ಮಧು ಬಂಗಾರಪ್ಪ ಮನೊಲಿಸಲು ಜೆಡಿಎಸ್ ನಾಯಕರ ಯತ್ನ

Kannadaprabha News   | Asianet News
Published : Jan 20, 2021, 11:32 AM ISTUpdated : Jan 20, 2021, 12:52 PM IST
ಮಧು ಬಂಗಾರಪ್ಪ  ಮನೊಲಿಸಲು ಜೆಡಿಎಸ್ ನಾಯಕರ ಯತ್ನ

ಸಾರಾಂಶ

ಜೆಡಿಎಸ್ ಮುಖಂಡ ಮಧು ಬಂಗಾರಪ್ಪ ಅವರನ್ನು ಜೆಡಿಎಸ್ ನಾಯಕರು ಮನ ಒಲಿಸಲು ಮುಂದಾಗಿದ್ದಾರೆ. ಮತ್ತೊಂದು ಪಕ್ಷದತ್ತ ಒಲವು ತೋರುತ್ತಿದ್ದು ಈ ನಿಟ್ಟಿನಲ್ಲಿ  ಮನ ಒಲಿಸಲು ಮುಂದಾಗಿದ್ದಾರೆ. 

ಬೆಂಗಳೂರು (ಜ.20): ಜೆಡಿಎಸ್ ಪಕ್ಷದ ಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡಿರುವ ಮಧು ಬಂಗಾರಪ್ಪ ಅವರ ಮನ ಒಲಿಸುವ ಯತ್ನವನ್ನು ಪಕ್ಷ ಆರಂಭಿಸಿದೆ. 

ಇತ್ತೀಚೆಗೆ ಪಕ್ಷದಿಂದ ದೂರ ಉಳಿದಿರುವ ಮಧು ಬಂಗಾರಪ್ಪ ಅವರು ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ ಎನ್ನಲಾಗಿದೆ. 

ಈ ಹಿನ್ನೆಲೆಯಲ್ಲಿ ಅವರ ಮನ ಒಲಿಸಿ ಪಕ್ಷದಲ್ಲೇ ಉಳಿಯುವಂತೆ ಮಾಡಲು ಪಕ್ಷದ ಮುಖಂಡರಾದ ಬಸವರಾಜ್ ಹೊರಟ್ಟಿ ಮತ್ತು ಕೋನರೆಡ್ಡಿ ಅವರು ಪ್ರಯತ್ನಿಸಲಿದ್ದಾರೆ ಎಂದು ತಿಳಿದು ಬಂದಿದೆ. 

ಮಧು ಬಂಗಾರಪ್ಪರನ್ನು ಬಿಜೆಪಿಗೆ ಆಹ್ವಾನಿಸಿದ ಕುಮಾರ್ ಬಂಗಾರಪ್ಪ..!

ಸದಾಶಿವ ನಗರದಲ್ಲಿನ  ಮಧು ಬಂಗಾರಪ್ಪ ಅವರ ನಿವಾಸಕ್ಕೆ  ಬಸವರಾಜ್ ಹೊರಟ್ಟಿ ಕೋನರೆಡ್ಡಿ ತೆರಳಿ ಪಕ್ಷದಲ್ಲಿಯೇ  ಉಳಿದುಕೊಳ್ಳುವಂತೆ  ಮನವೊಲಿಕೆ ಮಾಡಲಿದ್ದಾರೆ. 

ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ  ಸೂಚನೆಯಂತೆ ನಾಯಕರು ಮಧು ಬಂಗಾರಪ್ಪ ಅವರೊಂದಿಗೆ ಚರ್ಛೆ  ನಡೆಸಲು ಮುಂದಾಗಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕನ್ನಡ ನಾಮಫಲಕ ಅಳವಡಿಕೆ ಕಡ್ಡಾಯ ನಿಯಮ ಶೀಘ್ರ ಜಾರಿ: ಸಚಿವ ಶಿವರಾಜ ತಂಗಡಗಿ
25000 ಕೋಟಿ ದಲಿತರ ಹಣ ಗ್ಯಾರಂಟಿಗೆ ಬಳಕೆ: ಸಚಿವ ಎಚ್‌.ಸಿ.ಮಹದೇವಪ್ಪ