
ಚೆನ್ನೈ (ನ.17): ತಮಿಳುನಾಡು ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಮಹತ್ತರ ಬದಲಾವಣೆಯಾಗುತ್ತಿದೆ.
ತಮಿಳುನಾಡಿನಲ್ಲಿ ಹೊಸ ಪಕ್ಷ ಒಂದರ ಉದಯವಾಗುತ್ತಿದೆ. ಮಾಜಿ ಸಿಎಂ ಕರುಣಾನಿಧಿ ಪುತ್ರ ಹಾಗೂ ಕೇಂದ್ರದ ಮಾಜಿ ಸಚಿವ ಎಂಕೆ ಅಳಗಿರಿ ಹೊಸ ರಾಜಕೀಯ ಪಕ್ಷ ಸ್ಥಾಪಿಸಲು ನಿರ್ಧರಿಸಿದ್ದಾರೆ.
ಅವರ ಸಹೋದರ ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ದೂರವಾಗಿ ಹೊಸ ಪಕ್ಷ ಸ್ಥಾಪಿಸಲು ಮುಂದಾಗಿದ್ದಾರೆ.
ಬಿಜೆಪಿ ಶಾಸಕನ ನೇತೃತ್ವದಲ್ಲಿ ಸಂಭ್ರಮಾಚರಣೆ, ಮತ್ತೊಂದು ಬೇಡಿಕೆ ಇಟ್ಟ ಮರಾಠಿಗರು..!
ಬಿಜೆಪಿ ಸಹಯೋಗದೊಂದಿಗೆ ಅಳಗಿರಿ ನೂತನ ಪಕ್ಷ ಸ್ಥಾಪನೆಗೆ ಮುಂದಾಗಿದ್ದು ಈ ಬಗ್ಗೆ ಚರ್ಚೆ ನಡೆಸಲು ಶೀಘ್ರ ಅಮಿತ್ ಶಾರನ್ನು ಭೇಟಿ ಮಾಡಲಿದ್ದಾರೆ.
ಇತ್ತೀಚೆಗಷ್ಟೇ ತಮಿಳುನಾಡಿನಲ್ಲಿ ಮಾಜಿ ಐಪಿಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಹಾಗೂ ಮಾಜಿ ಐಎಎಸ್ ಅಧಿಕಾರಿ ಅಣ್ಣಾಮಲೈ ಕೂಡ ಇತ್ತೀಚೆಗೆ ಪಕ್ಷ ಸೇರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.