
ಬೆಂಗಳೂರು (ಮಾ.06): ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರು ಜೆಡಿಎಸ್‌ಗೆ ಎಷ್ಟು ಸ್ಥಾನ ನೀಡುತ್ತಾರೊ ಅಷ್ಟಕ್ಕೆ ಒಪ್ಪಿಕೊಳ್ಳುತ್ತೇವೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಡುವಿನ ಸೀಟು ಹಂಚಿಕೆ ಕುರಿತು ಇನ್ನೊಂದು ವಾರದಲ್ಲಿ ನಿರ್ಧಾರವಾಗುವ ಸಾಧ್ಯತೆ ಇದೆ.
ಎಷ್ಟು ಸೀಟು ಲಭ್ಯವಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ. ಎನ್‌ಡಿಎ ಅಭ್ಯರ್ಥಿಗಳ ಪರ ಕೆಲಸ ಮಾಡುತ್ತೇವೆ ಎಂದರು. ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಅವರು ಅಮಿತ್ ಶಾ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಜತೆ ಸೀಟು ಹಂಚಿಕೆ ವಿಚಾರವಾಗಿ ಚರ್ಚೆ ನಡೆಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ 400 ಸ್ಥಾನ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದು, ಅವರೊಂದಿಗೆ ನಾವು ಕೈ ಜೋಡಿಸಿದ್ದೇವೆ ಎಂದು ತಿಳಿಸಿದರು.
ದೇಶದ್ರೋಹಿಗಳ ಪರ ಸಚಿವರೇ ನಿಂತಿದ್ದು ದುರ್ದೈವ: ಮಾಜಿ ಸಿಎಂ ಬೊಮ್ಮಾಯಿ
ಈ ಮುದುಕಪ್ಪನಿಗೆ ಸ್ವಾಭಿಮಾನ ಇದೆ: ಮಂಡ್ಯದ ನಾಯಕರೊಬ್ಬರು ತುಂಬಾ ಎತ್ತರಕ್ಕೆ ಬೆಳೆದಿದ್ದಾರೆ. ಆ ಮುದುಕಪ್ಪನನ್ನ ಕಟ್ಟಿಕೊಂಡು ಏನೇನೋ ಮಾಡೋಕೆ ಹೋಗುತ್ತಿದ್ದಾರೆ ಎಂದಿದ್ದಾರೆ. ಆ ಮುದುಕಪ್ಪನಿಗೆ ಸ್ವಾಭಿಮಾನ ಇದೆ. ಈ ಪಕ್ಷ ಉಳಿಸೋದು ಕಾವೇರಿ ನೀರಿಗಾಗಿ, ಅವರಿಗೆ ಮಾತಾಡುವ ಯೋಗ್ಯತೆ ಇಲ್ಲ. ಹೇಮಾವತಿ , ಹಾರಂಗಿ ಕಟ್ಟಿರುವವನು ನಿಮ್ಮ ಮುಂದೆ ಇದ್ದೇನೆ ಎಂದು ಪರೋಕ್ಷವಾಗಿ ಸಚಿವ ಚಲುವರಾಯಸ್ವಾಮಿ ವಿರುದ್ಧ ದೇವೇಗೌಡರು ಆಕ್ರೋಶ ವ್ಯಕ್ತಪಡಿಸಿದರು.
ಎಂಪಿ ಚುನಾವಣೆಗೆ ಎಚ್ಡಿಕೆ ಸ್ಪರ್ಧಿಸಲಿ: ಮುಂದೆ ನಡೆಯಲಿರುವ ಲೋಕಾಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸ್ಪರ್ದೆ ಮಾಡಿದರೆ ಜೆಡಿಎಸ್ ಕಾರ್ಯಕರ್ತರಿಗೆ ಸ್ಫೂರ್ತಿ ಜೊತೆಗೆ ಉಳಿದ ಅಭ್ಯರ್ಥಿಗಳಿಗೂ ಶಕ್ತಿ ನೀಡಿದಂತಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅಭಿಪ್ರಾಯಪಟ್ಟರು. ನಗರದ ರೈಲ್ವೆ ನಿಲ್ದಾಣದಲ್ಲಿ ಸೋಮವಾರ ಮಾಧ್ಯಮದೊಂದಿಗೆ ಮಾತನಾಡಿ, ಕುಮಾರಸ್ವಾಮಿ ಸ್ಪರ್ಧೆ ಮಾಡಿದರೆ ಒಳ್ಳೆಯದು. ಅದರಿಂದ ಇಡೀ ರಾಜ್ಯದಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು, ಕಾರ್ಯಕರ್ತರನ್ನು ಹುರಿದುಂಬಿಸಿದಂತಾಗುತ್ತದೆ.
ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ನಿಜ: ಸಚಿವ ಪರಮೇಶ್ವರ್
ಕಾರ್ಯಕರ್ತರಿಗೆ ಹೊಸ ಪರಿವರ್ತನಾ ಶಕ್ತಿ ಕೊಟ್ಟಂತೆ ಆಗುತ್ತದೆ ಎಂದು ಹೇಳಿದರು. ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಮಂಡ್ಯ, ಹಾಸನ ಕ್ಷೇತ್ರಗಳು ಜೆಡಿಎಸ್‌ಗೆ ದೊರೆಯುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನು ತಾತ ದೇವೇಗೌಡ ನಿರ್ಧಾರ ಮಾಡಿದ್ದಾರೆ ಎಂದರು. ಲೋಕಸಭೆಗೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ವಿಚಾರ ಮಾಹಿತಿಯಿಲ್ಲ, ಜಿಲ್ಲೆ ಬಿಟ್ಟು ಹೊರಗಡೆ ಜಿಲ್ಲೆ ಬಗ್ಗೆ ಮಾಹಿತಿಯಿಲ್ಲ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.