ನಿಂತಿಲ್ಲ ಆಪರೇಶನ್; ಕಾಂಗ್ರೆಸ್‌ ತೊರೆದು ಬಿಜೆಪಿ ಹಿಡಿದ ಶಾಸಕ, ಇನ್ನಾರು ಜನ ಬರ್ತಾರಂತೆ!

By Suvarna NewsFirst Published Jul 12, 2020, 10:21 PM IST
Highlights

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಗೆ ಮತ್ತೊಂದು ಹೊಡೆತ/ ರಾಜೀನಾಮೆ ನೀಡಿ ಬಿಜೆಪಿ ಸೇರಿದ ಕಾಂಗ್ರೆಸ್ ಶಾಸಕ/ ನನ್ನ ಜತೆ ಇನ್ನು ಆರು ಜನ ಬರಲಿದ್ದಾರೆ

ಭೋಪಾಲ್ (ಜು. 12)  ಒಂದು ಕಡೆ ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಇಕ್ಕಟ್ಟಿನ ಸ್ಥಿತಿಗೆ ತಲುಪಿದ್ದರೆ ಇತ್ತ ಮಧ್ಯಪ್ರದೇಶದಲ್ಲಿ ಅಧಿಕಾರ ಕಳೆದುಕೊಂಡಿರುವ ಕಾಂಗ್ರೆಸ್‌ಗೆ ಮತ್ತೊಂದು ಹೊಡೆತ ಬಿದ್ದಿದೆ.

ಬುಂದೇಲ್‌ಖಂಡ್ ಪ್ರದೇಶದ ಮಲ್ಹರಾ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಕಾಂಗ್ರೆಸ್ ಶಾಸಕ ಪ್ರದ್ಯುಮ್ನ ಸಿಂಗ್ ಲೋಧಿ  ಶನಿವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಆಡಳಿತಾರೂಢ ಬಿಜೆಪಿ ನಾಯಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಲೋಧಿ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.  ರಾಜ್ಯ ಬಿಜೆಪಿ ಕಚೇರಿಯಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್ ಅವರ ನೇತೃತ್ವದಲ್ಲಿ ಲೋಧಿ ಬಿಜೆಪಿ ಸೇರ್ಪಡೆಯಾಗಿದ್ದು ತನ್ನ ಜತೆ ಇನ್ನು ಆರು ಶಾಸಕರು ಬಿಜೆಪಿ ಸೇರಲಿದ್ದಾರೆ ಎಂದು ಬಾಂಬ್ ಸಿಡಿಸಿದ್ದಾರೆ.

ರಾಜಸ್ಥಾನದಲ್ಲಿ 'ಕೈ' ಜಾರುತ್ತಿದೆ ಸರ್ಕಾರ

ನನ್ನ ಕ್ಷೇತ್ರದ ಅಭಿವೃದ್ಧಿ ಗಮನದಲ್ಲಿ ಇಟ್ಟುಕೊಂಡು ರಾಜೀನಾಮೆ ಸಲ್ಲಿಸಿದ್ದೇನೆ. ಬಿಜೆಪಿಯೊಂದಿಗೆ ಮುಂದಿನ ದಿನಗಳಲ್ಲಿ ನಿಲ್ಲಲಿದ್ದು ಜನತೆಯ ಆಶೋತ್ತರಗಳಿಗೆ ಸ್ಪಂದಿಸುತ್ತೇನೆ ಎಂದು ತಿಳಿಸಿದ್ದಾರೆ.

ಮಧ್ಯಪ್ರದೇಶಲ್ಲಿ ಆಡಳಿತಕ್ಕೆ ಏರಿದ್ದ ಕಾಂಗ್ರೆಸ್ ಸರ್ಕಾರ ಮಾರ್ಚ್ ನಲ್ಲಿ ಪತನವಾಗಿತ್ತು. ಬದಲಾದ ರಾಜಕಾರಣದಲ್ಲಿ ಕಾಂಗ್ರೆಸ್ ಪ್ರಮುಖ ನಾಯಕರಾಗಿದ್ದ ಜ್ಯೋತಿರಾಧಿತ್ಯ ಸಿಂಧಿಯಾ ಬಿಜೆಪಿ ಸೇರ್ಪಡೆಯಾಗಿದ್ದರು. 

click me!