ಹಾದಿಯಲ್ಲಿ ಹೋಗುವವರಿಗೆ ಟಿಕೆಟ್ ನೀಡುವುದಕ್ಕೆ ಆಗುತ್ತಾ? ಚುನಾವಣೆಗೆ ಸ್ಪರ್ಧಿಸಲು ಯಾರೂ ಆಸಕ್ತಿ ತೋರಲಿಲ್ಲ. ಈ ಕಾರಣಕ್ಕಾಗಿ ಹೈಕಮಾಂಡ್ ಹಾಗೂ ಸ್ಥಳೀಯ ಶಾಸಕರ ಜೊತೆಗೆ ಚರ್ಚಿಸಿ ಪ್ರಿಯಾಂಕಾ ಜಾರಕಿಹೊಳಿಗೆ ಟಿಕೆಟ್ ನೀಡಲಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಚಿಕ್ಕೋಡಿ (ಏ.18): ಹಾದಿಯಲ್ಲಿ ಹೋಗುವವರಿಗೆ ಟಿಕೆಟ್ ನೀಡುವುದಕ್ಕೆ ಆಗುತ್ತಾ? ಚುನಾವಣೆಗೆ ಸ್ಪರ್ಧಿಸಲು ಯಾರೂ ಆಸಕ್ತಿ ತೋರಲಿಲ್ಲ. ಈ ಕಾರಣಕ್ಕಾಗಿ ಹೈಕಮಾಂಡ್ ಹಾಗೂ ಸ್ಥಳೀಯ ಶಾಸಕರ ಜೊತೆಗೆ ಚರ್ಚಿಸಿ ಪ್ರಿಯಾಂಕಾ ಜಾರಕಿಹೊಳಿಗೆ ಟಿಕೆಟ್ ನೀಡಲಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕಾಂಗ್ರೆಸ್‌ನಲ್ಲಿ ಕುಟುಂಬಸ್ಥರಿಗೆ ಮಾತ್ರ ಟಿಕೆಟ್ ನೀಡಲಾಗುತ್ತದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಕ್ಕೆ ಸಚಿವ ಸತೀಶ ಜಾರಕಿಹೊಳಿ ಹೀಗೆ ಪ್ರತಿಕ್ರಿಯಿಸಿದರು.
ನನ್ನನ್ನು ಸೋಲಿಸುವುದಕ್ಕೆ ಸತೀಶ ಜಾರಕಿಹೊಳಿ 15 ಜನರನ್ನು ಕಳುಹಿಸಿದ್ದರು ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಇದು ರಾಜಕೀಯ ಪ್ರೇರಿತ ಆರೋಪ ಅಷ್ಟೆ. ಚುನಾವಣೆ ಎಂದರೆ ಒಬ್ಬರ ಮೇಲೆ ಒಬ್ಬರೂ ಆರೋಪ ಮಾಡುವುದು ಸಹಜ ಎಂದರು. ಸ್ಮಶಾನದಲ್ಲಿ ಕಾರು ಪೂಜೆ ಮಾಡುತ್ತಿದ್ದ ಸತೀಶ ಈಗ ದೇವಸ್ಥಾನಗಳಿಗೆ ಹೋಗುತ್ತಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ, ಒಳ್ಳೆಯ ವಿಚಾರ ಹೇಳಿದ್ದಾರೆ. ಯತ್ನಾಳರೇ ಅದನ್ನು ಮುಂದುವರಿಸಲಿ ಎಂದು ಟಾಂಗ್ ನೀಡಿದರು. ಗುರುವಾರ 12 ಗಂಟೆಗೆ ಸರಳವಾಗಿ ನಾಮಪತ್ರ ಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
undefined
ಲೋಕಸಭಾ ಚುನಾವಣೆಯಲ್ಲಿ ಎಚ್‌ಡಿಕೆಗೆ 3 ಲಕ್ಷ ಅಂತರದ ಜಯ: ವಿಜಯೇಂದ್ರ
ಗ್ಯಾರಂಟಿಯಿಂದ ಕಾಂಗ್ರೆಸ್ ಗೆಲುವು ಗ್ಯಾರಂಟಿ: ಕರ್ನಾಟಕದಲ್ಲಿ ಎರಡು ಹಂತದಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಕಳೆದ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿದ ಗ್ಯಾರಂಟಿಗಳ ಗ್ಯಾರಂಟಿ ಅನುಷ್ಠಾನದಿಂದ ಲೋಕಸಭಾ ಚುನಾವಣೆಯಲ್ಲೂ ಅತಿಹೆಚ್ಚು ಸ್ಥಾನಗಳಿಸುವುದು ನಮಗೆ ಗ್ಯಾರಂಟಿಯಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ನಗರದ ಗುರುರಾಘವೇಂದ್ರ ಕಲ್ಯಾಣಮಂಟಪದಲ್ಲಿ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಲೋಕಸಭಾ ಚುನಾವಣೆಯ ಪ್ರಚಾರ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳ ಫಲವಾಗಿ ಲಕ್ಷಾಂತರ ಬಡ ಕುಟುಂಬಗಳು ನೆಮ್ಮದಿಯಿಂದ ನೆಲೆಸಿದ್ದು, ರಾಷ್ಟ್ರದ ಇತಿಹಾಸದಲ್ಲೇ ಮಹತ್ವದ ಐದು ಗ್ಯಾರಂಟಿಗಳನ್ನು ಯಾರೂ ಘೋಷಣೆ ಮಾಡಿಲ್ಲ. ಗ್ಯಾರಂಟಿ ಯೋಜನೆಗಳ ಘೋಷಣೆ ಮತ್ತು ಅನುಷ್ಠಾನ ಎರಡೂ ಪ್ರಮುಖವಾಗಿದೆ. ಇದು ಕಾಂಗ್ರೆಸ್ ಪಕ್ಷದ ವಿಜಯಕ್ಕೆ ನಾಂದಿಯಾಗಿದೆ.
ಡಿ.ಕೆ.ಸುರೇಶ್‌ಗೆ ಮತ ಹಾಕದಿದ್ರೆ ನೀರು ಕೊಡಲ್ಲ: ಡಿ.ಕೆ.ಶಿವಕುಮಾರ್
ಲೋಕಸಭಾ ಚುನಾವಣೆಯಲ್ಲಿ ಯಾವುದೇ ಕ್ಷೇತ್ರದಲ್ಲೂ ಕಾಂಗ್ರೆಸ್‌ಗೆ ಹಿನ್ನೆಡೆಯಾಗಲು ಸಾಧ್ಯವಿಲ್ಲದ ವಾತಾವರಣ ಉಂಟಾಗಿದೆ. ಪಕ್ಷದ ಮುಖಂಡರು, ಕಾರ್ಯಕರ್ತರು ಗ್ಯಾರಂಟಿ ಯೋಜನೆಯಿಂದ ಆಗಿರುವ ಪ್ರಯೋಜನದ ಬಗ್ಗೆ ಮತದಾರರನ್ನು ಜಾಗೃತಿಗೊಳಿಸಬೇಕು. ಬಿಜೆಪಿಯ ಸುಳ್ಳು ಭರವಸೆಗಳ ಬಗ್ಗೆ ಮತದಾರರಿಗೆ ಸ್ಪಷ್ಟನೆ ನೀಡಬೇಕು. ಕಾಂಗ್ರೆಸ್ ಪಕ್ಷದ ಆಡಳಿತದಿಂದ ಮಾತ್ರ ಬಡವರ ಹಿತರಕ್ಷಣೆ ಬಗ್ಗೆ ಜನರಲ್ಲಿ ವಿಶ್ವಾಸ ಮೂಡಿಸಬೇಕು. ಆಗಾದಲ್ಲಿ ಮಾತ್ರ ಈ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳಿಸಲು ಸಾಧ್ಯವಾಗುತ್ತದೆ ಎಂದರು.