ಸಿದ್ದು ಭೇಟಿ ಮಾಡಿದ ಸುಮಲತಾ, ಮಂಡ್ಯದ ‘ಬೆಲ್ಲ’ ಯಾರಿಗೆ?

Published : Feb 20, 2019, 08:53 PM IST
ಸಿದ್ದು ಭೇಟಿ ಮಾಡಿದ ಸುಮಲತಾ, ಮಂಡ್ಯದ ‘ಬೆಲ್ಲ’ ಯಾರಿಗೆ?

ಸಾರಾಂಶ

ಮಹತ್ವದ ರಾಜಕಾರಣದ ಬೆಳವಣಿಗೆಯಲ್ಲಿ ಸುಮಲತಾ ಅಂಬರೀಶ್ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಹಾಗಾದರೆ ಭೇಟಿಯಲ್ಲಿ ಏನೇನಾಯ್ತು?

ಬೆಂಗಳೂರು[ಫೆ.20]  ಮಂಡ್ಯ ಲೋಕಸಭಾ ಕ್ಷೇತ್ರದಿಂದ ದೋಸ್ತಿ ಅಭ್ಯರ್ಥಿಗಳ ವಿಚಾರ ಕಗ್ಗಂಟಾಗಿರುವ ಹೊತ್ತಿನಲ್ಲಿ ಸುಮಲತಾ ಅಂಬರೀಶ್ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನ ಕಾವೇರಿ ನಿವಾಸಕ್ಕೆ ಸುಮಲತಾ ಬುಧವಾರ ಸಂಜೆ ಭೇಟಿ ನೀಡಿದ್ದರು.

ಭೇಟಿ ನಂತರ ಮಾತನಾಡಿದ ಸುಮಲತಾ, ಮಂಡ್ಯ ಜನರ ಆಸೆಯಂತೆ ಹಿರಿಯ ನಾಯಕರ ಜೊತೆ ಚರ್ಚಿಸಿದ್ದೇನೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ಅಭಿಪ್ರಾಯ ಮುಖ್ಯ ಹೀಗಾಗಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದೇನೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ JDS ಜೆಡಿಎಸ್ ಸ್ಪರ್ಧೆ ವಿಚಾರ. JDS ಸ್ಪರ್ಧಿಸಿದ್ರೆ ನನ್ನ ಮುಂದಿನ ನಡೆ ಜನರ ಆಸೆಯಂತೆ ಇರುತ್ತೆ. ಜನರನ್ನೇ ನಾನು ಕೇಳ್ತೇನೆ ಎಂದರು.

ಮಂಡ್ಯದ ಜನ ಏನು ತೀರ್ಮಾನ ಮಾಡ್ತಾರೆ ಅದರಂತೆ ನಡೆಯುತ್ತೇನೆ. ನಾನು ಸ್ಪರ್ಧೆ ಮಾಡುವ ವಿಚಾರದಲ್ಲಿ ಮಂಡ್ಯದ ಜನರ ತೀರ್ಮಾನವೇ ಅಂತಿಮ ಎಂದು ಸುಮಲತಾ ಹೇಳಿದರು.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ  ಸದ್ಯ ಸಂಸದರಾಗಿ ಜೆಡಿಎಸ್‌ನ ಶಿವರಾಮೇಗೌಡ ಇದ್ದಾರೆ. ಒಂದು ಕಡೆ ಜೆಡಿಎಸ್‌ನಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುತ್ತಾರೆ ಎಂಬ ಮಾತು ಕೇಳಿ ಬರುತ್ತಿದೆ. ದೋಸ್ತಿಗಳ ನಡುವೆ ಸೀಟು ಹಂಚಿಕೆ ಆಗಿಲ್ಲವಾದರೂ ಮಂಡ್ಯ ಕ್ಷೇತ್ರ ಮಾತ್ರ ಕಗ್ಗಂಟಾಗಿಯೇ ಇದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
ಅನುದಾನ ಬೇಕಾದ್ರೆ ನಾಟಿ ಕೋಳಿ ಅಡುಗೆ ಮಾಡಬೇಕಾ? ರಾಜ್ಯ ಸರ್ಕಾರಕ್ಕೆ ಸಿ.ಟಿ.ರವಿ ಪ್ರಶ್ನೆ