ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವುದಕ್ಕೆ ದೆಹಲಿ ಪೊಲೀಸರು ಹೈದರಾಬಾದ್‌ನ ನನ್ನ ಮನೆಗೆ ನೋಟಿಸ್ ಕೊಡಲು ಬಂದಿದ್ದಾರಂತೆ. ಮೋದಿಯವರು ದೆಹಲಿ ಪೊಲೀಸರನ್ನು ನನ್ನ ವಿರುದ್ಧ ಈಗ ಛೂ ಬಿಟ್ಟಿದ್ದಾರೆ. ಆದರೆ, ಇದಕ್ಕೆಲ್ಲಾ ನಾನು ಹೆದರುವುದಿಲ್ಲ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಆರೋಪಿಸಿದ್ದಾರೆ.
ಕಲಬುರಗಿ (ಏ.30): ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವುದಕ್ಕೆ ದೆಹಲಿ ಪೊಲೀಸರು ಹೈದರಾಬಾದ್‌ನ ನನ್ನ ಮನೆಗೆ ನೋಟಿಸ್ ಕೊಡಲು ಬಂದಿದ್ದಾರಂತೆ. ಮೋದಿಯವರು ದೆಹಲಿ ಪೊಲೀಸರನ್ನು ನನ್ನ ವಿರುದ್ಧ ಈಗ ಛೂ ಬಿಟ್ಟಿದ್ದಾರೆ. ಆದರೆ, ಇದಕ್ಕೆಲ್ಲಾ ನಾನು ಹೆದರುವುದಿಲ್ಲ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಆರೋಪಿಸಿದ್ದಾರೆ. ಕಲಬುರಗಿ ಜಿಲ್ಲೆ ಸೇಡಂನಲ್ಲಿ ಸೋಮವಾರ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿ, ಮೋದಿಯವರೆ, ಈ ಹಿಂದೆ ಇ.ಡಿ, ಐ.ಟಿಯವರನ್ನು ಕಳಿಸಿದ್ದೀರಿ. ಈಗ ದಿಲ್ಲಿ ಪೊಲೀಸರನ್ನು ಕಳಿಸಿದ್ದೀರಿ. ಆದರೆ, ನಾನು ಇದಕ್ಕೆಲ್ಲ ಹೆದರುವುದಿಲ್ಲ ಎಂದರು.
ಕೇಂದ್ರ ಸರ್ಕಾರ ಬರ ಪರಿಹಾರ ನೀಡಲು ವಿಳಂಬ ಧೋರಣೆ ಅನುಸರಿಸಿದ್ದರಿಂದ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ದಿಲ್ಲಿಯಲ್ಲಿ ಪ್ರತಿಭಟನೆ ಮಾಡುವ ಸನ್ನಿವೇಶ ನಿರ್ಮಾಣವಾಗಿತ್ತು. ನಂತರ, ಕರ್ನಾಟಕ ರಾಜ್ಯ ಸರ್ಕಾರ ಸುಪ್ರಿಂಕೋರ್ಟ್ ಮೊರೆ ಹೋಗಬೇಕಾಯಿತು ಎಂದು ವಾಗ್ದಾಳಿ ನಡೆಸಿದರು. ಬಿಜೆಪಿ 400 ಸೀಟು ಗೆದ್ದಲ್ಲಿ ಎಸ್ ಸಿ, ಎಸ್ ಟಿ, ಹಿಂದುಳಿದ ವರ್ಗಗಳ ಮೀಸಲಾತಿಯನ್ನು ರದ್ದುಗೊಳಿಸುತ್ತದೆ. ಹಾಗಾಗಿ, ನೀವೆಲ್ಲ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ಮೂಲಕ ಬಿಜೆಪಿಯ ಹುನ್ನಾರವನ್ನು ವಿಫಲಗೊಳಿಸಬೇಕು ಎಂದು ಜನರಿಗೆ ರೇವಂತ್ ರೆಡ್ಡೆ ಮನವಿ ಮಾಡಿದರು.
undefined
ಪ್ರಧಾನಿ ಮೋದಿಗೆ ಮಕ್ಕಳಿಲ್ಲ ಅಂದ್ರೆ ನಾವೇನು ಮಾಡೋಣ: ಮಲ್ಲಿಕಾರ್ಜುನ ಖರ್ಗೆ
ಮೀಡಿಯಾದವರ ಮೌನ ಯಾಕೋ ಗೊತ್ತಿಲ್ಲ: ಎರಡೆರಡು ಸಿಎಂಗಳನ್ನು ಜೈಲಿಗೆ ತಳ್ಳಲಾಗಿದೆ. ಆದರೂ ಕೂಡಾ ಮಿಡಿಯಾಗಳು ಸುಮ್ಮನಿವೆ. ಕಾರಣ ಬಹುತೇಕ ಮೀಡಿಯಾಗಳು ಶ್ರೀಮಂತರ ಆಧೀನದಲ್ಲಿವೆ. ರೇವಂತರೆಡ್ಡಿ ಮನೆಗೆ ದಿಲ್ಲಿ ಪೊಲೀಸರು ಬಂದಿರುವ ಬಗ್ಗೆ ಯಾವ ಮೀಡಿಯಾಗಳು ಪ್ರಶ್ನಿಸುವುದಿಲ್ಲ ಎಂದು ಅಸಮಾಧಾನ ಹೊರಹಾಕಿದರು. ಬಿಜೆಪಿಗೆ 400 ಸೀಟು ಈ ಸಲ ಸಿಕ್ಕರೆ ಸಂವಿಧಾನವನ್ನು ಬದಲಾಯಿಸುತ್ತಾರೆ ಎಂದು ಆತಂಕ ವ್ಯಕ್ತಪಡಿಸಿದ ಅವರು ಸಂವಿಧಾನದಿಂದ ಸಮಾಜದ ಎಲ್ಲ ವರ್ಗದವರಿಗೆ ಸಮಾನ ಅವಕಾಶ ಹಾಗೂ ಹಕ್ಕುಸಿಗುತ್ತದೆ. ಆದರೆ ಸಂವಿಧಾನ ಬದಲಾದರೆ ಎಲ್ಲ ಅವಕಾಶಗಳು ಕಳೆದು ಹೋಗಲಿವೆ ಎಂದರು.
ಪ್ರಜ್ವಲ್ ರೇವಣ್ಣ ಕೇಸ್ ಪ್ರಸ್ತಾಪಿಸಿ ಮೋದಿಗೆ ಟಾಂಗ್: ಒಲಿಂಪಿಕ್ಸ್ ಆಟಗಾರರ ಮೇಲೆ ಕಿರುಕುಳವಾಗಿತ್ತು, ಮಹಿಳೆಯ ಮೇಲೆ ಅತ್ಯಾಚಾರವಾಗಿತ್ತು. ಆಗ ಮೋದಿ ಸುಮ್ಮನೆ ಇದ್ದರು. ಮೋದಿ ಜತೆ ಇರುವ ವ್ಯಕ್ತಿ ಇಂದು ಕರ್ನಾಟಕದಲ್ಲಿ ಸಾವಿರಾರು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ದಾರೆ. ಅದೇ ವ್ಯಕ್ತಿಯ ಪರ ಮತಯಾಚಿಸಿದ್ದ ಮೋದಿ ಹಾಗೂ ಅಮಿತ್ ಶಾ ಉತ್ತರಿಸಿಲಿ. ಅದೇ ವ್ಯಕ್ತಿ ಯಾರಿಗೂ ಗೊತ್ತಾಗದಂತೆ ವಿದೇಶಕಕ್ಕೆ ಪರಾರಿಯಾದ. ಮಂಗಲಸೂತ್ರದ ಬಗ್ಗೆ ಮಾತನಾಡುವ ಮೋದಿ ಈಗ ಏನು ಹೇಳುತ್ತಾರೆ? ಈ ದೇಶದಲ್ಲಿ ಬಹಳಷ್ಟು ಪ್ರದಾನಿಗಳು ಆಗಿ ಹೋಗಿದ್ದಾರೆ.
ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಕೇಸ್ ಬಗ್ಗೆ ಬಿಜೆಪಿ ನಿಲುವೇನು: ಡಿ.ಕೆ.ಶಿವಕುಮಾರ್
ಅವರೆಲ್ಲ ಸತ್ಯದ ಹಾದಿಯಲ್ಲಿ ನಡೆದಿದ್ದಾರೆ. ಆದರೆ ಮೋದಿ ಅವರು ಮಹಿಳೆಯರ ರಕ್ಷಣೆಗೆ ಏನು ಮಾಡಿದ್ದಾರೆ ಹೇಳಲಿ. ನೀವು ಪ್ರಶ್ನೆ ಮಾಡಿ, ನೀವು ಸುಮ್ಮನಿದ್ದರೆ ಧರ್ಮ ಹಾಗೂ ಜಾತಿಯ ಆಧಾರದ ಮೇಲೆ ಮೋದಿ ಮತ ಕೇಳಲು ಬರುತ್ತಾರೆ ಎಂದು ಎಚ್ಚರಿಸಿದರು. ಈ ದೇಶದ ಭವಿಷ್ಯ ನಿಮ್ಮ ಕೈಯಲ್ಲಿದೆ. ಸಂವಿಧಾನ ದುರ್ಬಲಗೊಳಿಸುವ ಮಾತು ನಡೆಯುತ್ತಿದೆ. ವಿಚಾರ ಮಾಡಿ ಮತದಾನ ಮಾಡಿ. ನಿಮಗೆ ಟಿವಿಯಲ್ಲಿ ಏನು ತೋರಿಸಲಾಗುತ್ತಿದೆ ಅದುಸತ್ಯವಲ್ಲ. ಜನರು ಹೇಗೆ ಕಷ್ಟಪಡುತ್ತಿದ್ದಾರೆ ಎನ್ನುವ ಕುರಿತು ಮೋದಿಗೆ ಗೊತ್ತಿಲ್ಲ. ಈ ಸರ್ಕಾರವನ್ನು ತೊಲಗಿಸಿ ನಿಮಗೆ ಅನುಕೂಲವಾಗುವಂತ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ ಎಂದರು.