ಏ.23, 24ಕ್ಕೆ ರಾಜ್ಯಕ್ಕೆ ಶಾ, ಯೋಗಿ ಆಗಮನ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಬೃಹತ್ ಸಮಾವೇಶ

By Kannadaprabha News  |  First Published Apr 18, 2024, 5:23 AM IST

ರಾಜ್ಯದ ಮೊದಲ ಹಾಗೂ ದೇಶದ 2ನೇ ಹಂತದ ಚುನಾವಣೆಗಳು ಸಮೀಪಿಸುತ್ತಿದ್ದಂತೆಯೇ ಪ್ರಚಾರ ರಂಗೇರಲಿದೆ. ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ನಾಯಕ ಅಮಿತ್‌ ಶಾ, ಈ ತಿಂಗಳ 23 ಮತ್ತು 24ರಂದು ಕರ್ನಾಟಕದಲ್ಲಿ ವಿವಿಧ ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗವಹಿಸುತ್ತಾರೆ.


ಬೆಂಗಳೂರು (ಏ.18): ರಾಜ್ಯದ ಮೊದಲ ಹಾಗೂ ದೇಶದ 2ನೇ ಹಂತದ ಚುನಾವಣೆಗಳು ಸಮೀಪಿಸುತ್ತಿದ್ದಂತೆಯೇ ಪ್ರಚಾರ ರಂಗೇರಲಿದೆ. ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ನಾಯಕ ಅಮಿತ್‌ ಶಾ, ಈ ತಿಂಗಳ 23 ಮತ್ತು 24ರಂದು ಕರ್ನಾಟಕದಲ್ಲಿ ವಿವಿಧ ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗವಹಿಸುತ್ತಾರೆ ಇದಲ್ಲದೆ, ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರದ ಕೊನೆಯ ದಿನವಾದ ಏ.24ರಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕರ್ನಾಟಕದಲ್ಲಿ 3 ಕಡೆ ಪ್ರವಾಸ ಕೈಗೊಂಡು ತಯಾಚಿಸಲಿದ್ದಾರೆ. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್ ಈ ವಿಷಯ ತಿಳಿಸಿದ್ದಾರೆ.

23-24ರಂದು ಶಾ ಪ್ರಚಾರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರವಾಸವೂ ಕೂಡ ನಿಗದಿಯಾಗಿದೆ. ಈ ತಿಂಗಳ 23 ಮತ್ತು 24ರಂದು ಕರ್ನಾಟಕದಲ್ಲಿ ವಿವಿಧ ಚುನಾವಣಾ ಪ್ರಚಾರ ಸಭೆಗಳಲ್ಲಿ ಅವರು ಭಾಗವಹಿಸುತ್ತಾರೆ. 23ರಂದು ಬೆಳಿಗ್ಗೆ ಯಶವಂತಪುರದಲ್ಲಿ ರೋಡ್ ಶೋ, ಬಳಿಕ ಯಲಹಂಕದಲ್ಲಿ ಸಾರ್ವಜನಿಕ ಸಭೆ ಇರುತ್ತದೆ. ಸಂಜೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೋಡ್ ಷೋ ಇರುತ್ತದೆ. ನಂತರ ಮಹದೇವಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೋಡ್ ಷೋ ಇರಲಿದೆ. 24ರಂದು ಬೆಳಿಗ್ಗೆ ಚಿಕ್ಕಮಗಳೂರಿನಲ್ಲಿ ಸಾರ್ವಜನಿಕ ಸಭೆ, ಮಧ್ಯಾಹ್ನ ತುಮಕೂರಿನಲ್ಲಿ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸಂಜೆ ಹುಬ್ಬಳ್ಳಿಯಲ್ಲಿ ರೋಡ್ ಶೋ ಮೂಲಕ ಮತಯಾಚಿಸಲಿದ್ದಾರೆ.

Tap to resize

Latest Videos

ಕೇಂದ್ರ ಸರ್ಕಾರ ಉದ್ಯಮಿಗಳಿಂದ ಹಫ್ತಾ ಸುಲಿಗೆ: ರಾಹುಲ್‌ ಗಾಂಧಿ ಗಂಭೀರ ಆರೋಪ

24ಕ್ಕೆ ಯೋಗಿ: 24ರಂದು ಬೆಳಿಗ್ಗೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋ ಮೂಲಕ ಡಾ.ಸಿ.ಎನ್‌.ಮಂಜುನಾಥ್ ಮತಯಾಚಿಸಲಿದ್ದಾರೆ. ಮಧ್ಯಾಹ್ನ ಮೈಸೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಮಡಿಕೇರಿಯಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ಸಂಜೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಮಲ್ಪೆಯಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಭಾಷಣ ಮಾಡಲಿದ್ದಾರೆ ಎಂದು ಸುನೀಲ್‌ ವಿವರಿಸಿದರು. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು 21ರಂದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು 24ರಂದು ರಾಜ್ಯ ಪ್ರವಾಸ ಮಾಡಲಿದ್ದಾರೆ ಎಂದು ತಿಳಿಸಿದರು. ಆದರೆ ಎಲ್ಲಿ ಪ್ರಚಾರ ಎಂಬ ಮಾಹಿತಿ ನೀಡಲಿಲ್ಲ.

click me!