ಮಾಡಾಳು ವಿರುಪಾಕ್ಷಪ್ಪ ಪುತ್ರ ಲಂಚ: ಬಿಜೆಪಿ ಭ್ರಷ್ಟಾಚಾರಕ್ಕೆ ಇನ್ನೆಂಥ ಸಾಕ್ಷ್ಯ ಬೇಕು? : ಸಿದ್ದರಾಮಯ್ಯ

By Ravi Janekal  |  First Published Mar 3, 2023, 1:59 PM IST

ನಿನ್ನೆ ಶಾಸಕ ಮಾಡಾಳ್​ ವಿರೂಪಾಕ್ಷಪ್ಪ ಪುತ್ರ ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಾನೆ. ಭ್ರಷ್ಟಾಚಾರಕ್ಕೆ ಇದಕ್ಕಿಂತ ಇನ್ನೇನು ಸಾಕ್ಷಿ ಬೇಕು ಎಂದು ಬಿಜೆಪಿ ಸರ್ಕಾರದ ದುರಾಡಳಿತ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದರು.


ಬೆಳಗಾವಿ (ಮಾ.3) : ಅಧಿಕಾರಕ್ಕೆ ಬಂದ ಮೇಲೆ ಬಿಜೆಪಿ ಒಳ್ಳೆಯ ಆಡಳಿತ ಕೊಡಲಿಲ್ಲ. ಜನರ ಪರವಾಗಿ ಕೆಲಸ ಮಾಡಲಿಲ್ಲ, ಬರೀ ಭ್ರಷ್ಟಾಚಾರ, ಲೂಟಿ ಹೊಡೆಯುದರಲ್ಲಿ ನಿರತರಾದರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇಂದು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(CM Basavaraj Bommai) ಭ್ರಷ್ಟಾಚಾರ(Curruption) ಆರೋಪಕ್ಕೆ ದಾಖಲಾತಿ ಕೇಳಿದ್ದಾರೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದನಂತರ ಭ್ರಷ್ಟಾಚಾರ, ಲೂಟಿ ಹೊಡೆಯುದರಲ್ಲೇ ನಿರತವಾಗಿದೆ. ನಿನ್ನೆ ಶಾಸಕ ಮಾಡಾಳ್​ ವಿರೂಪಾಕ್ಷಪ್ಪ(MLA Madal Virupakshappa) ಪುತ್ರ ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಾನೆ. ಭ್ರಷ್ಟಾಚಾರಕ್ಕೆ ಇದಕ್ಕಿಂತ ಇನ್ನೇನು ಸಾಕ್ಷಿ ಬೇಕು ಎಂದು ಬಿಜೆಪಿ ಸರ್ಕಾರದ ದುರಾಡಳಿತ ವಿರುದ್ಧ ಕಿಡಿ ಕಾರಿದರು.

Latest Videos

undefined

ಕರ್ನಾಟಕದ ಇತಿಹಾಸದಲ್ಲಿ 40% ಕಮಿಷನ್ ವಿಚಾರವಾಗಿ ಗುತ್ತಿಗೆದಾರರು ಸರ್ಕಾರದ ವಿರುದ್ಧ ಪ್ರಧಾನಿಗೆ ಪತ್ರ ಬರೆದರೂ, ಪ್ರಧಾನಿ ಎನೂ ಕ್ರಮ ಕೈಗೊಳ್ಳಲಿಲ್ಲ. ಪ್ರಧಾನ ಮಂತ್ರಿಗಳು(Prime minister) ಕೂಡ ಕರ್ನಾಟಕ ರಾಜ್ಯ ಸರ್ಕಾರದ ಭ್ರಷ್ಟಾಚಾರ ಬೆಂಬಲಿಸುತ್ತಿದ್ದಾರೆ ಅನ್ನೋ ಸಂದೇಶ ಜನರಿಗೆ ರವಾನೆಯಾಗಿದೆ ಎಂದು ತಿಳಿಸಿದರು.

ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್‌ನಿಂದ ಪಾಠ ಕಲಿಯುವ ಅಗತ್ಯವಿಲ್ಲ: ಸಚಿವ ಆರಗ ಜ್ಞಾನೇಂದ್ರ

ನಾಲ್ಕು ವರ್ಷದಿಂದ ಬಿಜೆಪಿ ಸರ್ಕಾರದ ಅಧಿಕಾರದಲ್ಲಿದೆ. ಕರ್ನಾಟಕದ ಜನ ಬಿಜೆಪಿಯವರ ದುರಾಡಳಿತದಿಂದ ಬೇಸತ್ತಿದ್ದಾರೆ. ಇವರು ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದವರಲ್ಲ. ಆಪರೇಷನ್ ಕಮಲ(Operation kamala) ಮಾಡಿ ಶಾಸಕರನ್ನ ಕೊಂಡುಕೊಂಡು ಹಿಂಬಾಗಿಲಿನಿಂದ ಅನೈತಿಕವಾಗಿ ಸರ್ಕಾರ ರಚನೆ ಮಾಡಿದ್ದಾರೆ ಎಂದರು.

ಪ್ರಧಾನಿ ನರೇಂದ್ರ ಮೋದಿ(PM Narendra Modi) ಅವರ ರೋಡ್ ಶೋ(Roadshow) ಕಾರ್ಯಕ್ರಮಕ್ಕೆ ಪ್ರತಿಯೊಬ್ಬರಿಗೂ 500 ಕೊಟ್ಟು ಕರೆಸಿಕೊಂಡಿದ್ದಾರೆ ಎಂದು ನಾನು ಹೇಳಿದ್ದೇ. ಆದರೆ ಬಿಜೆಪಿಯವರು ಅದನ್ನು ವಿಡಿಯೋವನ್ನು ತಿರುಚಿದ್ದಾರೆ. ವಿಡಿಯೋ ತಿರುಚುವುದರಲ್ಲಿ ಬಿಜೆಪಿಯವರು ನಿಸ್ಸೀಮರು ಎಂದರು.

ಆಪರೇಷನ್ ಮಾಡಾಳ್‌: ಸಹಾಯ ಮಾಡಿ, ತಿಮಿಂಗಲಗಳನ್ನ ಹಿಡಿದು ಹಾಕ್ತೇವೆ!

click me!