ಲೋಕಸಭಾ ಚುನಾವಣೆಯಲ್ಲಿ ಲೀಡ್ ನೀಡದ ಬೂತ್ ಗಳಲ್ಲಿ ಅಭಿವೃದ್ಧಿ ಕೆಲಸ ಮಾಡುವುದಿಲ್ಲವೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಗಡಿ ಕ್ಷೇತ್ರ ಶಾಸಕ ಬಾಲಕೃಷ್ಣ ಇದೀಗ ನುರಿತ ಡ್ಯಾನ್ಸರ್ ಗಳು ನಾಚುವಂತೆ ಡ್ಯಾನ್ಸ್ ಮಾಡಿ ಗಮನ ಸೆಳೆದಿದ್ದಾರೆ.
ರಾಮನಗರ (ಅ.14): ಲೋಕಸಭಾ ಚುನಾವಣೆಯಲ್ಲಿ ಲೀಡ್ ನೀಡದ ಬೂತ್ ಗಳಲ್ಲಿ ಅಭಿವೃದ್ಧಿ ಕೆಲಸ ಮಾಡುವುದಿಲ್ಲವೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಗಡಿ ಕ್ಷೇತ್ರ ಶಾಸಕ ಬಾಲಕೃಷ್ಣ ಇದೀಗ ನುರಿತ ಡ್ಯಾನ್ಸರ್ ಗಳು ನಾಚುವಂತೆ ಡ್ಯಾನ್ಸ್ ಮಾಡಿ ಗಮನ ಸೆಳೆದಿದ್ದಾರೆ. ಬಿಳಿ ಅಂಗಿ, ಬಿಳಿ ಪಂಚೆ ತೊಟ್ಟು, ಕಣ್ಣಿಗೆ ಗಾಗಲ್ ಧರಿಸಿ, ತಲೆಗೆ ಟವಲ್ ಸುತ್ತಿಕೊಂಡಿದ್ದ ಬಾಲಕೃಷ್ಣ ಸಿನಿಮಾ ಸ್ಟಾರ್‌ಗೇನು ಕಡಿಮೆ ಇಲ್ಲದಂತೆ ಮಾಡಿದ ಡ್ಯಾನ್ಸ್ ಗೆ ಪ್ರೇಕ್ಷಕರೆಲ್ಲರು ಮೂಕವಿಸ್ಮಿತರಾದರು. ಅಷ್ಟಕ್ಕೂ ಇಂತಹದೊಂದು ಸನ್ನಿವೇಶಕ್ಕೆ ಸಾಕ್ಷಿಯಾಗಿದ್ದು ಪೌರ ಕಾರ್ಮಿಕರ ದಿನಾಚರಣೆ ಸಮಾರಂಭ.
ಬಿಡದಿ ಕೈಗಾರಿಕಾ ಪ್ರದೇಶದಲ್ಲಿನ ಈಗಲ್ ಟನ್ ರೆಸಾರ್ಟ್ ನಲ್ಲಿ ಪೌರ ಕಾರ್ಮಿಕರ ದಿನಾಚರಣೆ ಆಯೋಜಿಸಲಾಗಿತ್ತು. ಶಾಸಕ ಬಾಲಕೃಷ್ಣ ಅವರನ್ನು ಮುಖ್ಯ ಅತಿಥಿಗಳನ್ನಾಗಿ ಸಮಾರಂಭಕ್ಕೆ ಆಹ್ವಾನಿಸಲಾಗಿತ್ತು. ಸಾಂಪ್ರದಾಯಿಕ ಉಡುಗೆಯಾದ ಬಿಳಿ ಅಂಗಿ, ಬಿಳಿ ಪಂಚೆ ಧರಿಸಿ ಬಾಲಕೃಷ್ಣ ಆಗಮಿಸಿದ್ದರು. ವೇದಿಕೆ ಸಮಾರಂಭ ಮುಕ್ತಾಯವಾದ ನಂತರ ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪ, ಮತದಲ್ಲಿ ಮೇಲ್ಯಾವುದೋ ... ಹಾಡು ಕೇಳುತ್ತಿದ್ದಂತೆಯೇ ಶಾಸಕರು ತಾಳ ಹಾಕಲು ಆರಂಭಿಸಿದರು. ನೋಡ ನೋಡತ್ತಿದ್ದಂತೆ ಬಾಲಕೃಷ್ಣರವರು ಹಾಡಿಗೆ ಹೆಜ್ಜೆ ಹಾಕಿದರು.
ಕಾಂಗ್ರೆಸ್ ಶಾಸಕರ ಕ್ಷೇತ್ರಕ್ಕೆ ಬಿಜೆಪಿ ಕೊಟ್ಟ ಅನುದಾನವೆಷ್ಟು: ಸಚಿವ ರಾಮಲಿಂಗಾರೆಡ್ಡಿ
ಅವರೊಂದಿಗೆ ಪುರಸಭೆ ಸದಸ್ಯ ಸಿ.ಉಮೇಶ್ , ಮುಖ್ಯಾಧಿಕಾರಿ ರಮೇಶ್, ಅಧಿಕಾರಿಗಳು, ಸಿಬ್ಬಂದಿ ಹಾಗೂ ಪೌರ ಕಾರ್ಮಿಕರು ಸೇರಿದಂತೆ ಎಲ್ಲರು ಕುಣಿದು ಕುಪ್ಪಳಿಸಿದರು. ರಾಜಕಾರಣದಲ್ಲಿ ಆಕ್ರೋಶ ಭರಿತ ಮಾತುಗಳಿಂದಲೇ ಹೆಸರಾಗಿರುವ ಶಾಸಕ ಬಾಲಕೃಷ್ಣರವರು ತನ್ನೊಳಗೂ ಒಬ್ಬ ನೃತ್ಯಗಾರನಿದ್ದಾನೆ ಎಂದು ತೋರಿಸುವ ಮೂಲಕ ಅಚ್ಚರಿ ಮೂಡಿಸಿದರು. ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.
ಸಿಪಿವೈ ಫೀಲ್ಡ್ ಗೆ ಬರಲಿ ರಾಜಕೀಯ ಏನೆಂದು ತೋರಿಸ್ತೇವೆ: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಬುರುಡೆ ರಾಜ. ರಾಜಕೀಯ ಮಾಡೋದು ಅಂದರೆ ಕ್ಯಾಸೆಟ್ ಇಟ್ಟುಕೊಂಡು ಹೈಕಮಾಂಡ್ ಬಳಿ ಸುಳಿದಾಡಿದಂತಲ್ಲ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಫೀಲ್ಡ್‌ಗೆ ಬರಲಿ. ರಾಜಕೀಯ ಏನೆಂಬುದನ್ನು ತೋರಿಸುತ್ತೇವೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಸವಾಲು ಹಾಕಿದ್ದಾರೆ. ನಗರದಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿ, ತಮ್ಮನ್ನು ಸಚಿವರನ್ನಾಗಿ ಮಾಡಿದ ಬಿ.ಎಸ್.ಯಡಿಯೂರಪ್ಪರನ್ನೇ ಸಿ.ಪಿ.ಯೋಗೇಶ್ವರ್ ಕುತಂತ್ರ ಮಾಡಿ ಕೆಳಗಿಳಿಸಿದರು.
ಕುರುಕ್ಷೇತ್ರವನ್ನೇ ಬರೆದ ವ್ಯಕ್ತಿ ಇವರು: ಮುನಿರತ್ನಗೆ ತಿರುಗೇಟು ಕೊಟ್ಟ ಸಂಸದ ಸುರೇಶ್
ತಮ್ಮನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ಯೋಗೇಶ್ವರ್ರೊಂದಿಗೆ ಮೈತ್ರಿ ಮಾಡಿಕೊಳ್ಳಲು ಹೊರಟಿರುವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ನಾಚಿಕೆಯಾಗಬೇಕು ಎಂದರು. ನಮ್ಮಂತಹ ರಾಜಕಾರಣಿಯಾಗಿದ್ದರೆ ಜೀವನ ಪೂರ್ತಿ ಅವರ ನೆರಳ ಬಳಿಯೂ ಸುಳಿಯುತ್ತಿರಲಿಲ್ಲ. ಇವರು ರಾಜಕೀಯಕ್ಕಾಗಿ ಏನು ಬೇಕಾದ್ರೂ ಮಾಡುತ್ತಾರೆ. ಇದರಿಂದಲೇ ಕಾಂಗ್ರೆಸ್‌ನ ಭಯ ಎಷ್ಟಿದೆ ಎಂದು ಗೊತ್ತಾಗಿದೆ. ಇವರು ಒಂದಾಗುತ್ತಿರುವುದು ನಮ್ಮನ್ನು ಮುಗಿಸಲೇ ಹೊರತು, ರಾಜ್ಯಕ್ಕೆ, ಜಿಲ್ಲೆಗೆ ಒಳ್ಳೆಯದು ಮಾಡಲಲ್ಲ. ಇವರ ಆಟ ಹೆಚ್ಚುದಿನ ನಡೆಯುವುದಿಲ್ಲ ಎಂದು ಟೀಕಿಸಿದರು.