ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೂ, ಗೋವುಗಳಿಗೂ ರಕ್ಷಣೆ ಇಲ್ಲ: ಮುರುಗೇಶ ನಿರಾಣಿ

By Ravi Janekal  |  First Published Apr 22, 2024, 5:36 PM IST

ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಅತ್ಯಂತ ಅಮಾನುಷ ಕೃತ್ಯವಾಗಿದೆ. ಕಾಂಗ್ರೆಸ್‌ನ ಲೋಕಸಭಾ ಸದಸ್ಯರು, ಶಾಸಕು ಕೂಡ ಇದರ ಬಗ್ಗೆ ನೋವನ್ನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ನ ಕಟ್ಟಕಡೆಯ ಮನುಷ್ಯ ಕೂಡ ಇದನ್ನು ಖಂಡಿಸುತ್ತಿದ್ದಾನೆ. ಆದರೆ ಇದನ್ನ ಅವರಿಗೆ ಹೇಳಿಕೊಳ್ಳಲು ಆಗುತ್ತಿಲ್ಲ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು.


ಬಾಗಲಕೋಟೆ (ಏ.22): ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಅತ್ಯಂತ ಅಮಾನುಷ ಕೃತ್ಯವಾಗಿದೆ. ಕಾಂಗ್ರೆಸ್‌ನ ಲೋಕಸಭಾ ಸದಸ್ಯರು, ಶಾಸಕು ಕೂಡ ಇದರ ಬಗ್ಗೆ ನೋವನ್ನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ನ ಕಟ್ಟಕಡೆಯ ಮನುಷ್ಯ ಕೂಡ ಇದನ್ನು ಖಂಡಿಸುತ್ತಿದ್ದಾನೆ. ಆದರೆ ಇದನ್ನ ಅವರಿಗೆ ಹೇಳಿಕೊಳ್ಳಲು ಆಗುತ್ತಿಲ್ಲ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು.

ಇಂದು ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೇಹಾ ಹತ್ಯೆ ಪ್ರಕರಣದಲ್ಲಿ ರಾಜ್ಯಸರ್ಕಾರದ ಹಾರಿಕೆ ಉತ್ತರಗಳನ್ನ ನೋಡಿದರೆ ಹಾಸ್ಯಾಸ್ಪದವೆನಿಸುತ್ತದೆ. ಇದೇ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯ ಬೆತ್ತಲೆಗೊಳಿಸಿ ಅಮಾನುಷವಾಗಿ ನಡೆಸಿಕೊಂಡ ಪ್ರಕರಣದ ನಡೆಯಿತು, ಬೆಂಗಳೂರಿನಲ್ಲಿ ಬಾಂಬ್ ಸ್ಫೋಟವಾಯ್ತು, ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾಯ್ತು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಹಿಂದೂಗಳ ಮೇಲೆ ಹಲ್ಲೆ, ಕೊಲೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ. ಹಿಂದುಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಹಿಂದೂಗಳು ಈಗಾಲಾದ್ರೂ ಎಚ್ಚೆತ್ತುಕೊಳ್ಳಬೇಕು ಎಂದು ಎಚ್ಚರಿಸಿದರು.

Tap to resize

Latest Videos

undefined

'ಹಿಂದೂಗಳ ಮಂಗಳಸೂತ್ರ ಮುಸ್ಲಿಮರ ಪಾಲಾಗಲಿದೆ' ಎಂಬ ಪ್ರಧಾನಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು?

ರಾಜ್ಯ ಸರ್ಕಾರ ನೇಹಾ ಕೊಲೆ ಪ್ರಕರಣದ ಆರೋಪಿಯ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಮುಖ್ಯಮಂತ್ರಿ, ಗೃಹಮಂತ್ರಿ ಅವರು ಬಹಳ ತಿಳಿವಳಿಕೆ ಇದ್ದವರು ಇದ್ದಾರೆ. ಆದರೆ ಅವರು ಮತಬ್ಯಾಂಕ್ ರಾಜಕಾರಣ, ಮುಸ್ಲಿಮರ ತುಷ್ಟೀಕರಣ ಮಾಡಲು ಹಾರಿಕೆ ಉತ್ತರಗಳನ್ನು ನೀಡುತ್ತಿದ್ದಾರೆ. ಒಂದು ಹೆಣ್ಣುಮಗಳ ಹತ್ಯೆಯಲ್ಲಿ ಈ ರೀತಿ ವರ್ತಿಸುತ್ತಿರುವುದು ಆಘಾತಕಾರಿಯಾಗಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಬಂದಾಗಿಂದದ ಮತ್ತೆ ಗೋವುಗಳ ಅಕ್ರಮ ಸಾಗಾಟ ಹೆಚ್ಚಳವಾಗಿದೆ. ಮೇಯಲು ಹೋದ ಗೋವುಗಳು ವಾಪಸ್ ಬರುತ್ತಿಲ್ಲ. ಗೋವುಗಳಿಗೂ ರಕ್ಷಣೆ ಇಲ್ಲದಂತಾಗಿದೆ. ಒಟ್ಟಾರೆ ಕಾಂಗ್ರೆಸ್ ಸರ್ಕಾರದ ಧೋರಣೆಯಿಂದ ಹಿಂದೂಗಳಿಗೆ, ಗೋವುಗಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು

 

ನೇಹಾ ಹತ್ಯೆ ಪ್ರಕರಣದಲ್ಲಿ ಮತಬ್ಯಾಂಕ್ ರಾಜಕಾರಣ; ರಾಜ್ಯಸರ್ಕಾರದ ವಿರುದ್ಧ ಜೋಶಿ ಆಕ್ರೋಶ

ಈ ಬಾರಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುತ್ತೇವೆ. ಬಿಜೆಪಿ ಜೆಡಿಎಸ್ ಮೈತ್ರಿ ಇರುವುದರಿಂದ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದ್ದೇವೆ. ದೇಶದಲ್ಲಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದೇ ವೇಳೆ, ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರಿಗೆ ಹಣ ನೀಡಿದ್ದಾರೆಂಬ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪ ಸಂಬಂಧ ಪ್ರತಿಕ್ರಿಯಿಸಿದ ನಿರಾಣಿ, ಅವರಿಗೆ ಯಾವುದೇ ಹಣವನ್ನು ನೀಡಿಲ್ಲ. ಸಕ್ಕರೆ ಕಾರ್ಖಾನೆಗಳಿಂದ ಯಾವುದೇ ಹಣವನ್ನು ನೀಡಿರುವುದಿಲ್ಲ. ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ ಅವರ ಆರೋಪಕ್ಕೆ ಸ್ಪಷ್ಟನೆ ನೀಡಿದರು.

click me!