
ಮೈಸೂರು[ಫೆ.18] ‘ನಾವು ಬೆಗ್ಗರ್ಸ್ ಅಲ್ಲ, ನಮಗೆ ಏಳೋ ಐದೋ ಮೂರೋ ಸೀಟು ಬಿಟ್ಟು ಕೊಡ್ತಾರೋ ಗೊತ್ತಿಲ್ಲ. ವೀ ಆರ್ ನಾಟ್ ಬೆಗ್ಗರ್ಸ್’ ಇದು ಸಿಎಂ ಕುಮಾರಸ್ವಾಮಿ ಹೇಳಿದ ಆಕ್ರೋಶದ ಮಾತುಗಳು.
ರಾಷ್ಟ್ರಕ್ಕೆ ಒಂದು ಸಂದೇಶ ರವಾನೆ ಆಗಬೇಕಾದರೆ ಎಲ್ಲರೂ ಕೂತು ಸೀಟು ಹಂಚಿಕೆ ಬಗ್ಗೆ ಚರ್ಚೆ ಮಾಡಬೇಕು. ಆಡಳಿತ ಕಡೆಗೆ ನಾನು ಗಮನ ಹರಿಸಿದ್ದೇನೆ. ನಮ್ಮ ರಾಷ್ಟ್ರಧ್ಯಕ್ಷರು ಕಾಂಗ್ರೆಸ್ ಜೊತೆ ಕೂತು ಮಾತಾಡಿ ಸೀಟು ಹಂಚಿಕೆ ಮಾಡಿಕೊಳ್ತಾರೆ. ನಾನು ಈ ಸ್ಥಾನ ಹಂಚಿಕೆ ಬಗ್ಗೆ ಯೋಚನೆ ಮಾಡಿಲ್ಲ ಎಂದು ಹೇಳಿದ್ದಾರೆ.
ಹಾಸನದಲ್ಲಿ ‘ಮಂಜು’ ಕವಿದ ವಾತಾವರಣ ಮರೆ, ‘ಪ್ರಜ್ವಲಿ’ಸಲು ‘ಕುಮಾರ’ ಕೃಪೆ
ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್‍ಗೆ 7 ಸ್ಥಾನಗಳನ್ನು ಬಿಟ್ಟುಕೊಡಲು ಕಾಂಗ್ರೆಸ್ ನಿರ್ಧರಿಸಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, 5,3,7 ಕ್ಷೇತ್ರಗಳು ಎಂಬುದು ಪ್ರಶ್ನೆಯಲ್ಲ. ವಿ ಆರ್ ನಾಟ್ ಎ ಬೆಗ್ಗರ್ ಎಂದು ಹೇಳುವ ಮೂಲಕ ಪರೋಕ್ಷವಾಗಿ ಕಾಂಗ್ರೆಸ್‍ಗೆ ತಿರುಗೇಟು ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.