ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಪ್ರಕಟ?

By Kannadaprabha News  |  First Published Mar 11, 2021, 9:00 AM IST

ಮಾಜಿ ಶಾಸಕ ಮಧು ಬಂಗಾರಪ್ಪ ಈಗಾಗಲೇ ಜೆಡಿಎಸ್ ತೊರೆಯಲು ಸಜ್ಜಾಗಿದ್ದು, ಶೀಘ್ರವೇ ಕಾಂಗ್ರೆಸ್‌ ಸೇರುವ ಬಗ್ಗೆ ಅಧಿಕೃತವಾಗಿ ಪ್ರಕಟಿಸಲಿದ್ದಾರೆ. 


ಬೆಂಗಳೂರು (ಮಾ.11): ಜೆಡಿಎಸ್ ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಗುರುವಾರ ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.

ಈ ಮಹತ್ವದ ಮಾತುಕತೆ ನಂತರ ಮಧು ಬಂಗಾರಪ್ಪ ಅವರು ತಮ್ಮ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಅಧಿಕೃತವಾಗಿ ಪ್ರಕಟಿಸಲಿದ್ದಾರೆ.

Tap to resize

Latest Videos

ಜನ್ಮದಿನದಂದು ಒಂದು ದೃಢ ನಿರ್ಧಾರಕ್ಕೆ ಬಂದ ಮಧು ಬಂಗಾರಪ್ಪ ...

ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ವಿರುದ್ಧ ಪ್ರಕರಣ ದಾಖಲಿಸಿರುವ ಕ್ರಮ ಖಂಡಿಸಿ ಕಾಂಗ್ರೆಸ್ ಮಾ.13 ರಂದು ಶಿವಮೊಗ್ಗ ಚಲೋ ಹಮ್ಮಿಕೊಂಡಿದ್ದು ಈ ಹಿನ್ನೆಲೆ ಅದಕ್ಕೂ ಮೊದಲೇ ಪಕ್ಷ ಸೇರಲಿದ್ದಾರೆ. 

ಕಾಂಗ್ರೆಸ್ ಪಕ್ಷ ಸೇರುವ ಸಂಬಂಧ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೊಂದಿಗೆ ಎರಡು ಬಾರಿ ಮಾತುಕತೆ ನಡೆಸಿದ್ದಾರೆ. 

click me!