ಲೋಕಸಭಾ ಸ್ಥಾನ ಹೆಚ್ಚಳ, ಮಹಿಳಾ ಮೀಸಲಿಗೆ 3 ದಿನ ಅಧಿವೇಶನ

Kannadaprabha News   | Kannada Prabha
Published : Apr 03, 2026, 06:09 AM IST
LOKSABHA

ಸಾರಾಂಶ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವ ಕಾನೂನು ಆದಷ್ಟು ಶೀಘ್ರ ಜಾರಿಗೊಳಿಸಲುದ್ದೇಶಿಸಿರುವ ಕೇಂದ್ರ ಸರ್ಕಾರವು ಏ.16ರಿಂದ ಮೂರು ದಿನಗಳ ಕಾಲ ನಡೆಸಲುದ್ದೇಶಿಸಿದೆ

 ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವ ಕಾನೂನು ಆದಷ್ಟು ಶೀಘ್ರ ಜಾರಿಗೊಳಿಸಲುದ್ದೇಶಿಸಿರುವ ಕೇಂದ್ರ ಸರ್ಕಾರವು ಏ.16ರಿಂದ ಮೂರು ದಿನಗಳ ಕಾಲ ನಡೆಸಲುದ್ದೇಶಿಸಿರುವ ಬಜೆಟ್‌ ಅಧಿವೇಶನದಲ್ಲಿ ಎರಡು ಮಹತ್ವದ ತಿದ್ದುಪಡಿ ವಿಧೇಯಗಳಿಗೆ ಅಂಗೀಕಾರ ಪಡೆಯಲುದ್ದೇಶಿಸಿದೆ.

ಮಹಿಳಾ ಮೀಸಲಾತಿ ಕಾಯ್ದೆ(ತಿದ್ದುಪಡಿ) ಹಾಗೂ ಲೋಕಸಭಾ ಕ್ಷೇತ್ರಗಳ ಸಂಖ್ಯೆಯನ್ನು 543ರಿಂದ 816ಕ್ಕೇರಿಸುವ ಕ್ಷೇತ್ರ ಮರುವಿಂಗಡಣೆ ವಿಧೇಯಕಗಳನ್ನು ಮಂಡಿಸಿ ಅನುಮೋದನೆ ಪಡೆಯುವ ಉದ್ದೇಶ ಸರ್ಕಾರಕ್ಕಿದೆ. ಇವೆರಡೂ ಸಂವಿಧಾನ ತಿದ್ದುಪಡಿ ವಿಧೇಯಕ ಆಗಿರುವ ಕಾರಣ ಸಂಸತ್ತಿನಲ್ಲಿ ಹೆಚ್ಚಿನ ಬಹುಮತದ ಅಗತ್ಯವಿದೆ. ಈ ನಿಟ್ಟಿನಲ್ಲಿ ಈ ವಿಧೇಯಕಗಳ ವಿಚಾರವಾಗಿ ಕೇಂದ್ರ ಸರ್ಕಾರವು ಪ್ರತಿಪಕ್ಷಗಳ ವಿಶ್ವಾಸಪಡೆಯುವ ಕಾರ್ಯ ಆರಂಭಿಸಿದೆ.

2023ರಲ್ಲೇ ಅಂಗೀಕಾರ:

ಸಂಸತ್ತು ಮತ್ತು ರಾಜ್ಯ ವಿಧಾಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವ ವಿಧೇಯಕಕ್ಕೆ 2023ರ ಸೆಪ್ಟೆಂಬರ್‌ನಲ್ಲೇ ಸಂಸತ್ತಿನ ಅನುಮೋದನೆ ಸಿಕ್ಕಿದೆ. ಲೋಕಸಭಾ ಕ್ಷೇತ್ರ ಪುನರ್‌ ವಿಂಗಡಣೆ ಬಳಿಕ 2027ರ ಜನಗಣತಿ ಆಧಾರದ ಮೇಲೆಯೇ ಈ ಕಾನೂನು ಜಾರಿಗೆ ತರಲುದ್ದೇಶಿಸಲಾಗಿತ್ತು. ಆದರೆ, 2027ರ ಜನಗಣತಿ ಆಧಾರದ ಮೇಲೆ ಮೀಸಲಾತಿ ಜಾರಿಗೊಳಿಸಿದರೆ 2029ರ ಲೋಕಸಭಾ ಚುನಾವಣೆ ವೇಳೆಗೆ ಮಹಿಳಾ ಮೀಸಲಾತಿ ಅನುಷ್ಠಾನಕ್ಕೆ ಬರುವುದು ಕಷ್ಟ. ಈ ಹಿನ್ನೆಲೆಯಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲೇ ಮಹಿಳಾ ಮೀಸಲಾತಿ ಅನುಷ್ಠಾನಕ್ಕೆ ತರುವ ಉದ್ದೇಶದಿಂದ ಕೇಂದ್ರ ಸರ್ಕಾರವು ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದೆ. ಅದರಂತೆ 2027ರ ಜನಗಣತಿ ಬದಲು 2011ರ ಜನಗಣತಿ ಆಧರಿಸಿಯೇ ಮೀಸಲಾತಿ ಜಾರಿಗೆ ಮುಂದಾಗಿದೆ. ಇದರ ಜತೆಗೆ ಲೋಕಸಭಾ ಕ್ಷೇತ್ರಗಳ ವಿಂಗಡಣೆ ತಿದ್ದುಪಡಿ ವಿಧೇಯಕಕ್ಕೂ ಒಪ್ಪಿಗೆ ಪಡೆದು ಮಹಿಳಾ ಮೀಸಲಾತಿ ಜಾರಿಗಿರುವ ಅಡ್ಡಿ-ಆತಂಕ ನಿವಾರಣೆ ಉದ್ದೇಶ ಹೊಂದಿದೆ.

ಲೋಕಸಭಾ ಕ್ಷೇತ್ರಗಳ ಸಂಖ್ಯೆ ಶೇ.50ರಷ್ಟು ಹೆಚ್ಚಳ:

ಕ್ಷೇತ್ರ ಮರುವಿಂಗಡಣೆಯ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡರೆ ದೇಶದಲ್ಲಿ ಲೋಕಸಭಾ ಕ್ಷೇತ್ರಗಳ ಸಂಖ್ಯೆ ಶೇ.50ರಷ್ಟು ಹೆಚ್ಚಾಗಲಿದೆ, ಅಂದರೆ ಲೋಕಸಭಾ ಕ್ಷೇತ್ರಗಳ ಸಂಖ್ಯೆ 816ಕ್ಕೇರಲಿದೆ. ಇವುಗಳಲ್ಲಿ 273 ಸ್ಥಾನಗಳನ್ನು ಮಹಿಳೆಯರಿಗೇ ಮೀಸಲಿಡಲು ನಿರ್ಧರಿಸಲಾಗಿದೆ. ಕರ್ನಾಟಕದ ಮಟ್ಟಿಗೆ ನೋಡಿದರೆ ಒಟ್ಟು ಲೋಕಸಭಾ ಕ್ಷೇತ್ರಗಳ ಸಂಖ್ಯೆ 28 ಇದ್ದು, ಕ್ಷೇತ್ರ ಮರುವಿಂಗಡಣೆ ಬಳಿಕ ಈ ಸಂಖ್ಯೆ 42 ಆಗಲಿದೆ. ಇದರಲ್ಲಿ 14 ಸ್ಥಾನಗಳು ಮಹಿಳೆಯರಿಗೆ ಮೀಸಲು ಆಗಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕಾಂಗ್ರೆಸ್‌ನಿಂದ ಕೇರಳದಲ್ಲೂ ಗ್ಯಾರಂಟಿ - ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಭರವಸೆ
ಗೋಮಾಂಸ ಮಾರಾಟ ಚಂದಾದಿಂದಲೇ ಕಚೇರಿ ಕಟ್ಟಿದ ಬಿಜೆಪಿ: ಸಚಿವ ಸಂತೋಷ್ ಲಾಡ್ ಆರೋಪ