ಬಿಜೆಪಿಯಿಂದ ಸುಧಾಕರ್‌ಗೆ ಟಿಕೆಟ್ ಕೊಟ್ಟರೆ, ಕಾಂಗ್ರೆಸ್ ಪಕ್ಷದಿಂದ ನಾನು ಸ್ಪರ್ಧಿಸಲು ರೆಡಿ: ಶಾಸಕ ಪ್ರದೀಪ್ ಈಶ್ವರ್!

By Ravi Janekal  |  First Published Jan 11, 2024, 1:30 PM IST

ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ನಾನು ರೆಡಿ ಇದ್ದೇನೆ. ಹೈಕಮಾಂಡ್ ಸೂಚಿಸಿದರೆ ಈಗಿನಿಂದಲೇ ಸಿದ್ಧತೆ ನಡೆಸುವೆ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ತಿಳಿಸಿದರು.


ಚಿಕ್ಕಬಳ್ಳಾಪುರ (ಜ.11): ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ನಾನು ರೆಡಿ ಇದ್ದೇನೆ. ಹೈಕಮಾಂಡ್ ಸೂಚಿಸಿದರೆ ಈಗಿನಿಂದಲೇ ಸಿದ್ಧತೆ ನಡೆಸುವೆ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ತಿಳಿಸಿದರು.

ಇಂದು ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದಿಂದ ಕೆ ಸುಧಾಕರ್‌ಗೆ ಟಿಕೆಟ್ ಕೊಟ್ಟರೆ, ಕಾಂಗ್ರೆಸ್ ಪಕ್ಷದಿಂದ ನನಗೆ ಟಿಕೆಟ್ ಕೊಡಲಿ ಸ್ಪರ್ಧೆ ಮಾಡುತ್ತೇನೆ. ಕಳೆದ ವಿಧಾನಸಭಾ ಚುನಾವಣೆಯ ಗೆಲುವಿನಂತೆ ಲೋಕಸಭೆ ಚುನಾವಣೆಯಲ್ಲೂ ಗೆದ್ದು ಬರುತ್ತೇನೆ ಎನ್ನುವ ಮೂಲಕ ಮತ್ತೊಮ್ಮೆ ಮಾಜಿ ಸಚಿವ ಸುಧಾಕರ್ ವಿರುದ್ಧ ಹರಿಹಾಯ್ದರು.

Tap to resize

Latest Videos

ಆದರೆ ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ವೀರಪ್ಪ ಮೊಯ್ಲಿ, ರಕ್ಷಾ ರಾಮಯ್ಯ, ಬಾಲಾಜಿ ಹಾಗೂ ಎಸ್ ರವಿ ಹೆಸರು ಕೇಳಿ ಬರುತ್ತಿದೆ. ಅದ್ಯಾಗೂ ನಮ್ಮ ಹೈಕಮಾಂಡ್ ನನಗೆ ಟಿಕೆಟ್ ಕೊಟ್ಟರೆ ಸ್ಪರ್ಧೆ ಮಾಡುತ್ತೇನೆ ಎಂದು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಸೇರ್ತಾರಾ ಗಾಲಿ ಜನಾರ್ಧನ ರೆಡ್ಡಿ? ರಾಯಚೂರು ಪ್ರಭಾವಿ ನಾಯಕ ಭೇಟಿ, ಗೌಪ್ಯಸಭೆ!

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಬಿಜೆಪಿ ಪಕ್ಷದ ಪ್ರಭಾವಿ ನಾಯಕರಾಗಿದ್ದ ಡಾ ಕೆ ಸುಧಾಕರ್ ವಿರುದ್ಧ ಸ್ಪರ್ಧಿಸಿದ್ದ ಪ್ರದೀಪ್ ಈಶ್ವರ್‌ ಬಗ್ಗೆ ಮೊದಲಿಗೆ ಲಘುವಾಗಿ ಕಂಡಿದ್ದ ಬಿಜೆಪಿ ನಾಯಕರು. ಚುನಾವಣೆ ಪ್ರಚಾರದ ವೇಳೆ ಪ್ರದೀಪ್ ಈಶ್ವರ್ ಗೆಲ್ಲೋದಕ್ಕೆ ಸಾಧ್ಯವೇ ಇಲ್ಲ ಎಂದು ಹೇಳಲಾಗಿತ್ತು. ಆದರೆ ಚುನಾವಣೆ ಫಲಿತಾಂಶ ದಿನ ಡಾ.ಕೆ ಸುಧಾಕರ್ ವಿರುದ್ಧ ರೋಚಕ ಗೆಲುವು ಸಾಧಿಸುವ ಮೂಲಕ ಬಿಜೆಪಿ ಪಕ್ಷಕ್ಕೆ ಶಾಕ್ ನೀಡಿದ್ದರು. ಇದೀಗ ಲೋಕಸಭಾ ಚುನಾವಣೆಯಲ್ಲೂ ಇಬ್ಬರು ನಾಯಕರು ಮತ್ತೆ ಮುಖಾಮುಖಿಯಾಗ್ತಾರಾ? ಭಾರೀ ಕುತೂಹಲ ಮೂಡಿಸಿರುವುದಂತ ದಿಟ

ಶಾಸಕ ಜನಾರ್ದನರೆಡ್ಡಿ ಕುಟೀರಕ್ಕೆ ಬೆಂಕಿ ಇಟ್ಟವರಾರು ? ಜನಪ್ರಿಯತೆ ಸಹಿಸದೆ ಬಿಜೆಪಿ ಕಾರ್ಯಕರ್ತರೇ ಹಚ್ಚಿದ್ರಾ ಕಿಡಿ?!

click me!