ಬಿ.ವೈ.ವಿಜಯೇಂದ್ರ ಕೆಳಗಿಳಿಸಲು ಮಹಾರಾಷ್ಟ್ರ ಸಿಎಂ ದೇವೇಂದ್ರಗೆ ಭಿನ್ನರ ಮೊರೆ

Published : Mar 11, 2025, 05:48 AM ISTUpdated : Mar 11, 2025, 07:39 AM IST
ಬಿ.ವೈ.ವಿಜಯೇಂದ್ರ ಕೆಳಗಿಳಿಸಲು ಮಹಾರಾಷ್ಟ್ರ ಸಿಎಂ ದೇವೇಂದ್ರಗೆ ಭಿನ್ನರ ಮೊರೆ

ಸಾರಾಂಶ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಯಾವುದೇ ಕಾರಣಕ್ಕೂ ಆ ಸ್ಥಾನದಲ್ಲಿ ಮುಂದುವರಿಸಬಾರದು ಎಂದು ಪಣತೊಟ್ಟಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಬಣದ ಮುಖಂಡರು, ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ನೆರವು ಪಡೆಯಲು ಮುಂದಾಗಿದ್ದಾರೆ.

ಬೆಂಗಳೂರು (ಮಾ.11): ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಯಾವುದೇ ಕಾರಣಕ್ಕೂ ಆ ಸ್ಥಾನದಲ್ಲಿ ಮುಂದುವರಿಸಬಾರದು ಎಂದು ಪಣತೊಟ್ಟಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಬಣದ ಮುಖಂಡರು, ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ನೆರವು ಪಡೆಯಲು ಮುಂದಾಗಿದ್ದಾರೆ. ಯತ್ನಾಳ ಅವರ ಬಣದಲ್ಲಿ ಪ್ರಬಲವಾಗಿ ಗುರುತಿಸಿಕೊಂಡಿರುವ ಶಾಸಕ ರಮೇಶ್ ಜಾರಕಿಹೊಳಿ ಅವರಿಗೆ ಮೊದಲಿನಿಂದಲೂ ದೇವೇಂದ್ರ ಫಡ್ನವೀಸ್ ಅವರ ಜತೆ ನಂಟಿದೆ. ಹಿಂದೆ ಅವರು ಕಾಂಗ್ರೆಸ್ ತೊರೆದು ಬಿಜೆಪಿಗೆ ಆಗಮಿಸುವ ವೇಳೆಯೂ ಫಡ್ನವೀಸ್ ಅವರ ನಂಟು ಕೆಲಸ ಮಾಡಿತ್ತು. ಈಗಲೂ ಅವರ ಮೂಲಕವೇ ವರಿಷ್ಠರ ಮೇಲೆ ಒತ್ತಡ ಹೇರುವ ತಂತ್ರವನ್ನು ಯತ್ನಾಳ ಬಣ ಮಾಡುತ್ತಿದೆ ಎನ್ನಲಾಗಿದೆ. 

ಆದರೆ, ಫಡ್ನವೀಸ್ ಅವರ ಸಂಪರ್ಕ ಈ ವಿಷಯದಲ್ಲಿ ಎಷ್ಟರಮಟ್ಟಿಗೆ ಪ್ರಭಾವ ಬೀರಲಿದೆ ಎಂಬುದು ಮಾತ್ರ ಖಚಿತವಿಲ್ಲ. ಯತ್ನಾಳ ಮತ್ತು ಜಾರಕಿಹೊಳಿ ಅವರು ಮೊದಲಿನಿಂದಲೂ ವಿಜಯೇಂದ್ರ ವಿರುದ್ಧ ಕಿಡಿ ಕಾರುತ್ತಲೇ ಬಂದಿದ್ದಾರೆ. ಅವರೊಂದಿಗೆ ಈಗ ಇನ್ನೂ ಕೆಲವು ನಾಯಕರು ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಬೆಂಬಲ ಸೂಚಿಸಿದ್ದಾರೆ. ಎಲ್ಲರ ಗುರಿ ಈಗ ವಿಜಯೇಂದ್ರ ಅವರನ್ನು ಮತ್ತೊಮ್ಮೆ ರಾಜ್ಯಾಧ್ಯಕ್ಷರನ್ನಾಗಿ ಮಾಡಬಾರದು ಎಂಬುದೇ ಆಗಿದೆ. ಪಕ್ಷದ ವರಿಷ್ಠರು ವಿಜಯೇಂದ್ರ ಅವರನ್ನೇ ಮುಂದುವರಿಸುತ್ತಾರೆ ಎಂಬ ನಿರೀಕ್ಷೆ ಇರುವುದರಿಂದ ಯತ್ನಾಳ ಬಣದ ಮುಖಂಡರು ತಮ್ಮ ಪ್ರಯತ್ನವನ್ನು ಮತ್ತಷ್ಟು ಚುರುಕುಗೊ‍ಳಿಸಲು ನಿರ್ಧರಿಸಿದ್ದಾರೆ.

ವಿಜಯೇಂದ್ರ ಭವಿಷ್ಯದ ಮುಖ್ಯಮಂತ್ರಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಂಘಟನಾ ಚತುರ, ಭವಿಷ್ಯದ ನಾಯಕ, ಮುಖ್ಯಮಂತ್ರಿ ಎಂದು ವೀರಶೈವ ಲಿಂಗಾಯತ ಮಹಾ ಸಂಗಮ ಸಮಾವೇಶದಲ್ಲಿ ಮಠಾಧೀಶರ ಸಮ್ಮುಖದಲ್ಲಿ ಸಮುದಾಯದ ಮುಖಂಡರು, ರಾಜಕೀಯ ಪಕ್ಷಗಳ ಮುಖಂಡರು ಬಿಜೆಪಿ ವರಿಷ್ಟರಿಗೆ ಬಹಿರಂಗ ಸಂದೇಶ ರವಾನಿಸಿದರು. ಬಿಜೆಪಿಗೆ ಯಡಿಯೂರಪ್ಪ ಅನಿವಾರ್ಯ. ಪಕ್ಷ ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬರಬೇಕಾದರೆ ವಿಜಯೇಂದ್ರರನ್ನು ಆ ಸ್ಥಾನದಲ್ಲಿ ಮುಂದುವರಿಸಬೇಕು. ಈ ಮಾತನ್ನು ಇಲ್ಲಿ ಮಾತ್ರವಲ್ಲ ವಿಜಾಪುರದಲ್ಲೂ ಹೇಳಲು ಸಿದ್ಧರಿದ್ದೇವೆ ಎಂದ ಮುಖಂಡರು, ನಾವುಗಳು ಯಡಿಯೂರಪ್ಪ ಹಾಗೂ ವಿಜಯೇಂದ್ರ ಪರವಾಗಿದ್ದೇವೆ ಎಂದು ಸಮಾವೇಶದ ಆರಂಭದಿಂದ ಕೊನೆಯವರೆಗೆ ಹೇಳಿದರು.

ಸಿದ್ದರಾಮಯ್ಯನವರು ಮಂಡಿಸಿದ್ದು ಅಲ್ಪಸಂಖ್ಯಾತರ ಓಲೈಕೆಯ ಬಜೆಟ್: ಸಂಸದ ಯದುವೀರ್ ಒಡೆಯರ್ ಟೀಕೆ

ನಗರದ ಶ್ರೀ ರೇಣುಕಾಚಾರ್ಯ ಕಲ್ಯಾಣ ಮಂಟಪದಲ್ಲಿ ಶನಿವಾರ ವೀರಶೈವ ಲಿಂಗಾಯತ ಮಹಾ ಸಂಗಮದಲ್ಲಿ ಮಾತನಾಡಿದ ಬಹುತೇಕ ಮುಖಂಡರು ಯಡಿಯೂರಪ್ಪ ಹಾಗೂ ವಿಜಯೇಂದ್ರ ಪರವಾಗಿರುವುದಾಗಿ ತಿಳಿಸಿದರು. ಚನ್ನಗಿರಿ ತಾಲೂಕಿನ ಮಾಡಳ್‌ ಮಲ್ಲಿಕಾರ್ಜುನ ಮಾತನಾಡಿ, ಇದು, ರಾಜಕೀಯ ಸಭೆ ಅಲ್ಲ. ವೀರಶೈವ ಲಿಂಗಾಯತ ಸಮಾಜದವರನ್ನು ರಾಜಕೀಯವಾಗಿ ತುಳಿಯುವ ಕೆಲಸ ನಡೆಯುತ್ತಿದೆ. ಈ ಸಂದರ್ಭದಲ್ಲಿ ನಾವು ಎಚ್ಚರವಾಗಿರಬೇಕು. ಸಿದ್ಧಾಂತದ ಹೆಸರಿನಲ್ಲಿ ಮೂಲೆ ಗುಂಪು ಮಾಡುತ್ತಿದ್ದಾರೆ. ನಮ್ಮೊಳಗೆ ಒಳ ಜಗಳ ಹಚ್ಚುವ ಕೆಲಸ ನಡೆಯುತ್ತಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಡಕೆ ಬೆಳೆಗಾರರ ನೆರವಿಗೆ ಕೇಂದ್ರ ತುರ್ತಾಗಿ ಮಧ್ಯಪ್ರವೇಶಿಸಲಿ: ಸಂಸದ ಬಿ.ವೈ.ರಾಘವೇಂದ್ರ
ರಾಜ್ಯದಲ್ಲಿ ರಾಜಕೀಯ ಹೊಲಸೆದ್ದು, ಎಲ್ಲ ಪಕ್ಷಗಳು ಗಬ್ಬೆದ್ದು ಹೋಗಿವೆ: ಕೆ.ಎಸ್.ಈಶ್ವರಪ್ಪ