ವಿಜಯಪುರ, ಬಳ್ಳಾರೀಲಿ ಇಂದು ರಾಹುಲ್‌ ಗಾಂಧಿ ಅಬ್ಬರ: ಎರಡೂ ಕಡೆ ಕಾಂಗ್ರೆಸ್‌ ಸಮಾವೇಶ

By Kannadaprabha News  |  First Published Apr 26, 2024, 4:38 AM IST

ಕಾಂಗ್ರೆಸ್ ಮುಖಂಡ ರಾಹುಲ್‌ ಗಾಂಧಿಯವರು ಶುಕ್ರವಾರ ವಿಜಯಪುರ ಹಾಗೂ ಬಳ್ಳಾರಿಗಳಿಗೆ ಭೇಟಿ ನೀಡಲಿದ್ದು, ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. 
 


ವಿಜಯಪುರ/ಬಳ್ಳಾರಿ (ಏ.26): ಕಾಂಗ್ರೆಸ್ ಮುಖಂಡ ರಾಹುಲ್‌ ಗಾಂಧಿಯವರು ಶುಕ್ರವಾರ ವಿಜಯಪುರ ಹಾಗೂ ಬಳ್ಳಾರಿಗಳಿಗೆ ಭೇಟಿ ನೀಡಲಿದ್ದು, ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ವಿಜಯಪುರಕ್ಕೆ ಆಗಮಿಸಲಿರುವ ರಾಹುಲ್‌, ವಿಜಯಪುರದ ಬಿಎಲ್‌ಡಿಇ ನ್ಯೂ ಕ್ಯಾಂಪಸ್‌ನಲ್ಲಿ ವಿಜಯಪುರ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಪರ ಮತಯಾಚನೆ ನಡೆಸಲಿದ್ದಾರೆ. ಸಮಾವೇಶದಲ್ಲಿ 50 ಸಾವಿರಕ್ಕೂ ಅಧಿಕ ಜನ ಸೇರುವ ನಿರೀಕ್ಷೆಯಿದೆ. 

ಕಾರ್ಯಕ್ರಮಕ್ಕಾಗಿ ಬೃಹತ್ ವೇದಿಕೆ ನಿರ್ಮಿಸಲಾಗಿದ್ದು, ವಿಶಾಲವಾದ ಪೆಂಡಾಲ್ ಹಾಕಲಾಗಿದೆ. ಸಿಎಂ‌ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪಸಿಂಗ್ ಸುರ್ಜೆವಾಲಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಬಳಿಕ, ಸಂಜೆ 4 ಗಂಟೆಗೆ ಬಳ್ಳಾರಿಗೆ ಆಗಮಿಸಲಿರುವ ರಾಹುಲ್‌, ನಗರದ ಮುನ್ಸಿಪಲ್‌ ಕಾಲೇಜು ಮೈದಾನದಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೊಂಡು, ಬಳ್ಳಾರಿ ಮತ್ತು ಕೊಪ್ಪಳ ಕ್ಷೇತ್ರಗಳ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ. ಸಮಾವೇಶದಲ್ಲಿ 1 ಲಕ್ಷಕ್ಕೂ ಅಧಿಕ ಮಂದಿ ಸೇರುವ ನಿರೀಕ್ಷೆಯಿದೆ.

Tap to resize

Latest Videos

ಕಾಂಗ್ರೆಸ್ ರಾಷ್ಟ್ರೀಯ ಮುಖಂಡ ರಾಹುಲ್‌ ಗಾಂಧಿ ಅವರು ಏ.26 ರಂದು ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಗುರುವಾರ ಬಿ.ಎಲ್.ಡಿ.ಇ ನ್ಯೂ ಕ್ಯಾಂಪಸ್‌ಗೆ ಭೇಟಿ ನೀಡಿದರು. ಸಂಸದ ಮತ್ತು ಎಐಸಿಸಿ ರಾಷ್ಟ್ರೀಯ ಮುಖಂಡ ರಾಹುಲ್‌ ಗಾಂಧಿ ಅವರು ವಿಜಯಪುರ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಪರ ಮತಯಾಚನೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ನಡೆಯಲಿರುವ ಸ್ಥಳದಲ್ಲಿ ಕೈಗೊಳ್ಳಲಾಗುತ್ತಿರುವ ಸಿದ್ಧತೆಗಳನ್ನು ಸಚಿವರು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ಶುಕ್ರವಾರ ಬೆಳಗ್ಗೆ 11 ಗಂಟೆಗೆ ರಾಹುಲ್‌ ಗಾಂಧಿ ಪ್ರಚಾರ ಸಭೆಗೆ ಆಗಮಿಸಲಿದ್ದಾರೆ. 

ಮುಸ್ಲಿಂ ಮೀಸಲು ಮುಂದುವರಿಸಿದ್ದು ಬೊಮ್ಮಾಯಿ ಸರ್ಕಾರ: ಸಿಎಂ ಸಿದ್ದರಾಮಯ್ಯ

ಸಿಎಂ‌ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪಸಿಂಗ್ ಸುರ್ಜೆವಾಲಾ ಪಾಲ್ಗೊಳ್ಳುತ್ತಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಗಮಿಸುವುದು ಇನ್ನೂ ಖಚಿತವಾಗಿಲ್ಲ. ಅವರು ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಪ್ರಚಾರದಲ್ಲಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ನಾಯಕರು ದೇಶದ ಬೇರೆ ಬೇರೆ ಕಡೆ ಪ್ರತ್ಯೇಕವಾಗಿ ಪ್ರಚಾರ ನಡೆಸುತ್ತಿದ್ದಾರೆ. ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲೆಯ ಎಲ್ಲ ಊರುಗಳಿಂದ 50 ಸಾವಿರಕ್ಕೂ ಹೆಚ್ಚು ಜನ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಭಾಗವಹಿಸಲಿದ್ದಾರೆ. ಎಲ್ಲರಿಗೂ ಆಸನದ ವ್ಯವಸ್ಥೆ ಮಾಡಲಾಗಿದೆ. ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಲಿದೆ ಎಂದು ತಿಳಿಸಿದರು.

click me!