗಡಿಯಲ್ಲಿ ಉಚಿತವಾಗಿ ನೀಡುತ್ತಿರುವ ೫ ಕೆಜಿ ಅಕ್ಕಿ ಕೇಂದ್ರದ ಬಿಜೆಪಿ ಸರ್ಕಾರದ್ದು.

ಗ್ಯಾರಂಟಿ ಯೋಜನೆಗಳ ಮೂಲಕ ಜನರಿಗೆ ಟೋಪಿ ಹಾಕುತ್ತಿದೆ. ಖಜಾನೆ ಖಾಲಿಯಾಗಿರುವುದರಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಚುನಾವಣೆ ನಂತರ ಸರ್ಕಾರದ ಬಂಡವಾಳ ಜನತೆಗೆ ತಿಳಿಯುತ್ತದೆ. ದೇಶದಲ್ಲಿ ನಿರೀಕ್ಷೆಗೂ ಮೀರಿ ಗೆಲುವು ಸಾಧಿಸುತ್ತೇವೆ. ನಂತರ ಕಾಂಗ್ರೆಸ್‌ಗೆ ಅಡ್ರಾಸ್ ಇಲ್ಲದಂತಾಗುತ್ತದೆ ಎಂದರು.ಕಾಂಗ್ರೆಸ್ ಹಣ, ಹೆಂಡ, ಜಾತಿ ಬಲದಿಂದ ಚುನಾವಣೆ ಮಾಡಲು ಹೊರಟ್ಟಿದ್ದು, ಜನತೆ ಇದಕ್ಕೆ ಮಣೆ ಹಾಕಬಾರದು. ಸೂರ್ಯ-ಚಂದ್ರ ಇರುವುದು ಎಷ್ಟು ಸತ್ಯವೋ ರಾಘವೇಂದ್ರ ಶಿವಮೊಗ್ಗದಲ್ಲಿ ಗೆಲುವು ಸಾಧಿಸುವುದು ಅಷ್ಟೇ ಸತ್ಯ. ತಾಲೂಕಿನಲ್ಲಿ ಕುಮಾರ ಬಂಗಾರಪ್ಪ ಅವರ ನೇತೃತ್ವದಲ್ಲಿ ೨೫ ಸಾವಿರಕ್ಕೂ ಅಧಿಕ ಮತಗಳು ಚಲಾವಣೆಯಾಗುತ್ತವೆ ಎಂದರು.

ಅಪ್ರಾಪ್ತೆ ಮದುವೆಯಾಗುವೆ ಎಂದ ಆರೋಪಿ: ಫೋಕ್ಸೋ ಕೇಸ್ ಹೈಕೋರ್ಟ್‌ನಲ್ಲಿ ರದ್ದು!

ಅಭ್ಯರ್ಥಿ ಬಿ.ವೈ.ರಾಘವೇಂದ್ರ ಮಾತನಾಡಿ, ಬಿಜೆಪಿ ಸರ್ಕಾರ ಚಂದ್ರಗುತ್ತಿಯ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ೧.೫ ಕೋಟಿ ಹಣವನ್ನು ಈಗಿನ ಕಾಂಗ್ರೆಸ್ ಸರ್ಕಾರ ವಾಪಸ್ ಪಡೆದಿರುವುದು ನಾಚಿಕೆಗೇಡಿನ ವಿಷಯ ಹಿಂದಿನ ಯೋಜನೆಗಳನ್ನೂ ತಡೆಹಿಡಿಯಲಾಗಿದ್ದು, ಕೇಂದ್ರ ಸರ್ಕಾರದ ಯೋಜನೆಗಳು ಮತ್ತು ಬಿಜೆಪಿ ಪಕ್ಷದ ಆಡಳಿತ ಅವಧಿಯಲ್ಲಿ ಆಗಿರುವ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವ ಮೂಲಕ ಚುನಾವಣೆ ಎದುರಿಸುತ್ತೇವೆ ಎಂದರು.

click me!