
ನಾಗಪುರ: ಮಹಾರಾಷ್ಟ್ರದ ಮುನಿಸಿಪಲ್ ಮತ್ತು ನಗರ ಪಂಚಾಯತ್‌ಗಳಿಗೆ ಇತ್ತೀಚೆಗೆ ನಡೆದಿದ್ದ ಚುನಾವಣೆಯ ಫಲಿತಾಂಶ ಭಾನುವಾರ ಪ್ರಕಟವಾಗಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಭರ್ಜರಿ ಜಯ ಸಾಧಿಸಿದ್ದರೆ, ವಿಪಕ್ಷ ಮಹಾ ಅಘಾಡಿ ಕೂಟಕ್ಕೆ ಹೀನಾಯ ಸೋಲಾಗಿದೆ. ಅದರ ಬೆನ್ನಲ್ಲೇ ಇದು ಅಧಿಕಾರ ಮತ್ತು ಹಣ ದುರ್ಬಳಕೆಗೆ ಸಿಕ್ಕ ಜಯ ಎಂದು ವಿಪಕ್ಷಗಳು ಆರೋಪ ಮಾಡಿವೆ.
286 ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ 215 ಕಡೆ ಬಿಜೆಪಿ, ಶಿವಸೇನೆ ಮತ್ತು ಅಜಿತ್ ಪವಾರ್ ಬಣದ ಎನ್‌ಸಿಪಿ ಜಯ ಸಾಧಿಸಿದೆ. ಈ ಪೈಕಿ ಬಿಜೆಪಿ 129, ಶಿವಸೇನೆ 51 ಮತ್ತು ಎನ್‌ಸಿಪಿ 35 ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ. ಮತ್ತೊಂದೆಡೆ ಮಹಾ ಅಘಾಡಿ ಕೂಟ 51 ಕಡೆ ಗೆದ್ದಿದೆ. ಈ ಪೈಕಿ ಕಾಂಗ್ರೆಸ್ ಪಾಲು 35, ಉದ್ಧವ್ ಬಣದ ಶಿವಸೇನೆ 9, ಶರದ್ ಪವಾರ್ ಬಣದ ಎನ್‌ಸಿಪಿ ಗೆದ್ದ 7 ಸ್ಥಾನ ಸೇರಿವೆ.
ಪಕ್ಷದ ಗೆಲುವಿನ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೇರಿ ಪಕ್ಷದ ನಾಯಕರು ಹರ್ಷ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.