ಜನರ ಅಲೆಯಿಂದ ಯದುವೀರ್ ಒಡೆಯರ್ ಗೆಲುವು: ಎಚ್ ವಿಶ್ವನಾಥ್

By Ravi JanekalFirst Published Jun 5, 2024, 12:09 PM IST
Highlights

ಶ್ರೀರಾಮನ ಜನ್ಮಸ್ಥಳವಾಗಿರುವ ಅಯೋಧ್ಯೆಯಲ್ಲೇ ಬಿಜೆಪಿಗೆ ಸೋಲಾಗಿದೆ. ಜನರು ಇದನ್ನು ಒಪ್ಪುವುದಿಲ್ಲ ಎಂಬುದು ಸಾಬೀತಾಗಿದೆ. ಜನರಿಗೆ ಮೂಲಭೂತ ಸೌಕರ್ಯಗಳ ಅವಶ್ಯಕತೆ ಇದೆ. ಅದನ್ನ ಫಲಿತಾಂಶದ ಮೂಲಕ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಬಿಜೆಪಿ ವಿರುದ್ಧ ಹರಿಹಾಯ್ದರು.

ಮೈಸೂರು (ಜೂ.5): ಶ್ರೀರಾಮನ ಜನ್ಮಸ್ಥಳವಾಗಿರುವ ಅಯೋಧ್ಯೆಯಲ್ಲೇ ಬಿಜೆಪಿಗೆ ಸೋಲಾಗಿದೆ. ಜನರು ಇದನ್ನು ಒಪ್ಪುವುದಿಲ್ಲ ಎಂಬುದು ಸಾಬೀತಾಗಿದೆ. ಜನರಿಗೆ ಮೂಲಭೂತ ಸೌಕರ್ಯಗಳ ಅವಶ್ಯಕತೆ ಇದೆ. ಅದನ್ನ ಫಲಿತಾಂಶದ ಮೂಲಕ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಬಿಜೆಪಿ ವಿರುದ್ಧ ಹರಿಹಾಯ್ದರು.

ಇಂದು ಮೈಸೂರಿನ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಮಹಾತ್ಮಗಾಂಧಿ ಯಾರೆಂದು ಗೊತ್ತಿರಲಿಲ್ಲ ಎಂದು ಪ್ರಧಾನಿ ಮೋದಿ ಆಡಿದ ಮಾತು ಸರಿಯಲ್ಲ. ಸೂರ್ಯಚಂದ್ರ ಇರುವವರೆಗೂ ಮಹಾತ್ಮಗಾಂಧಿಯವರ ಹೆಸರು ಸ್ಥಿರವಾಗಿರುತ್ತದೆ ಎಂದರು.

Latest Videos

ಈಶ್ವರಪ್ಪಗೆ ಬರೀ 30 ಸಾವಿರ ಮತ; ಭಾರೀ ಸೋಲು, ಠೇವಣಿ ನಷ್ಟ!

ಇನ್ನು ಯದುವೀರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ನಿಲ್ಲಿಸದಂತೆ ಮಾಡಿಕೊಂಡ ಮನವಿಗೆ ಸಿಎಂ, ಡಿಸಿಎಂ ಸ್ಪಂದಿಸಲಿಲ್ಲ. ಅಭ್ಯರ್ಥಿಯನ್ನು ‌ನಿಲ್ಲಿಸಿ ಒಂದು ಲಕ್ಷಕ್ಕೂ ಹೆಚ್ಚು ಮತಗಳಿಂದ ಸೋಲಾಗಿದೆ. ಜನರು ಮಹಾರಾಜರನ್ನೇ ಗೆಲ್ಲಿಸಿದ್ದಾರೆ. ಜಾತಿ ವಿಚಾರ ಮುಂದಿಟ್ಟುಕೊಂಡು ಮತಯಾಚನೆ ಮಾಡಿದವರಿಗೆ ತಕ್ಕ ಪಾಠ ಕಲಿಸಿದ್ದಾರೆ. ಜನರು ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗಿಂತ, ಸರ್ಕಾರ ನಡೆಸುವ ನಾಯಕರ ನಡವಳಿಕೆಗಳನ್ನು ಗಮನಿಸುತ್ತಾರೆ. ಹಾಗಾಗಿ ನಾಯಕರು ಬಾಯಿಗೆ ಬಂದಂತೆ ಮಾತನಾಡುವುದನ್ನು ಬಿಡಬೇಕು.
ಜನರ ನಡುವೆ ಒಡಕುಂಟು ಮಾಡುವ ಮಾತುಗಳನ್ನು ನಾಯಕರು ಆಡಬಾರದು. ಯದವೀರ್ ಅವರಿಗೂ ಸಾಕಷ್ಟು ಜವಾಬ್ದಾರಿಗಳು ಇವೆ.
ಇನ್ನು ಮುಂದಾದರೂ ಸರ್ಕಾರ ಯದವೀರ್ ಅವರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕು. ಮೂವರು ಮಾಜಿ ಮುಖ್ಯಮಂತ್ರಿಗಳು ಸಂಸದರಾಗಿ ಆಯ್ಕೆಯಾಗಿರುವುದು ವಿಶೇಷ.
ಎಲ್ಲಾ ಸಂಸದರು ಒಗ್ಗಟ್ಟಿನಿಂದ ರಾಜ್ಯದ ಅಭಿವೃದ್ಧಿಗೆ ಸ್ಪಂದಿಸಬೇಕು ಎಂದರು.

ಯಾವುದೇ ಅಲೆಯಿಂದ ಯದವೀರ್ ಆಯ್ಕೆಯಾಗಿಲ್ಲ‌. ಜನರ ಅಲೆಯಿಂದ ಆಯ್ಕೆಯಾಗಿದ್ದಾರೆ. ರಾಜರ ಕೊಡುಗೆಗಳನ್ನು ನಾವು ಸ್ಮರಿಸಬೇಕು ಎಂದರು. ಇದೇ ವೇಳೆ 1 ರಿಂದ 9 ಕ್ಕೆ ಬಂದಿದ್ದೇವೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆ ವಿಚಾರ ಪ್ರಸ್ತಾಪಿಸಿದ ವಿಶ್ವನಾಥ್, 28ಕ್ಕೆ 28 ಗೆಲ್ತೀವಿ ಎನ್ನುತ್ತಿದ್ದರು, ಯಾಕೆ ಗೆಲ್ಲಲಿಲ್ಲ? ಮೈಸೂರಿನಲ್ಲಿ ಕಾಂಗ್ರೆಸ್ ಸೋಲು ರಾಜ್ಯ ಸರ್ಕಾರದ ಮೇಲೆ ಜನರಿಗೆ ವಿಶ್ವಾಸವಿಲ್ಲ ಎಂಬುದರ ಧ್ಯೋತಕವಾಗಿದೆ. ಇನ್ನು ಮುಂದಾರೂ ಏಕವಚನ, ದುರಹಂಕಾರ, ದ್ವೇಷದಿಂದ ಮಾತನಾಡುವುದನ್ನು ಬಿಡಬೇಕು ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು.

ಸಮೀಕ್ಷೆ ಉಲ್ಟಾಪಲ್ಟಾ..ಹೊರಬಿತ್ತು ಅಚ್ಚರಿ ರಿಸಲ್ಟ್! ನಿತೀಶ್ ಕುಮಾರ್, ನಾಯ್ಡುಗೆ INDIA ಮೈತ್ರಿ ಗಾಳ!

ಸಂಸತ್ತಿಗೆ ಆಯ್ಕೆಯಾಗಿರುವ ರಾಜ್ಯದ  28 ಜನರಿಗೂ ಅಭಿನಂದನೆ ಸಲ್ಲಿಸುತ್ತೇನೆ. 28 ಜನ ಸಂಸದರೂ ಕೂಡ ಪಕ್ಷಾತೀತವಾಗಿ ಕೆಲಸ ಮಾಡಬೇಕು. ಕಳೆದ ಬಾರಿ ಆಯ್ಕೆಯಾದ ಸಂಸದರು ರಾಜ್ಯದ ನೆಲ, ಜಲ, ನಾಡಿನ ಸಮಸ್ಯೆಗಳ ಕುರಿತು ಪ್ರಶ್ನೆಯನ್ನೇ ಮಾಡಲಿಲ್ಲ. ಈಗ ಆಯ್ಕೆಯಾಗಿರುವ ಸಂಸದರು ಆ ರೀತಿಯಾಗಬಾರದು. ಈ ಬಾರಿ ಮೂವರು ಮಾಜಿ ಸಿಎಂ ಗಳು ಸಂಸತ್ತಿಗೆ ಆಯ್ಕೆಯಾಗಿದ್ದಾರೆ. ರಾಜ್ಯದ ಸಮಸ್ಯೆಗಳನ್ನು ಬಗಹರಿಸುವ ಕೆಲಸವನ್ನು ನೀವು ಮಾಡಬೇಕು. ನಿಮಗೆ ಮುಖ್ಯಮಂತ್ರಿಗಳಾಗಿ ಸಾಕಷ್ಟು ಅನುಭವವಿದೆ. ನಮ್ಮ‌ ಅವಧಿಯಲ್ಲಿ ಕರ್ನಾಟಕದ ಯಾವುದೇ ಸಮಸ್ಯೆಗಳಿಗೆ ಒಟ್ಟಾಗಿ ಹೋರಾಟ ಮಾಡುತ್ತಿದ್ದೆವು. ಇತ್ತೀಚಿನ ದಿನಗಳಲ್ಲಿ ಒಗ್ಗಟ್ಟಿನ‌ ಕೊರತೆಯಿದೆ. ನಾಡಿನ ಸಮಸ್ಯೆಗಳು ಬಂದಾಗ ಈ ಮೂವರು ನೇತೃತ್ವ ವಹಿಸಿ ಸಂಸತ್ತಿನಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡಬೇಕು ಹೆಚ್ ಡಿ ಕುಮಾರಸ್ವಾಮಿ, ಬಸವವಾಜ ಬೊಮ್ಮಾಯಿಗೆ ಮತ್ತು ಜಗದೀಶ್ ಶೆಟ್ಟರ್ ಗೆ ಕಿವಿಮಾತು ಹೇಳಿದರು.

click me!