ಜಗದೀಶ್ ಶೆಟ್ಟರ್ ಅವರಿಗೆ ಲೋಕಸಭಾ ಟಿಕೆಟ್ ನೀಡುವ ವಿಚಾರದಲ್ಲಿ ವೈಯಕ್ತಿಕ ಅಭಿಪ್ರಾಯ ಏನಿಲ್ಲ. ಪಾರ್ಟಿ ಏನು ನಿರ್ಧಾರ ತೆಗೆದುಕೊಳ್ಳುತ್ತೇ ಅದಕ್ಕೆ ನಾವು ಬದ್ಧರಾಗಿರಬೇಕು. ಪಕ್ಷದ ನಿರ್ಧಾರವೇ ಅಂತಿವಾಗಿರುತ್ತೆ. ಯಾರೇ ಇದ್ದರೂ ಗೆಲ್ಲಿಸುವುದು ನಮ್ಮ ಗುರಿಯಾಗಿದೆ ಎಂದು ತಿಳಿಸಿದ ಶಾಸಕ ಮಹೇಶ ಟೆಂಗಿನಕಾಯಿ
ಬಾಗಲಕೋಟೆ(ಮಾ.14): ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಜೊತೆ ಮೊದಲು ಹೇಗಿದ್ದೇವೆಯೋ ಈಗಲೂ ಹಾಗೆ ಇದ್ದೇವೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು. ನಗರದಲ್ಲಿ ಬುಧವಾರ ಜಗದೀಶ ಶೆಟ್ಟರ್ ಜೊತೆ ಗುರು ಶಿಷ್ಯ ಸಂಬಂಧ ಹೇಗಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಜಗದೀಶ್ ಶೆಟ್ಟರ್ ನಮ್ಮ ಹಿರಿಯರು. ಅವರು ಬೇರೆ ಪಕ್ಷದಲ್ಲಿದ್ದಾಗ ಬೇರೆ, ಈಗ ಬೇರೆ. ಈಗ ನಮ್ಮ ಪಕ್ಷದಲ್ಲಿಯೇ ಇದ್ದಾರೆ, ಅದರಲ್ಲೇನು ಸಮಸ್ಯೆ ಇಲ್ಲ ಎಂದರು.
ಒಬ್ಬ ಬೂತ್ ಮಟ್ಟದ ಕಾರ್ಯಕರ್ತ ಬಿಟ್ಟು ಹೋದರೂ ಮನವೊಲಿಸಿ ಕರೆತಂದು ಮುನ್ನಡೆಯುತ್ತೇವೆ. ಈಗಲೂ ಹಾಗೆ ಎಲ್ಲರನ್ನೂ ಒಗ್ಗೂಡಿಸಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ದೇಶದ ಪ್ರಧಾನಿಯಾಗಿಸಲು ಮುಂದಾಗಬೇಕಿದೆ. ಇದರಲ್ಲಿ ವೈಯಕ್ತಿಕ ಹಿತಾಸಕ್ತಿ, ಕಾರಣಗಳಿಲ್ಲ. ಪಕ್ಷ ಸಂಘಟಿಸಿ ಮೋದಿಯವರನ್ನ 3ನೇ ಬಾರಿ ಪ್ರಧಾನಿಯನ್ನಾಗಿಸುವುದು ನಮ್ಮ ಗುರಿ ಎಂದರು.
undefined
ಮದರಸಾಗಳು ಭಯೋತ್ಪಾದಕರನ್ನು ತಯಾರು ಮಾಡುವ ಕಾರ್ಖಾನೆಗಳಾಗಿವೆ: ಪ್ರಮೋದ್ ಮುತಾಲಿಕ್ ಕಿಡಿ
ಜಗದೀಶ್ ಶೆಟ್ಟರ್ ಅವರಿಗೆ ಲೋಕಸಭಾ ಟಿಕೆಟ್ ನೀಡುವ ವಿಚಾರದಲ್ಲಿ ವೈಯಕ್ತಿಕ ಅಭಿಪ್ರಾಯ ಏನಿಲ್ಲ. ಪಾರ್ಟಿ ಏನು ನಿರ್ಧಾರ ತೆಗೆದುಕೊಳ್ಳುತ್ತೇ ಅದಕ್ಕೆ ನಾವು ಬದ್ಧರಾಗಿರಬೇಕು. ಪಕ್ಷದ ನಿರ್ಧಾರವೇ ಅಂತಿವಾಗಿರುತ್ತೆ. ಯಾರೇ ಇದ್ದರೂ ಗೆಲ್ಲಿಸುವುದು ನಮ್ಮ ಗುರಿಯಾಗಿದೆ ಎಂದು ತಿಳಿಸಿದರು.
ಧಾರವಾಡ ಲೋಕಸಭಾ ಕ್ಷೇತ್ರದ ಟಿಕೆಟ್ ಬದಲಾವಣೆ ಕೂಗು ಕುರಿತು ಪ್ರತಿಕ್ರಿಯಿಸಿದ ಅವರು, ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಒಳ್ಳೆಯ ಕೆಲಸ ಮಾಡಿದ್ದಾರೆ. ಈ ಹಿಂದೆ ಹಲವು ಸಂದರ್ಭಗಳಲ್ಲಿ ಕೇಂದ್ರ ಮತ್ತು ರಾಜ್ಯದ ಮಧ್ಯೆ ಸಂಪರ್ಕ ಸೇತುವೆಯಾಗಿ ಕೆಲಸ ಮಾಡಿದ್ದಾರೆ. ಸ್ಥಳೀಯವಾಗಿ ಎಲ್ಲರ ಅಭಿಪ್ರಾಯ ನೀಡಲಾಗಿದೆ. ಪಕ್ಷ ಅಂತಿಮವಾಗಿ ನಿರ್ಧಾರ ಮಾಡುತ್ತೆ ಎಂದು ಸ್ಪಷ್ಟಪಡಿಸಿದರು.