ಕೊನೆ ರೌಂಡ್‌ವರೆಗೂ ಈಶ್ವರಪ್ಪ ಮತ ಬರೊಲ್ಲ: ವಿಜಯೇಂದ್ರ

By Kannadaprabha News  |  First Published Apr 24, 2024, 5:36 AM IST

ಈಶ್ವರಪ್ಪ ಅವರನ್ನು ಮನವೊಲಿಸುವ ಸಾಕಷ್ಟು ಪ್ರಯತ್ನದ ಹೊರತಾಗಿಯೂ ಸ್ಪರ್ಧಾ ಕಣದಲ್ಲಿ ಉಳಿದಿದ್ದಾರೆ. ಹೀಗಾಗಿ, ಬಿಜೆಪಿಯ ಶಿಸ್ತು ಸಮಿತಿ ಅವರನ್ನು ಪಕ್ಷದಿಂದ ಉಚ್ಚಾಟಿಸಿದೆ. ಇದಕ್ಕೆ ಈಶ್ವರಪ್ಪ ಸಹ ಸಂತೋಷ ವ್ಯಕ್ತಪಡಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.


ಶಿವಮೊಗ್ಗ (ಏ.24): ಈಶ್ವರಪ್ಪ ಅವರನ್ನು ಮನವೊಲಿಸುವ ಸಾಕಷ್ಟು ಪ್ರಯತ್ನದ ಹೊರತಾಗಿಯೂ ಸ್ಪರ್ಧಾ ಕಣದಲ್ಲಿ ಉಳಿದಿದ್ದಾರೆ. ಹೀಗಾಗಿ, ಬಿಜೆಪಿಯ ಶಿಸ್ತು ಸಮಿತಿ ಅವರನ್ನು ಪಕ್ಷದಿಂದ ಉಚ್ಚಾಟಿಸಿದೆ. ಇದಕ್ಕೆ ಈಶ್ವರಪ್ಪ ಸಹ ಸಂತೋಷ ವ್ಯಕ್ತಪಡಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಮಂಗಳವಾರ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದು, ಬಿಡುವುದು ಈಶ್ವರಪ್ಪ ಅವರಿಗೆ ಬಿಟ್ಟ ವಿಷಯ. ಆದರೆ, ಇದಕ್ಕೆ ಪ್ರತಿಕ್ರಿಯೆಯಾಗಿ ಬಿಜೆಪಿಯ ಶಿಸ್ತು ಸಮಿತಿ ಅವರನ್ನು ಪಕ್ಷದಿಂದ ಆರು ವರ್ಷ ಉಚ್ಚಾಟನೆ ಮಾಡಿದೆ. ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆ ಎಂಬುದು ಮತ ಎಣಿಕೆ ಆರಂಭವಾದಾಗ ಅವರಿಗೇ ಗೊತ್ತಾಗುತ್ತದೆ ಎಂದು ತಿರುಗೇಟು ನೀಡಿದರು.

Latest Videos

undefined

ಲೋಕಸಭಾ ಚುನಾವಣೆ 2024: ನಾಮಪತ್ರ ಹಿಂಪಡೆಯದೆ ಕಣದಲ್ಲೇ ಉಳಿದ ಈಶ್ವರಪ್ಪ

ಮೊದಲ ರೌಂಡ್ ನಿಂದ ಕೊನೆಯ ರೌಂಡ್ ವರೆಗೂ ಈಶ್ವರಪ್ಪಗೆ ಮತಗಳು ಬರುವುದಿಲ್ಲ. ರಾಘವೇಂದ್ರ ಅವರು ಕನಿಷ್ಠ ಎರಡೂವರೆ ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿಧಾನಸಭೆ ಚುನಾವಣೆಯಲ್ಲಿ ಜನರ ಕಣ್ಣಿಗೆ ಮಣ್ಣೆರಚಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನ ಆಡಳಿತವನ್ನು ನೋಡಿ ಜನ ಬೇಸತ್ತಿದ್ದಾರೆ. ದೇಶದಲ್ಲಿ ಮಹಾ ಚುನಾವಣೆ ನಡೆಯುತ್ತಿದ್ದು, ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿ ಆಗಬೇಕು ಎಂಬುದು ಜನರ ಅಪೇಕ್ಷೆಯಾಗಿದೆ. ಕಾಂಗ್ರೆಸ್‌ ನಿಂದ ರಾಜ್ಯದ ಜನತೆಗೆ ಚಿಪ್ಪು ಸಿಕ್ಕಿರುವುದೆಂದು ಈಗಾಗಲೇ ಮನವರಿಕೆ ಆಗಿದೆ. ಯಾವ ವಿಶ್ವಾಸವಿಟ್ಟು ಜನರು ಕಾಂಗ್ರೆಸ್ಸಿಗೆ ಮತ ಹಾಕಿದ್ದರೋ ಅದೇ ಜನ ಇವತ್ತು ರಾಜ್ಯ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ ಎಂದು ಆರೋಪಿಸಿದರು.

click me!