
ಬೆಂಗಳೂರು(ಸೆ.29): ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಜನ ಪಕ್ಷಪಾತ ಮಾಡಿದ್ದಾರೆ. ಕೋಟ್ಯಂತರ ರು. ಮೌಲ್ಯದ ಜಮೀನು ಕಬಳಿಸಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಚುನಾವಣಾ ಬಾಂಡ್ ಅಡಿ ಎಲ್ಲಾ ಪಕ್ಷಗಳು ದೇಣಿಗೆ ಪಡೆದಿವೆ. ಆದರೆ, ಸಿದ್ದರಾಮಯ್ಯ ಅವರದು ವೈಯಕ್ತಿಕ ಹಗರಣ ಎಂದರು.
ದಾಖಲೆ ಬಿಡುಗಡೆ ಮಾಡದಂತೆ ಕುಮಾರಸ್ವಾಮಿ ತಡೆದವರು ಯಾರು?
ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಜನ ಪಕ್ಷಪಾತ ಮಾಡಿದ್ದಾರೆ. ಕೋಟ್ಯಂತರ ರು. ಮೌಲ್ಯದ ಜಮೀನು ಕಬಳಿಸಿದ್ದಾರೆ. ನಿರ್ಮಲಾ ಸೀತಾರಾಮನ್ ತಮ್ಮ ಸ್ವಂತಕ್ಕೆ ಏನೂ ಮಾಡಿಲ್ಲ. ಆ ಹಣ ಪಕ್ಷಕ್ಕೆ ಬಂದಿದೆ. ಕಾಂಗ್ರೆಸ್ ಪಕ್ಷಕ್ಕೂ 1,200 ಕೋಟಿ ರು. ಗೂ ಅಧಿಕ ಹಣ ಬಂದಿದೆ. ಆ ಹಣವನ್ನು ಮೊದಲು ವಾಪಾಸ್ ನೀಡಿ ಬಳಿಕ ಕೇಂದ್ರ ಸಚಿವರ ರಾಜೀನಾಮೆ ಕೇಳಲಿ ಎಂದು ಸವಾಲು ಹಾಕಿದರು.
ಎಲ್ಲಾ ಪಕ್ಷಗಳು ದೇಣಿಗೆ ಸಂಗ್ರಹಿಸಿವೆ. ಹೀಗೆ ಹಣ ತೆಗೆದುಕೊಂಡವರ ಮೇಲೆ ಎಫ್ ಐಆರ್ ದಾಖಲಿಸುವುದಾದರೆ, ಎಲ್ಲರ ಮೇಲೂ ಎಫ್‌ಐಆರ್ ದಾಖಲಿಸಬೇಕಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಯಾರಿಂದಲೂ ಹೇಳಿಸಿ ದೂರು ದಾಖಲಿಸಿದ್ದಾರೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.